< ಮಾರ್ಕನು 7 >

1 ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.
Собрались к Нему фарисеи и некоторые из книжников, пришедшие из Иерусалима,
2 ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.
и, увидев некоторых из учеников Его, евших хлеб нечистыми, то есть неумытыми, руками, укоряли.
3 ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.
Ибо фарисеи и все Иудеи, держась предания старцев, не едят, не умыв тщательно рук;
4 ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.
и, придя с торга, не едят не омывшись. Есть и многое другое, чего они приняли держаться: наблюдать омовение чаш, кружек, котлов и скамей.
5 ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು.
Потом спрашивают Его фарисеи и книжники: зачем ученики Твои не поступают по преданию старцев, но неумытыми руками едят хлеб?
6 ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.
Он сказал им в ответ: хорошо пророчествовал о вас, лицемерах, Исаия, как написано: люди сии чтут Меня устами, сердце же их далеко отстоит от Меня,
7 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.
но тщетно чтут Меня, уча учениям, заповедям человеческим.
8 ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು.
Ибо вы, оставив заповедь Божию, держитесь предания человеческого, омовения кружек и чаш, и делаете многое другое, сему подобное.
9 ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;
И сказал им: хорошо ли, что вы отменяете заповедь Божию, чтобы соблюсти свое предание?
10 ೧೦ ‘ನಿನ್ನತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.
Ибо Моисей сказал: почитай отца своего и мать свою; и злословящий отца или мать смертью да умрет.
11 ೧೧ ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ
А вы говорите: кто скажет отцу или матери: корван, то есть дар Богу то, чем бы ты от меня пользовался,
12 ೧೨ ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ.
тому вы уже попускаете ничего не делать для отца своего или матери своей,
13 ೧೩ ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.
устраняя слово Божие преданием вашим, которое вы установили; и делаете многое сему подобное.
14 ೧೪ ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.
И, призвав весь народ, говорил им: слушайте Меня все и разумейте:
15 ೧೫ ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.
ничто, входящее в человека извне, не может осквернить его; но что исходит из него, то оскверняет человека.
16 ೧೬ “ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.
Если кто имеет уши слышать, да слышит!
17 ೧೭ ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು
И когда Он от народа вошел в дом, ученики Его спросили Его о притче.
18 ೧೮ ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,
Он сказал им: неужели и вы так непонятливы? Неужели не разумеете, что ничто, извне входящее в человека, не может осквернить его?
19 ೧೯ ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.
Потому что не в сердце его входит, а в чрево, и выходит вон, чем очищается всякая пища.
20 ೨೦ ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;
Далее сказал: исходящее из человека оскверняет человека.
21 ೨೧ ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,
Ибо извнутрь, из сердца человеческого, исходят злые помыслы, прелюбодеяния, любодеяния, убийства,
22 ೨೨ ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.
кражи, лихоимство, злоба, коварство, непотребство, завистливое око, богохульство, гордость, безумство,
23 ೨೩ ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.”
все это зло извнутрь исходит и оскверняет человека.
24 ೨೪ ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.
И, отправившись оттуда, пришел в пределы Тирские и Сидонские; и, войдя в дом, не хотел, чтобы кто узнал; но не мог утаиться.
25 ೨೫ ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು.
Ибо услышала о Нем женщина, у которой дочь одержима была нечистым духом, и, придя, припала к ногам Его;
26 ೨೬ ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,
а женщина та была язычница, родом сирофиникиянка; и просила Его, чтобы изгнал беса из ее дочери.
27 ೨೭ ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.
Но Иисус сказал ей: дай прежде насытиться детям, ибо нехорошо взять хлеб у детей и бросить псам.
28 ೨೮ ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು
Она же сказала Ему в ответ: так, Господи; но и псы под столом едят крохи у детей.
29 ೨೯ ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.
И сказал ей: за это слово, пойди; бес вышел из твоей дочери.
30 ೩೦ ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.
И, придя в свой дом, она нашла, что бес вышел и дочь лежит на постели.
31 ೩೧ ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.
Выйдя из пределов Тирских и Сидонских, Иисус опять пошел к морю Галилейскому через пределы Десятиградия.
32 ೩೨ ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.
Привели к Нему глухого косноязычного и просили Его возложить на него руку.
33 ೩೩ ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ,
Иисус, отведя его в сторону от народа, вложил персты Свои в уши ему и, плюнув, коснулся языка его;
34 ೩೪ ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.
и, воззрев на небо, вздохнул и сказал ему: “еффафа”, то есть: отверзись.
35 ೩೫ ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.
И тотчас отверзся у него слух и разрешились узы его языка, и стал говорить чисто.
36 ೩೬ ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.
И повелел и не сказывать никому. Но сколько Он ни запрещал им, они еще более разглашали.
37 ೩೭ ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.
И чрезвычайно дивились, и говорили: все хорошо делает, - и глухих делает слышащими, и немых говорящими.

< ಮಾರ್ಕನು 7 >