< ಮೀಕನು 5 >

1 ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.
עַתָּה תִּתְגֹּדְדִי בַת־גְּדוּד מָצוֹר שָׂם עָלֵינוּ בַּשֵּׁבֶט יַכּוּ עַֽל־הַלְּחִי אֵת שֹׁפֵט יִשְׂרָאֵֽל׃
2 ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.
וְאַתָּה בֵּֽית־לֶחֶם אֶפְרָתָה צָעִיר לִֽהְיוֹת בְּאַלְפֵי יְהוּדָה מִמְּךָ לִי יֵצֵא לִֽהְיוֹת מוֹשֵׁל בְּיִשְׂרָאֵל וּמוֹצָאֹתָיו מִקֶּדֶם מִימֵי עוֹלָֽם׃
3 ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು
לָכֵן יִתְּנֵם עַד־עֵת יוֹלֵדָה יָלָדָה וְיֶתֶר אֶחָיו יְשׁוּבוּן עַל־בְּנֵי יִשְׂרָאֵֽל׃
4 ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.
וְעָמַד וְרָעָה בְּעֹז יְהֹוָה בִּגְאוֹן שֵׁם יְהֹוָה אֱלֹהָיו וְיָשָׁבוּ כִּֽי־עַתָּה יִגְדַּל עַד־אַפְסֵי־אָֽרֶץ׃
5 ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.
וְהָיָה זֶה שָׁלוֹם אַשּׁוּר ׀ כִּֽי־יָבוֹא בְאַרְצֵנוּ וְכִי יִדְרֹךְ בְּאַרְמְנוֹתֵינוּ וַהֲקֵמֹנוּ עָלָיו שִׁבְעָה רֹעִים וּשְׁמֹנָה נְסִיכֵי אָדָֽם׃
6 ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.
וְרָעוּ אֶת־אֶרֶץ אַשּׁוּר בַּחֶרֶב וְאֶת־אֶרֶץ נִמְרֹד בִּפְתָחֶיהָ וְהִצִּיל מֵֽאַשּׁוּר כִּֽי־יָבוֹא בְאַרְצֵנוּ וְכִי יִדְרֹךְ בִּגְבוּלֵֽנוּ׃
7 ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.
וְהָיָה ׀ שְׁאֵרִית יַעֲקֹב בְּקֶרֶב עַמִּים רַבִּים כְּטַל מֵאֵת יְהֹוָה כִּרְבִיבִים עֲלֵי־עֵשֶׂב אֲשֶׁר לֹֽא־יְקַוֶּה לְאִישׁ וְלֹא יְיַחֵל לִבְנֵי אָדָֽם׃
8 ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.
וְהָיָה שְׁאֵרִית יַעֲקֹב בַּגּוֹיִם בְּקֶרֶב עַמִּים רַבִּים כְּאַרְיֵה בְּבַהֲמוֹת יַעַר כִּכְפִיר בְּעֶדְרֵי־צֹאן אֲשֶׁר אִם־עָבַר וְרָמַס וְטָרַף וְאֵין מַצִּֽיל׃
9 ಯಾಕೋಬೇ, ನಿನ್ನ ಕೈ ನಿನ್ನ ವಿರೋಧಿಗಳ ಮೇಲೆ ಎತ್ತಲ್ಪಡಲಿ. ನಿನ್ನ ವೈರಿಗಳೆಲ್ಲಾ ನಿರ್ಮೂಲವಾಗಲಿ.
תָּרֹם יָדְךָ עַל־צָרֶיךָ וְכׇל־אֹיְבֶיךָ יִכָּרֵֽתוּ׃
10 ೧೦ ಯೆಹೋವನು ಇಂತೆನ್ನುತ್ತಾನೆ, “ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. ನಿನ್ನ ರಥಗಳನ್ನು ನಾಶಗೊಳಿಸುವೆನು.
וְהָיָה בַיּוֹם־הַהוּא נְאֻם־יְהֹוָה וְהִכְרַתִּי סוּסֶיךָ מִקִּרְבֶּךָ וְהַאֲבַדְתִּי מַרְכְּבֹתֶֽיךָ׃
11 ೧೧ ನಿನ್ನ ದೇಶದ ಪಟ್ಟಣಗಳನ್ನು ಹಾಳುಮಾಡಿ, ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
וְהִכְרַתִּי עָרֵי אַרְצֶךָ וְהָרַסְתִּי כׇּל־מִבְצָרֶֽיךָ׃
12 ೧೨ ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನಲ್ಲಿ ಕಣಿಯವರು ಇರುವುದಿಲ್ಲ.
וְהִכְרַתִּי כְשָׁפִים מִיָּדֶךָ וּֽמְעוֹנְנִים לֹא יִֽהְיוּ־לָֽךְ׃
13 ೧೩ ನಿನ್ನ ಮೂರ್ತಿಗಳನ್ನು, ಕಲ್ಲುಕಂಬಗಳನ್ನು ನಿನ್ನಲ್ಲಿ ನಿಲ್ಲದಂತೆ ಒಡೆದುಹಾಕುವೆನು. ನಿನ್ನ ಕೈರೂಪಿಸಿದ್ದನ್ನು ಇನ್ನು ಪೂಜಿಸದಂತೆ ಮಾಡುವೆ.
וְהִכְרַתִּי פְסִילֶיךָ וּמַצֵּבוֹתֶיךָ מִקִּרְבֶּךָ וְלֹא־תִשְׁתַּחֲוֶה עוֹד לְמַעֲשֵׂה יָדֶֽיךָ׃
14 ೧೪ ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು, ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.
וְנָתַשְׁתִּי אֲשֵׁירֶיךָ מִקִּרְבֶּךָ וְהִשְׁמַדְתִּי עָרֶֽיךָ׃
15 ೧೫ ಅವಿಧೇಯ ಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿ ತೀರಿಸುವೆನು.”
וְעָשִׂיתִי בְּאַף וּבְחֵמָה נָקָם אֶת־הַגּוֹיִם אֲשֶׁר לֹא שָׁמֵֽעוּ׃

< ಮೀಕನು 5 >