< ಮಾರ್ಕನು 11 >

1 ಅವರು ಯೆರೂಸಲೇಮಿಗೆ ಸಮೀಪಿಸಿ ಬೆತ್ಫಗೆ ಹಾಗೂ ಬೇಥಾನ್ಯದ ಬಳಿಯಲ್ಲಿರುವ ಎಣ್ಣೆಮರಗಳ ಗುಡ್ಡಕ್ಕೆ ಬಂದಾಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,
И когато се приближаваха към Ерусалим, до Витфагия и Витания при Елеонския хълм, изпраща двама от учениците Си и казва им:
2 “ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ.
Идете в селото, което е насреща ви, и щом влезете в него, ще намерите вързано осле, което никой човек не е още възсядал; отвържете го и го докарайте.
3 ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತನಿಗೆ ಅಗತ್ಯವಾಗಿದೆ’ ಅನ್ನಿರಿ, ಅವರು ಬೇಗನೆ ಅದನ್ನು ಕಳುಹಿಸಿಕೊಡುವರು” ಎಂದು ಹೇಳಿ ಕಳುಹಿಸಿದನು.
И ако някой ви рече: Защо правите това? Кажете: На Господа трябва; и веднага ще го прати тук.
4 ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು.
И тъй, те отидоха и намериха едно осле, вързано до вратата, вън край пътя, и отвързват го.
5 ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದರು.
И някои от стоящите там им казаха: Какво правите та отвързвате ослето?
6 ಅದಕ್ಕೆ ಯೇಸು ಹೇಳಿದಂತೆಯೇ ಅವರು ಹೇಳಿದರು ಆಗ ಜನರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟುಕೊಟ್ಟರು.
А те им казаха, както бе заръчал Исус; и оставиха ги.
7 ಶಿಷ್ಯರು ಆ ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು.
И докарват ослето при Исуса, и намятат на него дрехите си; и Той го възседна.
8 ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು.
И мнозина напостлаха дрехите си по пътя, а други - клони, като ги сечаха от нивите.
9 ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು: “ಹೊಸನ್ನ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;
И тия, които вървяха отпред и тия, които идеха изподире, викаха: Осанна! Благословен, Който иде в Господното име!
10 ೧೦ ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದವುಂಟಾಗಲಿ; ಮೇಲಣ ಲೋಕಗಳಲ್ಲಿ ಹೊಸನ್ನ” ಎಂದು ಆರ್ಭಟಿಸಿದರು.
Благословено градущето царство на баща ни Давида [което иде в Господното име]; осанна във висините!
11 ೧೧ ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು.
И влезе Исус в Ерусалим, в храма, и, като разгледа всичко, понеже вече се бе свечерило, отиде във Витания с дванадесетте.
12 ೧೨ ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು.
А на сутринта, когато излязоха от Витания, Той огладня.
13 ೧೩ ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.
И като видя отдалеч една разлистила се смоковница, дойде дано би намерил нещо на нея; но като дойде до нея, не намери нищо, само едни листа, защото не беше време за смокини.
14 ೧೪ ಆಗ ಯೇಸು ಆ ಮರಕ್ಕೆ, “ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು. (aiōn g165)
И Той проговори, думайки й: Отсега нататък никой да не яде плод от тебе до века. И учениците Му чуха това. (aiōn g165)
15 ೧೫ ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;
И дойдоха в Ерусалим; Исус като влезе в храма, почна да изпъжда ония, които продаваха, и ония, които купуваха в храма, и прекатури масите на среброменителите и столовете на ония, които продаваха гълъбите.
16 ೧೬ ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ.
И не позволяваше да пренесе някой какъвто и да било съд през храма.
17 ೧೭ ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.
И поучаваше, казвайки им: Не е ли писано, "Домът ми ще се нарече молитвен дом за всичките народи"? а вие го направихте разбойнически вертеп".
18 ೧೮ ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.
И главните свещеници и книжниците чуха това; и търсеха начин как да Го погубят, защото се бояха от Него, понеже целият народ се чудеше на учението Му.
19 ೧೯ ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.
А всякога на мръкване Той излизаше вън от града.
20 ೨೦ ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.
И тъй, като минаваха сутринта, видяха смоковницата изсъхнала от корен.
21 ೨೧ ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ
И Петър си спомни и Му каза: Учителю, виж, смоковницата, която ти прокле, изсъхнала.
22 ೨೨ ಯೇಸು ಹೇಳಿದ್ದೇನಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ.
А Исус в отговор им каза: Имайте вяра в Бога.
23 ೨೩ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
Истина ви казвам: Който рече на тая планина: Дигни се и хвърли се в морето, и не се усъмни в сърцето си, но повярва, че онова, което казва, се сбъдва, ще му стане.
24 ೨೪ ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
Затова ви казвам: Всичко каквото поискате в молитва вярвайте, че сте го получили, и ще ви се сбъдне.
25 ೨೫ ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.
И когато се изправяте на молитва, прощавайте, ако имате нещо против някого, за да прости и Отец ви, Който е на небесата, вашите прегрешения.
26 ೨೬ ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
[Но ако вие не прощавате, то нито Отец ви, Който е на небесата, ще ви прости съгрешенията].
27 ೨೭ ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು,
И дохождат пак в Ерусалим; и когато ходеше в храма, идват при Него главните свещеници, книжниците и старейшините, и Му казват:
28 ೨೮ “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು.
С каква власт правиш това? Или кой Ти е дал тая власт да правиш това?
29 ೨೯ ಯೇಸು ಅವರಿಗೆ, “ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ.
Исус им рече: Ще ви задам и Аз един въпрос; отговорете Ми, и Аз ще ви кажа с каква власт правя това.
30 ೩೦ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಿರಿ ಅಂದನು.
Йоановото кръщение от небето ли беше, или от човеците? Отговорете ми.
31 ೩೧ ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ’ ಅಂದಾನು;
И те разискваха помежду си, думайки: Ако речем - От небето, ще каже - Тогава защо не го повярвахте?
32 ೩೨ ‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.
Но ако речем: От човеците, - бояха се от народа; защото всички искрено считаха Иоана за пророк.
33 ೩೩ ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು.
И тъй, в отговор на Исуса казаха: Не знаем. Исус им рече: Нито Аз ви казвам с каква власт правя това.

< ಮಾರ್ಕನು 11 >