< ಮತ್ತಾಯನು 24 >

1 ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.
И когато излезе Исус от храма и си отиваше, учениците Му се приближиха да Му покажат зданията на храма.
2 ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.
А Той в отговор им рече: Не виждате ли всичко това? Истина ви казвам: Няма да остане тук камък на камък, който да се не срине.
3 ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು (aiōn g165)
И когато седеше на Елеонския хълм, учениците дойдоха при Него насаме и рекоха: Кажи ни, кога ще бъде това? И какъв ще бъде белегът на Твоето пришествие и за свършека на века? (aiōn g165)
4 ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.
Исус в отговор им каза: Пазете се да ви не заблуди някой;
5 ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
защото мнозина ще дойдат в Мое име казвайки: Аз съм Христос, и ще заблудят мнозина.
6 ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
И ще чуете за войни и за военни слухове; но внимавайте да се не смущавате; понеже тия неща трябва да станат; но това още не е свършекът.
7 ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;
Защото ще се повдигне народ против народ, и царство против царство; и на разни места ще има глад и трусове.
8 ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ.
Но всичко това ще бъде само начало на страдания.
9 “ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.
Тогава ще ви предадат на мъки и ще ви убият; и ще бъдете намразени от всичките народи поради Моето име.
10 ೧೦ ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.
И тогава мнозина ще се съблазнят, и един друг ще се предадат, и един друг ще се намразят.
11 ೧೧ ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.
И много лъжепророци ще се появят и ще заблудят мнозина.
12 ೧೨ ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು.
Но понеже ще се умножи беззаконието, любовта на мнозинството ще охладнее.
13 ೧೩ ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.
Но който устои до край, той ще бъде спасен.
14 ೧೪ ಇದಲ್ಲದೆರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.
И това благовестие на царството ще бъде проповядвано по цялата вселена за свидетелство на всичките народи; и тогава ще дойде свършекът.
15 ೧೫ “ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)
Затова, когато видите мерзостта, която докарва запустение, за която говори пророк Даниил, стояща на святото място, (който чете нека разбира),
16 ೧೬ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ;
тогава ония които са в Юдея, нека бягат по планините;
17 ೧೭ ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ,
който се намери на къщния покрив да не слиза да вземе нещата от къщата си;
18 ೧೮ ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ.
и който се намери на нива да се не връща назад да вземе дрехата си.
19 ೧೯ ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ.
А горко на непразните и на кърмещите в ония дни!
20 ೨೦ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ.
При това, молете се да се не случи бягането ви зиме или в съботен ден;
21 ೨೧ ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.
защото тогава ще има голяма скръб, небивала от началото на света до сега, и каквато не ще има.
22 ೨೨ ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.
И ако да не се съкратеха ония дни, не би се избавила ни една твар; но заради избраните, ония дни ще се съкратят.
23 ೨೩ ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ.
Тогава ако някой ви каже: Ето тук е Христос, или: Тука, не вярвайте;
24 ೨೪ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
защото ще се появят лъжехристи, и лъжепророци, които ще покажат големи знамения и чудеса, така щото да заблудят, ако е възможно, и избраните.
25 ೨೫ ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.
Ето предсказах ви.
26 ೨೬ ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.
Прочее, ако ви кажат: Ето, Той е в пустинята; не излизайте; или: Ето Той е във вътрешните стаи; не вярвайте.
27 ೨೭ ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.
Защото както светкавицата излиза от изток и се вижда дори до запад, така ще бъде пришествието на Човешкия Син.
28 ೨೮ ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.
Дето бъде мършата, там ще се съберат и орлите.
29 ೨೯ “ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.
А веднага след скръбта на ония дни, слънцето ще потъмнее, луната няма да даде светлината си, звездите ще паднат от небето и небесните сили ще се разклатят.
30 ೩೦ ಆಗಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.
Тогава ще се яви на небето знамението на Човешкия Син; и тогава ще заплачат всички земни племена като видят Човешкия Син идещ на небесните облаци със сила и голяма слава.
31 ೩೧ ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
Ще изпрати Своите ангели със силен тръбен глас; и те ще съберат избраните Му от четирите ветрища, от единия край на небето до другия.
32 ೩೨ “ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.
А научете притчата от смоковницата: Когато клоните й вече омекнат и развият листа, знаете, че е близо лятото.
33 ೩೩ ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.
Също така и вие, когато видите всичко това, да знаете, че Той е близо при вратата.
34 ೩೪ ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Истина ви казвам: Това поколение няма да премине, докле не се сбъдне всичко това.
35 ೩೫ ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
Небето и земята ще преминат, но Моите думи няма да преминат.
36 ೩೬ “ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,
А за оня ден и час никой не знае, нито небесните ангели, нито Синът, а само Отец.
37 ೩೭ ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು.
И като бяха Ноевите дни, така ще бъде пришествието на Човешкия Син.
38 ೩೮ ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.
Защото, както и в ония дни преди потопа, ядяха и пиеха, женеха се и се омъжваха, до деня до когато Ное влезе в ковчега,
39 ೩೯ ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.
и не усетиха, до като дойде потопът и завлече всички, така ще бъде и пришествието на Човешкия Син.
40 ೪೦ ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು.
Тогава двама ще бъдат на полето; единият се взема, а другият се оставя.
41 ೪೧ ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು.
Две жени ще мелят на мелницата; едната се взема, а другата се оставя.
42 ೪೨ “ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.
Затова бдете, защото не знаете в кой ден ще дойде вашият Господ.
43 ೪೩ ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.
Но това да знаете, че ако домакинът би знаел в кой час щеше да дойде крадецът, бдял би, и не би оставил да му подкопаят къщата.
44 ೪೪ ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
Затова бъдете и вие готови; защото в час, когато го не мислите, Човешкият Син иде.
45 ೪೫ ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?
Кой е, прочее, верният и разумен слуга, когото господарят му е поставил над домочадието си; за да им дава храна навреме?
46 ೪೬ ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು.
Блажен е оня слуга, чийто господар, като си дойде, го намери, че прави така.
47 ೪೭ ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
Истина ви казвам, че ще го постави над целия си имот.
48 ೪೮ ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು
Но, ако оня слуга е зъл(Гръцки: Оня зъл слуга каже.), и каже в сърцето си: Господарят ми се забави,
49 ೪೯ ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ,
и той почне да бие служителите си, и да яде и да пие с пияниците,
50 ೫೦ ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ
господарят на оня слуга ще дойде в ден, когато той не го очаква, и в час, когато не знае,
51 ೫೧ ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.
и, като го бие тежко, ще определи неговата участ с лицемерите; там ще бъде плач и скърцане със зъби.

< ಮತ್ತಾಯನು 24 >

The World is Destroyed by Water
The World is Destroyed by Water