< ಲೂಕನು 8 >

1 ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,
و بعد از آن واقع شد که او در هر شهری ودهی گشته، موعظه می‌نمود و به ملکوت خدا بشارت می‌داد و آن دوازده با وی می‌بودند.۱
2 ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು,
و زنان چند که از ارواح پلید و مرضها شفا یافته بودند، یعنی مریم معروف به مجدلیه که از اوهفت دیو بیرون رفته بودند،۲
3 ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.
و یونا زوجه خوزا، ناظر هیرودیس و سوسن و بسیاری از زنان دیگرکه از اموال خود او را خدمت می‌کردند.۳
4 ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ,
و چون گروهی بسیار فراهم می‌شدند و از هرشهر نزد او می‌آمدند مثلی آورده، گفت۴
5 “ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.
که «برزگری بجهت تخم کاشتن بیرون رفت. و وقتی که تخم می‌کاشت بعضی بر کناره راه ریخته شد وپایمال شده، مرغان هوا آن را خوردند.۵
6 ಬೇರೆ ಕೆಲವು ಬೀಜಗಳು ಬಂಡೆಯ ಮೇಲೆ ಬಿದ್ದವು. ಅವು ಮೊಳೆತು ಬಂದರೂ ತೇವವಿಲ್ಲದ ಕಾರಣ ಒಣಗಿಹೋದವು.
وپاره‌ای بر سنگلاخ افتاده چون رویید از آنجهت که رطوبتی نداشت خشک گردید.۶
7 ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳೊಳಗೆ ಬಿದ್ದವು. ಮುಳ್ಳುಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅದುಮಿಬಿಟ್ಟವು.
و قدری درمیان خارها افکنده شد که خارها با آن نمو کرده آن را خفه نمود.۷
8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು.
و بعضی در زمین نیکو پاشیده شده رویید و صد چندان ثمر آورد.» چون این بگفت ندا در‌داد «هر‌که گوش شنوا دارد بشنود.»۸
9 ಯೇಸುವಿನ ಶಿಷ್ಯರು ಈ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಿದಾಗ,
پس شاگردانش از او سوال نموده، گفتند که «معنی‌این مثل چیست؟»۹
10 ೧೦ ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.
گفت: «شما رادانستن اسرار ملکوت خدا عطا شده است و لیکن دیگران را به واسطه مثلها، تا نگریسته نبینند وشنیده درک نکنند.۱۰
11 ೧೧ ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.
اما مثل این است که تخم کلام خداست.۱۱
12 ೧೨ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.
و آنانی که در کنار راه هستندکسانی می‌باشند که چون می‌شنوند، فور ابلیس آمده کلام را از دلهای ایشان می‌رباید، مبادا ایمان آورده نجات یابند.۱۲
13 ೧೩ ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.
و آنانی که بر سنگلاخ هستند کسانی می‌باشند که چون کلام رامی شنوند آن را به شادی می‌پذیرند و اینها ریشه ندارند پس تا مدتی ایمان می‌دارند و در وقت آزمایش، مرتد می‌شوند.۱۳
14 ೧೪ ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.
اما آنچه در خارهاافتاد اشخاصی می‌باشند که چون شنوند می‌روند و اندیشه های روزگار و دولت و لذات آن ایشان راخفه می‌کند و هیچ میوه به‌کمال نمی رسانند.۱۴
15 ೧೫ ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.
اما آنچه در زمین نیکو واقع گشت کسانی می‌باشند که کلام را به دل راست و نیکو شنیده، آن را نگاه می‌دارند و با صبر، ثمر می‌آورند.۱۵
16 ೧೬ “ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
«و هیچ‌کس چراغ را افروخته، آن را زیرظرفی یا تختی پنهان نمی کند بلکه بر چراغدان می‌گذارد تا هر‌که داخل شود روشنی را ببیند.۱۶
17 ೧೭ ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು.
زیرا چیزی نهان نیست که ظاهر نگردد و نه مستور که معلوم و هویدا نشود.۱۷
18 ೧೮ ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.
پس احتیاطنمایید که به چه طور می‌شنوید، زیرا هر‌که داردبدو داده خواهد شد و از آنکه ندارد آنچه گمان هم می‌برد که دارد، از او گرفته خواهد شد.»۱۸
19 ೧೯ ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
و مادر وبرادران او نزد وی آمده به‌سبب ازدحام خلق نتوانستند او را ملاقات کنند.۱۹
20 ೨೦ ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ,
پس او را خبر داده گفتند: «مادر و برادرانت بیرون ایستاده می‌خواهند تو را ببینند.»۲۰
21 ೨೧ ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.
در جواب ایشان گفت: «مادر و برادران من اینانند که کلام خدا را شنیده آن را به‌جا می‌آورند.»۲۱
22 ೨೨ ಒಂದು ದಿನ ಯೇಸು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ, “ಸಮುದ್ರದ ಆಚೇ ದಡಕ್ಕೆ ಹೋಗೋಣ” ಎಂದು ಹೇಳಲು, ಅವರು ದೋಣಿಯನ್ನು ಸಾಗಿಸಿ ಹೊರಟರು.
روزی از روزها او با شاگردان خود به کشتی سوار شده، به ایشان گفت: «به سوی آن کناردریاچه عبور بکنیم.» پس کشتی را حرکت دادند.۲۲
23 ೨೩ ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.
و چون می‌رفتند، خواب او را در ربود که ناگاه طوفان باد بر دریاچه فرود آمد، بحدی که کشتی از آب پر می‌شد و ایشان در خطر افتادند.۲۳
24 ೨೪ ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.
پس نزد او آمده او را بیدار کرده، گفتند: «استادا، استادا، هلاک می‌شویم.» پس برخاسته باد وتلاطم آب را نهیب داد تا ساکن گشت و آرامی پدید آمد.۲۴
25 ೨೫ ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.
پس به ایشان گفت: «ایمان شما کجااست؟» ایشان ترسان و متعجب شده با یکدیگرمی گفتند که «این چطور آدمی است که بادها وآب را هم امر می‌فرماید و اطاعت او می‌کنند.»۲۵
26 ೨೬ ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು.
و به زمین جدریان که مقابل جلیل است، رسیدند.۲۶
27 ೨೭ ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.
چون به خشکی فرود آمد، ناگاه شخصی از آن شهر‌که از مدت مدیدی دیوهاداشتی و رخت نپوشیدی و در خانه نماندی بلکه در قبرها منزل داشتی دچار وی گردید.۲۷
28 ೨೮ ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.
چون عیسی را دید، نعره زد و پیش او افتاده به آواز بلندگفت: «ای عیسی پسر خدای تعالی، مرا با تو چه‌کار است؟ از تو التماس دارم که مرا عذاب ندهی.»۲۸
29 ೨೯ ಏಕೆಂದರೆ, ಈ ಮನುಷ್ಯನನ್ನು ಬಿಟ್ಟುಹೋಗಬೇಕೆಂದು ಆತನು ಆ ದೆವ್ವಕ್ಕೆ ಅಪ್ಪಣೆ ಕೊಟ್ಟಿದ್ದನು. ಅದು ಬಹು ಕಾಲದಿಂದ ಅವನನ್ನು ಹಿಡಿದಿತ್ತು; ಇದಲ್ಲದೆ ಅವನನ್ನು ಕಾವಲಲ್ಲಿಟ್ಟು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿಸಿದ್ದರೂ ಅವನು ಅವುಗಳನ್ನು ಮುರಿದುಹಾಕುತ್ತಿದ್ದನು; ಮತ್ತು ಆ ದೆವ್ವವು ಅವನನ್ನು ನಿರ್ಜನ ಪ್ರದೇಶಗಳಿಗೆ ಓಡಿಸುತ್ತಿತ್ತು.
زیرا که روح خبیث را امر فرموده بودکه از آن شخص بیرون آید. چونکه بارها او راگرفته بود، چنانکه هر‌چند او را به زنجیرها وکنده‌ها بسته نگاه می‌داشتند، بندها را می‌گسیخت و دیو او را به صحرا می‌راند.۲۹
30 ೩೦ ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.
عیسی از اوپرسیده، گفت: «نام تو چیست؟» گفت: «لجئون.» زیرا که دیوهای بسیار داخل او شده بودند.۳۰
31 ೩೧ ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು. (Abyssos g12)
واز او استدعا کردند که ایشان را نفرماید که به هاویه روند. (Abyssos g12)۳۱
32 ೩೨ ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,
و در آن نزدیکی گله گراز بسیاری بودند که در کوه می‌چریدند. پس از او خواهش نمودند که بدیشان اجازت دهد تا در آنها داخل شوند. پس ایشان را اجازت داد.۳۲
33 ೩೩ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು. ಆ ಹಂದಿಗಳು ಉಗ್ರವಾಗಿ ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸಿರುಕಟ್ಟಿ ಸತ್ತು ಹೋದವು.
ناگاه دیوها از آن آدم بیرون شده، داخل گرازان گشتند که آن گله ازبلندی به دریاچه جسته، خفه شدند.۳۳
34 ೩೪ ಮೇಯಿಸುವವರು ನಡೆದದ್ದನ್ನು ಕಂಡು ಓಡಿ ಹೋಗಿ ಆ ಊರಲ್ಲಿಯೂ ಹಳ್ಳಿಗಳಲ್ಲಿಯೂ ಅದನ್ನು ತಿಳಿಸಲು,
چون گرازبانان ماجرا را دیدند فرار کردند و در شهر واراضی آن شهرت دادند.۳۴
35 ೩೫ ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.
پس مردم بیرون آمده تا آن واقعه را ببینندنزد عیسی رسیدند و چون آدمی را که از او دیوهابیرون رفته بودند، دیدند که نزد پایهای عیسی رخت پوشیده و عاقل گشته نشسته است ترسیدند.۳۵
36 ೩೬ ನಡೆದ ಸಂಗತಿಯನ್ನು ನೋಡಿದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು,
و آنانی که این را دیده بودند ایشان راخبر دادند که آن دیوانه چطور شفا یافته بود.۳۶
37 ೩೭ ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.
پس تمام خلق مرزوبوم جدریان از او خواهش نمودند که از نزد ایشان روانه شود، زیرا خوفی شدید بر ایشان مستولی شده بود. پس او به کشتی سوار شده مراجعت نمود.۳۷
38 ೩೮ ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ,
اما آن شخصی که دیوها از وی بیرون رفته بودند از او درخواست کرد که با وی باشد. لیکن عیسی او را روانه فرموده، گفت:۳۸
39 ೩೯ ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.
«به خانه خود برگرد و آنچه خدا با تو کرده است حکایت کن.» پس رفته درتمام شهر از آنچه عیسی بدو نموده بود موعظه کرد.۳۹
40 ೪೦ ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು.
و چون عیسی مراجعت کرد خلق او راپذیرفتند زیرا جمیع مردم چشم به راه اومی داشتند.۴۰
41 ೪೧ ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.
که ناگاه مردی، یایرس نام که رئیس کنیسه بود به پایهای عیسی افتاده، به اوالتماس نمود که به خانه او بیاید.۴۱
42 ೪೨
زیرا که او رادختر یگانه‌ای قریب به دوازده ساله بود که مشرف بر موت بود. و چون می‌رفت خلق بر اوازدحام می‌نمودند.۴۲
43 ೪೩ ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.
ناگاه زنی که مدت دوازده سال به استحاضه مبتلا بود و تمام مایملک خود را صرف اطبانموده و هیچ‌کس نمی توانست او را شفا دهد،۴۳
44 ೪೪ ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.
از پشت سر وی آمده، دامن ردای او را لمس نمود که در ساعت جریان خونش ایستاد.۴۴
45 ೪೫ ಆಗ ಯೇಸುವು, “ನನ್ನನ್ನು ಮುಟ್ಟಿದವರಾರು?” ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, “ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರಲ್ಲಾ” ಅಂದನು.
پس عیسی گفت: «کیست که مرا لمس نمود.» چون همه انکار کردند، پطرس و رفقایش گفتند: «ای استاد مردم هجوم آورده بر تو ازدحام می‌کنند ومی گویی کیست که مرا لمس نمود؟»۴۵
46 ೪೬ ಆದರೆ ಯೇಸುವು, “ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು” ಅಂದಾಗ,
عیسی گفت: «البته کسی مرا لمس نموده است، زیرا که من درک کردم که قوتی از من بیرون شد.»۴۶
47 ೪೭ ಆ ಹೆಂಗಸು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಯೇಸುವಿಗೆ ಅಡ್ಡಬಿದ್ದು ತಾನು ಇಂಥ ಕಾರಣದಿಂದ ಮುಟ್ಟಿದೆನೆಂತಲೂ ಮುಟ್ಟಿದ ಕೂಡಲೆ ತನಗೆ ವಾಸಿಯಾಯಿತೆಂದೂ ಎಲ್ಲರ ಮುಂದೆ ತಿಳಿಸಿದಳು.
چون آن زن دید که نمی تواند پنهان ماند، لرزان شده، آمد و نزد وی افتاده پیش همه مردم گفت که به چه سبب او را لمس نمود و چگونه فور شفا یافت.۴۷
48 ೪೮ ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು” ಎಂದು ಹೇಳಿದನು.
وی را گفت: «ای دختر خاطرجمع دار، ایمانت تو را شفا داده است، به سلامتی برو.»۴۸
49 ೪೯ ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, “ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ” ಅಂದನು.
و این سخن هنوز بر زبان او بود که یکی ازخانه رئیس کنیسه آمده به وی گفت: «دخترت مرد. دیگر استاد را زحمت مده.»۴۹
50 ೫೦ ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು.
چون عیسی این را شنید توجه نموده به وی گفت: «ترسان مباش، ایمان آور و بس که شفا خواهد یافت.»۵۰
51 ೫೧ ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ.
و چون داخل خانه شد، جز پطرس و یوحنا ویعقوب و پدر و مادر دختر هیچ‌کس را نگذاشت که به اندرون آید.۵۱
52 ೫೨ ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡಿದುಕೊಳ್ಳುತ್ತಾ ಇದ್ದರು. ಯೇಸು ಅವರಿಗೆ, “ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ” ಅನ್ನಲು,
و چون همه برای او گریه وزاری می‌کردند او گفت: «گریان مباشید نمرده بلکه خفته است.»۵۲
53 ೫೩ ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು.
پس به او استهزا کردندچونکه می‌دانستند که مرده است.۵۳
54 ೫೪ ಆದರೆ ಆತನು ಆಕೆಯ ಕೈ ಹಿಡಿದು, “ಮಗಳೇ, ಎದ್ದೇಳು” ಎಂದು ಕೂಗಿ ಹೇಳಿದನು.
پس او همه را بیرون کرد و دست دختر را گرفته صدا زد وگفت: «ای دختر برخیز.»۵۴
55 ೫೫ ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.
و روح او برگشت وفور برخاست. پس عیسی فرمود تا به وی خوراک دهند.۵۵
56 ೫೬ ಆಕೆಯ ತಂದೆತಾಯಿಗಳು ಬೆರಗಾದರು. ಆತನು, ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಅವರಿಗೆ ಆಜ್ಞಾಪಿಸಿದನು.
و پدر و مادر او حیران شدند. پس ایشان را فرمود که هیچ‌کس را از این ماجراخبر ندهند.۵۶

< ಲೂಕನು 8 >