< ಮಲಾಕಿಯನು 2 >

1 ಯಾಜಕರೇ, ಈ ಅಪ್ಪಣೆಯು ಈಗ ನಿಮಗಾಗಿದೆ.
И сега, ето, заповедта, която се дава на вас, свещеници.
2 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.
Ако не послушате, и ако не вземете присърце Да отдадете слава на името Ми, Казва Господ на Силите, Тогава ще пратя върху вас проклетията, И ще прокълна благословията ви; Дори ги проклех вече, Понеже не вземате това присърце.
3 ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.
Ето, Аз ще разваля семето ви, И ще намажа лицата ви с нечистотии, Нечистотиите от жертвите ви; И ще бъдете отнесени заедно с тях,
4 ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
И ще познаете, Че Аз ви пратих тая заповед, За да бъде потвърден заветът ми с Левия, Казва Господ на Силите.
5 “ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು.
Заветът Ми беше с него за живот и за мир, Който и му дадох заради страха, С който Ми се боеше и се страхуваше от името Ми.
6 ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.
Законът на истината беше в устата му, И неправда не се намери в устните му; Ходеше с Мене в мир и правота, И отвърна мнозина от беззаконие.
7 ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;
Понеже устните на свещеника трябва да пазят знание, И от неговите уста трябва людете да искат закона. Защото той е посланик на Господа на Силите.
8 “ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Но вие се отклонихте от пътя, Направихте мнозина да се спъват в закона, Извратихте завета направен с Левия, Казва Господ на Силите.
9 “ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”
Затова Аз ви направих презряни И унижени пред всичките люде, Защото не сте опазили пътищата Ми, Но сте били лицеприятни относно закона.
10 ೧೦ ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?
Нямаме ли ние всички един Отец? Не един ли Бог ни е създал? Тогава защо се обхождаме коварно всеки против брата си Та оскверняваме завета направен с бащите ни?
11 ೧೧ ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.
Юда постъпи коварно, И гнусота се извърши в Израил и в Ерусалим; Защото Юда оскверни светилището на Господа, което Той люби, И се ожени за дъщеря на чужд бог.
12 ೧೨ ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು.
Господ ще изтреби от Якововите шатри Човек, който прави това, Както оня, който поучава това, така и оня, който го слуша, И оня, който донася принос Господу на Силите.
13 ೧೩ ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.
Правите още и това: Покривате олтара на Господа със сълзи С плач и със въздишки, Поради, което Той не поглежда вече приноса, Нито го приема с благоволение от ръката ви.
14 ೧೪ “ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.
И пак казвате: Защо? Защото Господ стана свидетел Между тебе и жената на младостта ти Към която си постъпил невярно, При все че ти е съпруга и заветната жена,
15 ೧೫ ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”
Защото не прави ли Той двамата един човек, Ако и да имаше още от духа на живота? И защо един? За да очаква набожно потомство. Затова внимавайте в похотите си, И никой да не постъпва невярно към жената на младостта си.
16 ೧೬ ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನಾನು ಪತ್ನಿತ್ಯಾಗವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.”
Защото, казва Господ, Израилевия Бог: Аз мразя напускане, - И онзи, който покрива дрехите си с насилие, Казва Господ на Силите. Затова внимавайте в похотите си, Да не би да постъпвате невярно.
17 ೧೭ ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.
Дотегнахте Господу с думите си; Но пак казвате: С какво Му дотегнахме? С това, дето думате: Всеки, който върши зло, Добър е пред Господа, и Той благоволява в тях; Иначе, къде е Бог на правосъдието?

< ಮಲಾಕಿಯನು 2 >