< ಮಾರ್ಕನು 13 >

1 ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು.
In ko je šel iz tempeljna, reče mu eden učencev njegovih: Učenik, glej, kakošno kamenje in kakošne zidine!
2 ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.
In odgovarjajoč Jezus, reče mu: Vidiš té-le zidine velike? Ne bo ostal kamen na kamenu, kteri se ne bi podrl.
3 ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,
In ko je sedel na Oljskej gori tempeljnu nasproti, vpraševali so ga posebej Peter in Jakob in Janez in Andrej:
4 ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು.
Povéj nam, kedaj bo to? in kaj bo znamenje, kedar se ima vse to izpolniti?
5 ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.
Jezus jim pa odgovorí in začne praviti: varujte se, da vas kdo ne premoti!
6 ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.
Kajti veliko jih bo prišlo v ime moje, govoreč: Jaz sem Kristus; in veliko jih bodo premotili.
7 ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
Kedar pa zaslišite boje in glasove o bojih, ne ustrašite se! Kajti to mora biti. Ali to še ni konec.
8 ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
Kajti vstal bo narod na narod, in kraljestvo na kraljestvo; in potresi bodo po krajih, in lakote bodo in prekucije.
9 “ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,
Začetek nadlogam je to. A vi se varujte! Kajti izročevali vas bodo sodnijam in shajališčem; bičali vas bodo, in pred vladarje in kralje vas popeljejo za voljo mene, njim za pričo.
10 ೧೦ ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.
In pri vseh narodih se mora poprej oznaniti evangelj.
11 ೧೧ “ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,
Kedar vas pa popeljejo, da vas izročé, ne skrbite naprej, kaj bi govorili, in ne premišljujte! nego kar vam se bo dalo tisto uro, to govorite: ker ne boste govorili vi, nego Duh sveti.
12 ೧೨ ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,
Izdajal bo pa brat brata na smrt, in oče sina; in otroci bodo vstali zoper roditelje, in morili jih bodo.
13 ೧೩ ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”
In sovražili vas bodo vsi za voljo imena mojega; kdor pa pretrpí do konca, ta se bo zveličal.
14 ೧೪ “ಇದಲ್ಲದೆವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
A kedar ugledate "gnjusobo razdevanja," za ktero je povedal prerok Danijel, da stojí, kjer ne bi imela, (kdor bere, naj ume!) tedaj naj tisti, kteri so v Judeji, zbežé na gore.
15 ೧೫ ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.
A kdor je na strehi, ne stopaj dol v hišo, in ne hódi noter, da bi kaj vzel iz hiše svoje.
16 ೧೬ ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ.
In kdor je na polji, naj se ne vrača, da vzeme plašč svoj.
17 ೧೭ “ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ!
Gorjé pa nosečim in doječim v tistih dnéh!
18 ೧೮ ಆ ದಿನಗಳುಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ.
Molite pa, naj ne bo beg vaš po zimi.
19 ೧೯ ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.
Kajti tisti dnevi bodo stiska, kakoršne ni bilo od začetka stvarjenja, ktero je stvaril Bog, doslej, in je tudi ne bo.
20 ೨೦ ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.
In ko ne bi bil Gospod prikrajšal dnî, to se ne bi noben človek zveličal; ali za voljo izvoljencev, ktere je izvolil, prikrajšal je dní.
21 ೨೧ “ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.
In če vam tedaj kdo reče: Glej, tu je Kristus; ali: Glej, ondej je, ne verjemite.
22 ೨೨ ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
Kajti vstali bodo lažnjivi kristusi in lažnjivi preroki, in delali bodo znamenja in čudeže, da bi premotili, ko bi bilo mogoče, tudi izvoljence.
23 ೨೩ ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.
A vi se varujte; glej, povedal sem vam vse poprej.
24 ೨೪ ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.
Tiste dní pa, po tej stiski, otemnelo bo solnce in mesec ne bo dajal svetlobe svoje,
25 ೨೫ ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’
In zvezde nebeške bodo padale, in sile, ktere so na nebesih, pregibale se bodo.
26 ೨೬ ಆಗಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.
In tedaj bodo ugledali sina človečjega, da gre na oblakih z veliko močjó in slavo.
27 ೨೭ ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”
In tedaj bo poslal angelje svoje, in zbral bo izvoljence svoje od čveterih vetrov, od konca zemlje do kraja neba.
28 ೨೮ “ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.
A od smokve se naučite priliko: Kedar se veja njena pomladí, in požene liste, véste, da je blizu pomlad;
29 ೨೯ ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.
Tako tudi vi, kedar ugledate, da se te reči godé, védite, da je blizu pri vratih.
30 ೩೦ ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
Resnično vam pravim, da ne bo prešel ta rod, dokler se vse te reči ne zgodé.
31 ೩೧ ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”
Nebo in zemlja bosta prešla; a besede moje ne bodo nikoli prešle.
32 ೩೨ “ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.
Za tisti dan in uro pa nihče ne vé, tudi angelji na nebu ne, tudi sin ne, razen oče.
33 ೩೩ ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವುಎಚ್ಚರವಾಗಿರಿ, ಜಾಗರೂಕರಾಗಿರಿ.
Pazite, čujte in molite, ker ne véste, kedaj je čas.
34 ೩೪ ಅದುಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
Kakor je človek, kteri je odpotoval, zapustil dom svoj, in dal hlapcem svojim oblast, in vsakemu svoje delo, in zapovedal vratarju, da naj čuje.
35 ೩೫ “ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!
Čujte torej, (ker ne véste, kedaj bo prišel hišni gospodar zvečer, ali o polnoči, ali o petelinjem petji, ali zjutraj; )
36 ೩೬ ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು.
Da ne pride nenadoma, in vas ne najde spéčih.
37 ೩೭ ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು.
Kar pa vam pravim, pravim vsem: Čujte!

< ಮಾರ್ಕನು 13 >