< ಮಾರ್ಕನು 9 >

1 ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
И рече им: Заиста вам кажем: имају неки међу овима што стоје овде који неће окусити смрт док не виде царство Божје да дође у сили.
2 ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.
И после шест дана узе Исус Петра и Јакова и Јована и изведе их на високу гору саме; и преобрази се пред њима.
3 ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.
И хаљине Његове постадоше сјајне и врло беле као снег, као што не може белиља убелити на земљи.
4 ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.
И указа им се Илија с Мојсијем где се разговараху с Исусом.
5 ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
И Петар одговарајући рече Исусу: Рави! Добро нам је овде бити; и да начинимо три сенице: Теби једну и Мојсију једну и Илији једну.
6 ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.
Јер не знаше шта говори; јер беху врло уплашени.
7 ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
И постаде облак те их заклони; и дође глас из облака говорећи: Ово је Син мој љубазни; Њега послушајте.
8 ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.
И уједанпут погледавши, никога не видеше осим Исуса самог са собом.
9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.
А кад силажаху с горе запрети им да ником не казују шта су видели, док Син човечји не устане из мртвих.
10 ೧೦ ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
И реч задржаше у себи питајући један другог: Шта то значи устати из мртвих?
11 ೧೧ ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು.
И питаху Га говорећи: Како говоре књижевници да Илија треба најпре да дође?
12 ೧೨ ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?
А Он одговарајући рече им: Илија ће доћи најпре, и уредити све; али и Син човечји треба да много пострада и да се понизи, као што је писано.
13 ೧೩ ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು.
Али вам кажем да је и Илија дошао и учинише с њим шта хтедоше као што је писано за њега.
14 ೧೪ ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.
И дошавши к ученицима својим виде народ многи око њих и књижевнике где се препиру с њима.
15 ೧೫ ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.
И одмах видевши Га сав народ уплаши се и притрчавши поздрављаху Га.
16 ೧೬ ಆತನು ಅವರಿಗೆ, “ಇವರ ಸಂಗಡ ಏನು ವಾದಮಾಡುತ್ತೀರಿ?” ಎಂದು ಕೇಳಿದನು.
И упита књижевнике: Шта се препирете с њима?
17 ೧೭ ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.
И одговарајући један од народа рече: Учитељу! Доведох к Теби сина свог у коме је дух неми.
18 ೧೮ ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.
И сваки пут кад га ухвати ломи га, и пену баца и шкргуће зубима; и суши се. И рекох ученицима Твојим да га истерају; и не могоше.
19 ೧೯ ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.
А Он одговарајући му рече: О роде неверни! Докле ћу с вама бити? Докле ћу вас трпети? Доведите га к мени.
20 ೨೦ ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.
И доведоше га к Њему; и кад Га виде одмах га дух стаде ломити; и паднувши на земљу ваљаше се бацајући пену.
21 ೨೧ ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;
И упита оца његовог: Колико има времена како му се то догодило? А он рече: Из детињства.
22 ೨೨ ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.
И много пута баца га у ватру и у воду да га погуби; него ако шта можеш помози нам, смилуј се на нас.
23 ೨೩ ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.
А Исус рече му: Ако можеш веровати: све је могуће ономе који верује.
24 ೨೪ ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.
И одмах повикавши отац детињи са сузама говораше: Верујем, Господе! Помози мом неверју.
25 ೨೫ ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.
А Исус видећи да се стиче народ, запрети духу нечистом говорећи му: Душе неми и глуви! Ја ти заповедам, изађи из њега и више не улази у њега.
26 ೨೬ ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.
И повикавши и изломивши га врло изађе; и учини се као мртав тако да многи говораху: Умре.
27 ೨೭ ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.
А Исус узевши га за руку подиже га: и уста.
28 ೨೮ ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.
И кад уђе у кућу, питаху Га ученици Његови насамо: Зашто га ми нисмо могли истерати?
29 ೨೯ ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು.
И рече им: Овај се род ничим не може истерати до молитвом и постом.
30 ೩೦ ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
И изашавши оданде иђаху кроз Галилеју; и не хтеше да ко дозна.
31 ೩೧ ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
Јер учаше ученике своје, и говораше им да ће се Син човечји предати у руке људске, и убиће Га, и пошто Га убију устаће трећи дан.
32 ೩೨ ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.
А они не разумеваху реч, и не смеху да Га запитају.
33 ೩೩ ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
И дође у Капернаум, и кад беше у кући запита их: Шта се препирасте путем међу собом?
34 ೩೪ ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
А они ћутаху; јер се путем препираше међу собом ко је највећи.
35 ೩೫ ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
И седавши дозва дванаесторицу и рече им: Који хоће да буде први нека буде од свих најзадњи и свима слуга.
36 ೩೬ ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,
И узевши дете метну га међу њих и загрливши га рече им:
37 ೩೭ “ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.
Ко једно овакво дете прими у име моје, мене прима; а ко мене прими, не прима мене него Оног који је мене послао.
38 ೩೮ ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
Одговори Му Јован говорећи: Учитељу! Видесмо једног где именом Твојим изгони ђаволе који не иде за нама: и забранисмо му, јер не иде за нама.
39 ೩೯ ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
А Исус рече: Не браните му; јер нема никога који би именом мојим чудо чинио да може брзо зло говорити за мном.
40 ೪೦ ನಮಗೆವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.
Јер ко није против вас с вама је.
41 ೪೧ ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
Јер ко вас напоји чашом воде у име моје, зато што сте Христови, заиста вам кажем: неће му пропасти плата.
42 ೪೨ ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
А који саблазни једног од ових малих који верују мене, боље би му било да обеси камен воденични о врат свој и да се баци у море.
43 ೪೩ ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
И ако те рука твоја саблажњава, одсеци је: боље ти је без руке у живот ући, неголи с обе руке ући у пакао, у огањ вечни, (Geenna g1067)
44 ೪೪
Где црв њихов не умире, и огањ се не гаси.
45 ೪೫ ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
И ако те нога твоја саблажњава, одсеци је: боље ти је ући у живот хром, неголи с две ноге да те баце у пакао, у огањ вечни, (Geenna g1067)
46 ೪೬
Где црв њихов не умире, и огањ се не гаси.
47 ೪೭ ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
Ако те и око твоје саблажњава, ископај га: боље ти је с једним оком ући у царство Божје, неголи с два ока да те баце у пакао огњени, (Geenna g1067)
48 ೪೮ ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.
Где црв њихов не умире, и огањ се не гаси.
49 ೪೯ “ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು.
Јер ће се сваки огњем посолити, и свака ће се жртва сољу посолити.
50 ೫೦ ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”
Добра је со; али ако со буде неслана, чим ће се осолити? Имајте со у себи, и мир имајте међу собом.

< ಮಾರ್ಕನು 9 >