< ಮತ್ತಾಯನು 26 >

1 ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, “ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ;
ויהי ככלות ישוע לדבר את כל הדברים האלה ויאמר אל תלמידיו׃
2 ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.
אתם ידעתם כי אחרי יומים יהיה הפסח ובן האדם ימסר להצלב׃
3 ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು
ויקהלו הכהנים הגדולים והסופרים וזקני העם אל חצר הכהן הגדול הנקרא קיפא׃
4 ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.
ויועצו יחדו לתפש את ישוע בערמה ולהמיתו׃
5 “ಆದರೂ ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು” ಎಂದು ಮಾತನಾಡಿಕೊಂಡರು.
ויאמרו אך לא בחג פן תהיה מהומה בעם׃
6 ಯೇಸು ಬೇಥಾನ್ಯದಲ್ಲಿ ಸೀಮೋನನೆಂಬ ಕುಷ್ಠರೋಗಿಯ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಒಬ್ಬ ಸ್ತ್ರೀಯು
ויהי בהיות ישוע בית היני בבית שמעון המצרע׃
7 ಬಹು ಬೆಲೆಯುಳ್ಳ ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಆತನ ಬಳಿಗೆ ಬಂದು ಆ ತೈಲವನ್ನು ಆತನ ತಲೆಯ ಮೇಲೆ ಸುರಿದಳು.
ותקרב אליו אשה ובידה פך שמן יקר מאד ותצק על ראשו בהסבו על השלחן׃
8 ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ?
ויראו התלמידים ויתרעמו לאמר על מה האבוד הזה׃
9 ಈ ತೈಲವನ್ನು ಬಹಳ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ” ಅಂದರು.
כי השמן הזה היה ראוי להמכר במחיר רב ולתתו לעניים׃
10 ೧೦ ಯೇಸು ಅದನ್ನು ತಿಳಿದು ಅವರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.
וידע ישוע ויאמר אליהם למה תוגו את האשה הלא מעשה טוב עשתה עמדי׃
11 ೧೧ ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.
כי עניים תמיד עמכם ואנכי אינני אתכם תמיד׃
12 ೧೨ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ.
כי אשר שפכה את השמן הזה על גופי לחנט אותי עשתה זאת׃
13 ೧೩ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.
אמן אמר אני לכם באשר תקרא הבשורה הזאת בכל העולם גם את אשר היא עשתה יספר לזכרון לה׃
14 ೧೪ ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ,
וילך אחד משנים העשר הנקרא יהודה איש קריות אל ראשי הכהנים׃
15 ೧೫ “ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.
ויאמר מה תתנו לי ואמסרנו בידכם וישקלו לו שלשים כסף׃
16 ೧೬ ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು.
ומן העת ההיא בקש תאנה למסר אותו׃
17 ೧೭ ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು.
ויהי בראשון לחג המצות ויגשו התלמידים אל ישוע לאמר באי זה מקום תחפץ כי נכין לך לאכל את הפסח׃
18 ೧೮ ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.
ויאמר לכו העירה אל פלני אלמני ואמרתם אליו כה אמר הרב עתי קרובה היא ובביתך אעשה את הפסח עם תלמידי׃
19 ೧೯ ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು.
ויעשו התלמידים כאשר צום ישוע ויכינו את הפסח׃
20 ೨೦ ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡನು.
ויהי בערב ויסב עם שנים העשר׃
21 ೨೧ ಅವರು ಊಟಮಾಡುತ್ತಿರುವಾಗ ಆತನು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು” ಅಂದನು.
ובאכלם ויאמר אמן אמר אני לכם כי אחד מכם ימסרני׃
22 ೨೨ ಆಗ ಅವರು ಬಹಳ ದುಃಖಪಟ್ಟು, “ಕರ್ತನೇ, ನಾನಲ್ಲವಲ್ಲಾ?” ಎಂದು ಪ್ರತಿಯೊಬ್ಬರು ಕೇಳತೊಡಗಿದರು.
ויתעצבו מאד ויחלו איש ואיש לאמר לו האנכי הוא אדני׃
23 ೨೩ ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.
ויען ויאמר האיש אשר טבל עמי את ידו בקערה הוא ימסרני׃
24 ೨೪ ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.
הן בן האדם הלוך ילך לו ככתוב עליו אבל אוי לאיש ההוא אשר על ידו ימסר בן האדם טוב לאיש ההוא אם לא נולד׃
25 ೨೫ ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.
ויען יהודה המסר אותו ויאמר רבי האני הוא ויאמר אליו אתה אמרת׃
26 ೨೬ ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.
ובאכלם ויקח ישוע את הלחם ויברך ויבצע ויתן לתלמידים ויאמר קחו ואכלו זה הוא גופי׃
27 ೨೭ ಆ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಸಲ್ಲಿಸಿ ಅವರಿಗೆ ಕೊಟ್ಟು, “ಇದರಲ್ಲಿರುವುದನ್ನು ಎಲ್ಲರೂ ಕುಡಿಯಿರಿ; ಇದು ನನ್ನ ರಕ್ತ,
ויקח את הכוס ויברך ויתן להם לאמר שתו ממנה כלכם׃
28 ೨೮ ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.
כי זה הוא דמי דם הברית החדשה הנשפך בעד רבים לסליחת חטאים׃
29 ೨೯ ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು.
ואני אמר לכם כי מעתה שתה לא אשתה מתנובת הגפן הזאת עד היום ההוא אשר אשתה אתה עמכם חדשה במלכות אבי׃
30 ೩೦ ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.
ויהי אחרי גמרם את ההלל ויצאו אל הר הזיתים׃
31 ೩೧ ಆಗ ಯೇಸು, ಅವರಿಗೆ, “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”
אז אמר אליהם ישוע אתם כלכם תכשלו בי בלילה הזה כי כתוב אכה את הרעה ותפוצין הצאן׃
32 ೩೨ “ಆದರೆ ನಾನು ಜೀವಿತನಾಗಿ ಎದ್ದ ಮೇಲೆನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.
ואחרי קומי אלך לפניכם הגלילה׃
33 ೩೩ ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.
ויען פטרוס ויאמר לו גם כי יכשלו בך כלם אני לעולם לא אכשל׃
34 ೩೪ ಯೇಸು ಪೇತ್ರನಿಗೆ, “ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ” ಅಂದನು.
ויאמר אליו ישוע אמן אמר אני לך כי בלילה הזה בטרם יקרא התרנגול תכחש בי שלש פעמים׃
35 ೩೫ ಪೇತ್ರನು ಆತನಿಗೆ, “ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.
ויאמר אליו פטרוס גם כי יהיה עלי למות אתך כחש לא אכחש בך וכן אמרו גם כל התלמידים׃
36 ೩೬ ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ,
אחרי כן בא אתם ישוע אל חצר הנקרא גת שמני ויאמר אל התלמידים שבו לכם פה עד אשר אלך שמה והתפללתי׃
37 ೩೭ ಪೇತ್ರನನ್ನು ಮತ್ತು ಜೆಬೆದಾಯನ ಇಬ್ಬರು ಮಕ್ಕಳನ್ನು ಕರೆದುಕೊಂಡು ಮುಂದಕ್ಕೆ ಹೋಗಿ ದುಃಖಪಟ್ಟು ಮನಗುಂದಿದವನಾದನು.
ויקח אתו את פטרוס ואת שני בני זבדי ויחל להעצב ולמוג׃
38 ೩೮ ಮತ್ತು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನ ಸಂಗಡ ಎಚ್ಚರವಾಗಿರಿ” ಎಂದು ಹೇಳಿದನು.
ויאמר להם נפשי מרה לי עד מות עמדו פה ושקדו עמי׃
39 ೩೯ ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
וילך מעט האלה ויפל על פניו ויתפלל לאמר אבי אם יוכל להיות תעבר נא מעלי הכוס הזאת אך לא כרצוני כי אם כרצונך׃
40 ೪೦ ಅನಂತರ ಆತನು ಶಿಷ್ಯರ ಬಳಿಗೆ ಬರಲು ಅವರು ನಿದ್ದೆಮಾಡುವುದನ್ನು ಕಂಡು ಪೇತ್ರನಿಗೆ, “ಒಂದು ಗಳಿಗೆಯಾದರೂ ನನ್ನ ಸಂಗಡ ಎಚ್ಚರವಾಗಿರಲಾರಿರಾ?
ויבא אל התלמידים וימצאם ישנים ויאמר אל פטרוס הנה לא היה ביכלתכם לשקד עמי שעה אחת׃
41 ೪೧ ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ” ಎಂದು ಹೇಳಿದನು.
שקדו והתפללו פן תבאו לידי נסיון הן הרוח היא חפצה והבשר הוא רפה׃
42 ೪೨ ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.
ויוסף ללכת לו שנית ויתפלל לאמר אבי אם לא תוכל הכוס הזאת לעבר ממני מבלי שתותי אתה יהי כרצונך׃
43 ೪೩ ಆತನು ತಿರುಗಿ ಬಂದಾಗಲೂ ಅವರು ನಿದ್ದೆಮಾಡುವುದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು.
ויבא וימצאם גם בפעם הזאת ישנים כי עיניהם היו כבדות׃
44 ೪೪ ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು.
ויניחם ויוסף ללכת ויתפלל שלישית באמרו עוד הפעם כדבר הזה׃
45 ೪೫ ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.
ויבא אל התלמידים ויאמר אליהם נומו מעתה ונוחו הנה השעה קרובה ובן האדם נמסר לידי חטאים׃
46 ೪೬ ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.
קומו ונלכה הנה הלך וקרב המסר אותי׃
47 ೪೭ ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.
עודנו מדבר והנה בא יהודה אחד משנים העשר ועמו המון רב ברחבות ובמקלות מאת ראשי הכהנים וזקני העם׃
48 ೪೮ ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ” ಎಂದು ಮುನ್ಸೂಚನೆ ನೀಡಿದ್ದನು.
והמסר אתו נתן להם אות לאמר האיש אשר אשקהו זה הוא תפשוהו׃
49 ೪೯ ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.
ומיד נגש אל ישוע ויאמר שלום לך רבי וינשק לו׃
50 ೫೦ ಯೇಸು ಅವನಿಗೆ, “ಗೆಳೆಯನೇ, ನೀನು ಯಾಕೆ ಬಂದಿರುವೇ” ಎಂದು ಹೇಳಿದನು. ಅವರು ಹತ್ತಿರಕ್ಕೆ ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
ויאמר אליו ישוע רעי על מה באת ויגשו וישלחו את ידיהם בישוע ויתפשו אתו׃
51 ೫೧ ಇಗೋ ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
והנה אחד מן האנשים אשר עם ישוע שלח ידו וישלף חרבו ויך את עבד הכהן הגדול ויקצץ את אזנו׃
52 ೫೨ ಆಗ ಯೇಸು ಅವನಿಗೆ, “ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,
ויאמר אליו ישוע השב את חרבך אל תערה כי כל אחזי חרב בחרב יאבדו׃
53 ೫೩ ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?
או היחשב לבך כי לא יכלתי לשאל עתה מאת אבי והוא יצוה לי יותר משנים עשר לגיונות של מלאכים׃
54 ೫೪ ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?” ಎಂದು ಹೇಳಿದನು.
ואיככה אפוא ימלאו הכתובים כי כן היה תהיה׃
55 ೫೫ ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;
בשעה ההיא אמר ישוע אל המון העם כעל פריץ יצאתם בחרבות ובמקלות לתפשני ויום יום הייתי ישב ומלמד אצלכם במקדש ולא החזקתם בי׃
56 ೫೬ ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
וכל זאת היתה למלאת כתבי הנביאים אז עזבוהו התלמידים כלם וינוסו׃
57 ೫೭ ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.
והאנשים אשר תפשו את ישוע הוליכהו אל קיפא הכהן הגדול אשר נקהלו שם הסופרים והזקנים׃
58 ೫೮ ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.
ופטרוס הלך אחריו מרחוק עד לחצר הכהן הגדול ויבא פנימה וישב לו אצל המשרתים לראות את אחרית הדבר׃
59 ೫೯ ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.
והכהנים הגדולים והסופרים וכל הסנהדרין בקשו עדות שקר בישוע להמיתו ולא מצאו׃
60 ೬೦ ಅನಂತರ ಇಬ್ಬರು ಮುಂದೆ ಬಂದು,
ואף בעמד שם עדי שקר רבים לא מצאו ובאחרונה נגשו שני עדי שקר׃
61 ೬೧ “ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು;
ויאמרו זה אמר יש ביכלתי להרס את היכל האלהים ולשוב לבנותו בשלשת ימים׃
62 ೬೨ ಆಗ ಮಹಾಯಾಜಕನು ಎದ್ದು ನಿಂತು, “ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?” ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು.
ויקם הכהן הגדול ויאמר אליו האינך משיב דבר על אשר ענו בך אלה׃
63 ೬೩ ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.
וישוע החריש ויען הכהן הגדול ויאמר לו משביעך אני באלהים חיים שתאמר לנו אם אתה הוא המשיח בן האלהים׃
64 ೬೪ ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.
ויאמר אליו ישוע אתה אמרת אבל אני אמר לכם כי מעתה תראו את בן האדם ישב לימין הגבורה ובא עם ענני השמים׃
65 ೬೫ ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;
ויקרע הכהן הגדול את בגדיו ויאמר הוא גדף ומה לנו עוד לבקש עדים הנה עתה שמעתם את גדופו׃
66 ೬೬ ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು.
מה דעתכם ויענו ויאמרו איש מות הוא׃
67 ೬೭ ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,
וירקו בפניו ויכהו באגרוף ואחרים הכהו על הלחי׃
68 ೬೮ “ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು.
ויאמרו הנבא לנו המשיח מי הוא המכה אותך׃
69 ೬೯ ಆಗ ಪೇತ್ರನು ಹೊರಗೆ ಅಂಗಳದಲ್ಲಿ ಕುಳಿತಿದ್ದನು. ಅಲ್ಲಿ ಒಬ್ಬಳು ದಾಸಿಯು ಅವನ ಬಳಿಗೆ ಬಂದು, “ನೀನೂ ಸಹ ಗಲಿಲಾಯದ ಯೇಸುವಿನ ಕೂಡ ಇದ್ದವನು” ಅಲ್ಲವೇ ಎನ್ನಲು.
ופטרוס ישב מחוץ לבית בחצר ותגש אליו שפחה לאמר גם אתה היית עם ישוע הגלילי׃
70 ೭೦ ಅವನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆ ನನಗೆ ಗೊತ್ತಿಲ್ಲ” ಎಂದು ಎಲ್ಲರ ಮುಂದೆ ಹೇಳಿದನು.
ויכחש בפני כלם לאמר לא ידעתי מה את אמרת׃
71 ೭೧ ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು.
ויצא אל פתח השער ותרא אותו אחרת ותאמר לאנשים אשר שם גם זה היה עם ישוע הנצרי׃
72 ೭೨ ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು.
ויוסף לכחש וישבע לאמר לא ידעתי את האיש׃
73 ೭೩ ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು
וכמעט אחרי כן ויגשו העמדים שם ויאמרו אל פטרוס אמת כי גם אתה מהם כי גם לשונך מגלה אותך׃
74 ೭೪ ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.
ויחל להחרים את נפשו ולהשבע לאמר לא ידעתי את האיש ומיד קרא התרנגול׃
75 ೭೫ ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
ויזכר פטרוס את דבר ישוע אשר אמר אליו לאמר בטרם יקרא התרנגול תכחש בי שלש פעמים ויצא החוצה וימרר בבכי׃

< ಮತ್ತಾಯನು 26 >