< ಮಾರ್ಕನು 2 >

1 ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.
След известно време, Той пак влезе в Капернаум; и разчу се че бил в къщата.
2 ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.
И мнозина се събраха, така щото и около вратата не можаха да се поберат; и Той им говореше словото.
3 ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.
Дохождат и донасят при Него един паралитик. Четирима го носеха.
4 ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.
И като не можаха да се приближат до Него, поради народа, разкриха покрива на къщата, гдето беше, пробиха го и пуснаха постелката, на която лежеше паралитикът.
5 ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
А Исус, като видя вярата им, каза на паралитика: Синко, прощават ти се греховете.
6 ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು;
А имаше там някои от книжниците, които седяха и размишляваха в сърцата си:
7 “ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.
Тоя защо говори така? Той богохулствува. Кой може да прощава грехове, освен един Бог?
8 ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?
Исус, като разбра веднага с духа Си, че така размишляват в себе си, рече им: Защо размишлявате това в сърцата си?
9 ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?
Кое е по-лесно, да река на паралитика: Прощават ти се греховете, или да река: Стани, вдигни постелката си и ходи?
10 ೧೦ ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ
Но за да познаете, че Човешкият Син има власт на земята да прощава грехове, (казва на паралитика):
11 ೧೧ “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು.
Тебе казвам: Стани, вдигни си постелката и иди у дома си.
12 ೧೨ ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.
И той стана, веднага вдигна постелката и излезе пред всичките; така щото всички се зачудиха и славеха Бога, и думаха: Никога не сме виждали такова нещо.
13 ೧೩ ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು.
И пак излезе край езерото; и цялото множество идеше при Него, и Той ги поучаваше.
14 ೧೪ ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
Като минаваше видя Левия Алфеев седящ в бирничеството, и каза му: Върви след Мене. И той стана и отиде след Него.
15 ೧೫ ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.
И когато Исус седеше на трапезата в къщата му, заедно с Него и учениците Му насядаха и много бирници и грешници; защото бяха мнозина и отиваха подир Него.
16 ೧೬ ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
Тогава книжниците, които бяха от фарисеите, като видяха, че Той яде с грешниците и бирниците, казаха на учениците Му: Защо яде и пие с бирниците и грешниците?
17 ೧೭ ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
А Исус, като чу това, каза им: Здравите нямат нужда от лекар, а болните; не съм дошъл да призова праведните, но грешниците (на покаяние).
18 ೧೮ ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
А Йоановите ученици и фарисеите постеха; и дохождат и казват Му: Защо постят Йоановите и фарисейските ученици, а Твоите не постят?
19 ೧೯ ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.
А Исус им рече: Могат ли сватбарите да постят, докато е с тях младоженецът? Дотогава, докогато младоженецът е с тях, не могат да постят.
20 ೨೦ ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು.
Ще дойдат, обаче, дни, когато младоженецът ще се отнеме от тях, и тогава, през ония дни, ще постят.
21 ೨೧ “ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.
Никой не пришива кръпка от невалян плат на вехта дреха; а инак, това, което трябваше да запълни дрехата, отдира от нея, новото от вехтото, и съдраното става по-лошо.
22 ೨೨ ಮತ್ತು ಹಳೆಯಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.
И никой не налива ново вино в стари мехове; инак, виното ще спука меховете; и се изхабяват и виното и меховете; но наливат ново вино в нови мехове.
23 ೨೩ ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು.
И в една събота, когато минаваше през посевите, учениците Му, вървейки из пътя, почнаха да късат класове.
24 ೨೪ ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು.
И фарисеите Му рекоха: Виж! Защо вършат в събота нещо, което не е позволено?
25 ೨೫ ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?
А Той им рече: Не сте ли чели що стори Давид, когато беше в нужда, и огладня и мъжете, които бяха с него?
26 ೨೬ ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,
Как влезе в Божия дом, когато Авиатар беше първосвещеник, и изяде присъствените хлябове, които не е позволено никому да яде, освен на свещениците, като даде и на ония, които бяха с него?
27 ೨೭ “ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.
И каза им: Съботата е направена за човека, а не човек за съботата;
28 ೨೮ ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಯೇಸು ಹೇಳಿದನು.
така щото Човешкият Син е господар и на съботата.

< ಮಾರ್ಕನು 2 >