< ಮತ್ತಾಯನು 14 >

1 ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,
V tem času zasliši četrtnik Herod glas o Jezusu,
2 ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.
Ter reče hlapcem svojim: Ta je Janez Krstnik; on je vstal od mrtvih, in za to dela čudeže.
3 ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.
Kajti Herod je bil Janeza vjel in ga vklenil in posadil v ječo, za voljo Herodijade, svojega brata Filipa žene.
4 ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.
Kajti Janez mu je djal: Ni ti dovoljeno nje imeti.
5 ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
In hotel ga je umoriti; ali zbal se je ljudstva, ker so ga imeli za preroka.
6 ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.
Ko je bil pa Herodovega rojstva dan, plesala je po sredi Herodijadina hči, in ugodila je Herodu.
7 ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.
Za to jej s prisego obreče dati, karkoli bi prosila.
8 ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.
Ona pa, naučena od matere svoje: Daj mi, reče, tu v skledi glavo Janeza Krstnika.
9 ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು.
In kralju se užali. Pa za voljo prisege in gostov jej ukaže dati.
10 ೧೦ ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,
In pošlje, in odseka Janezu v ječi glavo.
11 ೧೧ ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.
Ter prinesó glavo njegovo v skledi, in dadó jo dekletu; in nese jo materi svojej.
12 ೧೨ ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು.
In prišedši učenci njegovi, vzemó truplo in ga pokopljejo; ter pridejo in sporočé Jezusu.
13 ೧೩ ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.
In slišavši to Jezus, odrine odtod na ladji posebej na samoten kraj. In ko ljudstvo to sliši, odidejo peš za njim iz mest.
14 ೧೪ ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
In Jezus izide in ugleda mnogo ljudstva; in zasmilijo mu se, ter uzdravi njih bolnike.
15 ೧೫ ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.
Ko se je pa zvečerilo, pristopijo k njemu učenci njegovi, govoreč: Kraj je samoten, in ura uže pozna; razpusti ljudstvo, da odidejo v vasí in si kupijo živeža.
16 ೧೬ ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು.
Jezus jim pa reče: Ni jim treba oditi; dajte jim vi jesti.
17 ೧೭ ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ,
Oni mu pa rekó: Nimamo več tu nego pet hlebov in dve ribi,
18 ೧೮ ಆತನು, “ಅವುಗಳನ್ನು ನನಗೆ ತಂದು ಕೊಡಿರಿ” ಅಂದನು.
On pa reče: Prinesite jih sem!
19 ೧೯ ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.
Ter ukaže ljudstvu, naj sedejo po travi, in vzeme petere hlebe in tisti dve ribi, in pogledavši na nebo, blagoslovi; ter prelomi in dá hlebe učencem, učenci pa ljudstvu.
20 ೨೦ ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.
In jedli so vsi, in nasitili so se; in pobrali so ostanke koscev, dvanajst košev polnih.
21 ೨೧ ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.
Bilo jih je pa, kteri so jedli, kakih pet tisoči móž, brez žen in otrók.
22 ೨೨ ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
In precej prisili Jezus učence svoje, naj stopijo v ladjo, in gredó naprej na drugo stran, dokler ne razpustí ljudstva.
23 ೨೩ ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.
In razpustivši ljudstvo, odide sam posebej na goro molit. Ko se je pa zvečerilo, bil je sam tu.
24 ೨೪ ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
Ladja je bila pa uže sredi morja, in valovi so jo metali; kajti bil je veter nasproti.
25 ೨೫ ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.
O četrtej straži po noči pa odide Jezus k njim, hodé po morji.
26 ೨೬ ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು.
In ko ga učenci ugledajo, da hodi po morji, ustrašijo se in rekó: Prikazen je! in od strahu zakričé.
27 ೨೭ ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.
Jezus jih pa precej ogovorí, in reče: Bodite srčni! Jaz sem; ne bojte se.
28 ೨೮ ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು,
Peter mu pa odgovorí in reče: Gospod! če si ti, ukaži mi, naj pridem k tebi pò vodi.
29 ೨೯ ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.
On pa reče: Pridi! In stopivši Peter iz ladje, hodil je po vodi, da pride k Jezusu.
30 ೩೦ ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.
Ko pa vidi, da je veter močán, uplaši se; in ko se začne potapljati, zavpije, govoreč; Gospod, otmi me!
31 ೩೧ ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.
Jezus pa precej stegne roko in ga prime, ter mu reče: Maloverni! po kaj si dvomil?
32 ೩೨ ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.
In ko stopita v ladjo, veter utihne.
33 ೩೩ ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.
Tisti pa, ki so bili v ladji, pristopijo, ter mu se poklonijo, govoreč: Resnično si sin Božji!
34 ೩೪ ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು.
In prepeljavši se, pridejo v zemljo Genezaretsko.
35 ೩೫ ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು.
In ko ga tega kraja možjé spoznajo, pošljejo po vsej tistej okolici; in prinesó mu vse bolnike.
36 ೩೬ ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.
In prosili so ga, da bi se le robú obleke njegove dotaknili. In kterikoli so se dotaknili, ozdraveli so.

< ಮತ್ತಾಯನು 14 >