< ನೆಹೆಮೀಯನು 12 >

1 ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಯೇಷೂವ ಇವರೊಡನೆ ಯೆಹೂದ ದೇಶಕ್ಕೆ ಬಂದ ಯಾಜಕರು ಮತ್ತು ಲೇವಿಯರು ಯಾರಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,
És ezek a papok, meg leviták, a kik fölmentek Zerubbábellel, Sealtiél fiával és Jésúával: Szerája, Jírmeja, Ezra;
2 ಅಮರ್ಯ, ಮಲ್ಲೂಕ್, ಹಟ್ಟೂಷ್,
Amarja, Mallúkh, Chattús;
3 ಶೆಕನ್ಯ, ರೆಹುಮ್, ಮೆರೇಮೋತ್,
Sekhanja, Rechúm, Merémót;
4 ಇದ್ದೋ, ಗಿನ್ನೆತೋನ್, ಅಬೀಯ,
Iddó, Ginnetój, Abija;
5 ಮಿಯ್ಯಾಮೀನ್, ಮಾದ್ಯ, ಬಿಲ್ಗ,
Mijjámin, Máadja, Bilga;
6 ಶೆಮಾಯ, ಯೋಯಾರೀಬ್, ಯೆದಾಯ,
Semája, Jójáríb, Jedája;
7 ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಪ್ರಧಾನರು.
Szallú, Ámok, Chilkija, Jedája. Ezek a papok fejei és testvéreik Jésúa napjaiban.
8 ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು.
És a leviták: Jésúa, Binnúj, Kadmíél, Sérébja, Jehúda, Mattanja; ő és testvérei a hálaének fölött.
9 ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬುವವರು ಭಜನಸೇವೆಯಲ್ಲಿ ಇವರೆದುರಾಗಿ ನಿಂತುಕೊಳ್ಳುತ್ತಿದ್ದರು.
És Bakbukja meg Unni, az ő testvéreik, velük szemben osztályok szerint.
10 ೧೦ ಯೇಷೂವನು, ಯೋಯಾಕೀಮನನ್ನೂ, ಯೋಯಾಕೀಮನ ಎಲ್ಯಾಷೀಬನನ್ನೂ, ಎಲ್ಯಾಷೀಬನು ಯೋಯಾದನನ್ನೂ,
És Jésúa nemzette Jójákímot, és Jójákím nemzette Eljásíbot és Eljásíb nemzette Jójádát;
11 ೧೧ ಯೋಯಾದನು ಯೋನಾತಾನನನ್ನೂ, ಯೋನಾತಾನನು ಯದ್ದೂವನನ್ನೂ ಪಡೆದರು.
és Jójádá nemzette Jónátánt és Jónátán nemzette Jaddúát.
12 ೧೨ ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು: ಸೆರಾಯನ ಗೋತ್ರದ ಮೆರಾಯ, ಯೆರೆಮೀಯನ ಗೋತ್ರದ ಹನನ್ಯ,
És Jójákím idejében voltak papok, atyai házak fejei: Szerájától Merája, Jirmejától Chananja;
13 ೧೩ ಎಜ್ರನ ಗೋತ್ರದ ಮೆಷುಲ್ಲಾಮ್, ಅಮರ್ಯನ ಗೋತ್ರದ ಯೆಹೋಹಾನಾನ್,
Ezrától Mesullám, Amarjától Jehóchánán;
14 ೧೪ ಮಲ್ಲೂಕಿಯ ಗೋತ್ರದ ಯೋನಾತಾನ್, ಶೆಬನ್ಯನ ಗೋತ್ರದ ಯೋಸೇಫ್,
Melíkhútól Jónátán, Sebanjától József;
15 ೧೫ ಹಾರಿಮನ ಗೋತ್ರದ ಅದ್ನ, ಮೆರಾಯೋತನ್ ಗೋತ್ರದ ಹೆಲ್ಕೈ,
Chárimtól Adna; Merájóttól Chelkaj;
16 ೧೬ ಇದ್ದೋವಿನ ಗೋತ್ರದ ಜೆಕರ್ಯ, ಗಿನ್ನೆತೋನನ ಗೋತ್ರದ ಮೆಷುಲ್ಲಾಮ್,
Iddótól Zekharja; Ginnetóntól Mesullám;
17 ೧೭ ಅಬೀಯನ ಗೋತ್ರದ ಜಿಕ್ರೀ, ಮಿನ್ಯಾಮೀನನ ಮತ್ತು ಮೋವದ್ಯನ ಗೋತ್ರದ ಪಿಲ್ಟೈ,
Abijától Zikhri: Minjámintól, Móadjától Piltaj;
18 ೧೮ ಬಿಲ್ಗಾ ಗೋತ್ರದ ಶೆಮ್ಮೂವ, ಶೆಮಾಯನ ಗೋತ್ರದ ಯೆಹೋನಾತಾನ್,
Bilgától Sammúa; Semájától Jehónátán;
19 ೧೯ ಯೋಯಾರೀಬನ ಗೋತ್ರದ ಮತ್ತೆನೈ, ಯೆದಾಯನ ಗೋತ್ರದ ಉಜ್ಜೀ,
Jójáribtól Mattenaj; Jedájától Uzzi;
20 ೨೦ ಸಲ್ಲೈ ಗೋತ್ರದ ಕಲ್ಲೈ, ಆಮೋಕನ ಗೋತ್ರದ ಏಬೆರ್,
Szallajtól Kallaj; Amóktól Éber;
21 ೨೧ ಹಿಲ್ಕೀಯನ ಗೋತ್ರದ ಹಷಬ್ಯ, ಯೆದಾಯನ ಗೋತ್ರದ ನೆತನೇಲ್ ಇವರು.
Chilkijától Chasabja; Jedájától Netanél.
22 ೨೨ ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಗೋತ್ರ ಪ್ರಧಾನರ ಪಟ್ಟಿಯೂ ಪಾರಸಿಯನಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದ್ದವು.
A leviták Eljásib, Jojádá, Jóchánán és Jaddúa napjaiban föl voltak írva, az atyai házak fejei, a papok is a perzsa Dárjáves uralmáig.
23 ೨೩ ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ವರೆಗಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲ ವೃತ್ತಾಂತವೆಂಬ ಗ್ರಂಥದಲ್ಲಿ ಬರೆದಿರುತ್ತದೆ.
Lévi fiai, az atyai házak fejei, föl vannak írva a krónika könyvében; még pedig Jóchánánnak, Eljásib fiának, napjaiig;
24 ೨೪ ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:
S a leviták fejei: Chasabja, Sérébja, Jésúa Kadmíél fia, meg testvéreik velük szemben, dicsérő énekre s hálamondásra Dávidnak, az Isten emberének parancsolata szerint; osztály osztály mellett.
25 ೨೫ ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ, ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.
Mattanja; Bakbukja, Óbadja, Mesullám, Talmón, Akkúb kapuőrök, őrizetet tevők a kapuk tárházaiban.
26 ೨೬ ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತ್ತಿದ್ದ ದ್ವಾರಪಾಲಕರು: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬುವವರು.
Ezek voltak Jójákimnak, Jésúa, Jóczádák fia fiának napjaiban s Nechemja, a helytartó s Ezra pap, az írástudó napjaiban.
27 ೨೭ ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.
És Jeruzsálem falának fölavatásakor fölkeresték a levitákat mind a helyeikből, hogy bevigyék őket Jeruzsálembe, hogy tartsanak felavatást meg örömünnepet háladalokkal meg énekkel, cimbalmokkal, lantokkal és hárfákkal.
28 ೨೮ ಆಗ ಯೆರೂಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಳಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ,
És egybegyűltek az énekesek fiai, még pedig a Jeruzsálem körül levő kerületből és a Netófabeliek falvaiból;
29 ೨೯ ಬೆತ್ ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್, ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಸೇರಿ ಬಂದರು.
és Bet-Gilgálból és Gébá meg Azmávet mezőiről, mert falvakat építettek maguknak az énekesek Jeruzsálem körül.
30 ೩೦ ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ, ಊರುಬಾಗಿಲುಗಳನ್ನೂ, ಗೋಡೆಯನ್ನು ಶುದ್ಧಪಡಿಸಿದರು.
És megtisztálkodtak a papok és a leviták; és megtisztították a népet meg a kapukat és a falat.
31 ೩೧ ಆನಂತರ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದು, ಆರಾಧನೆ ಮಂಡಳಿಯವರಿಗೆ ಎರಡು ದೊಡ್ಡ ಗುಂಪುಗಳಾಗಿ ಆಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.
És fölvonultattam Jehúda nagyjait a fal fölé s fölállítottam két nagy hálakart s meneteket, jobbra a falon fölül, a szemét kapuja felé.
32 ೩೨ ಅವರ ಹಿಂದೆ ಯೆಹೂದ ಪ್ರಭುಗಳ ಅರ್ಧ ಜನರೊಡನೆ ಹೋಷಾಯನೂ,
És ment utánuk Hósája s Jehúda nagyjainak fele;
33 ೩೩ ತುತ್ತೂರಿ ಹಿಡಿದಿರುವ ಯಾಜಕರೊಡನೆ ಅಜರ್ಯ, ಎಜ್ರ, ಮೆಷುಲ್ಲಾಮ್,
és Azarja, Ezra, Mesullám;
34 ೩೪ ಯೆಹೂದ, ಬೆನ್ಯಾಮೀನ್, ಶೆಮಾಯ, ಯೆರೆಮೀಯ ಎಂಬುವರೂ
Jehúda és Benjámin, meg Semája és Jirmeja.
35 ೩೫ ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ, ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ, ಆದ ಜೆಕರ್ಯನೂ
És a papok fiai közül trombitákkal Zekharja, Jónátán fia, Semája fia, Mattanja fia, Mikhája fia, Zakkúr fia, Ászáf fia;
36 ೩೬ ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹಾನಾನೀ ಎಂಬುವರೂ ಹೋದರು, ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಹೊರಟನು.
és testvérei: Semája, Azarél, Milelaj, Gilelaj, Máaj, Netanél, Jehúda, Chanáni, Dávidnak, Isten emberének hangszereivel; Ezra, az írástudó pedig előttük volt.
37 ೩೭ ಇವರು ಬುಗ್ಗೆ ಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನು ಅನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.
És a forrás kapuja felé egyenesen maguk előtt fölmentek Dávid városának lépcsőin a falhoz való feljáraton Dávid házán fölül egészen a víz kapujáig keleten.
38 ೩೮ ಅವರನ್ನು ಎದುರುಗೊಳ್ಳುವ ಹಾಗೆ ಆರಾಧನೆ ಮಂಡಳಿಯ ಎರಡನೆಯ ಗುಂಪಿನವರೂ, ನಾನೂ, ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲವಾದ ಗೋಡೆಯವರೆಗೂ
A második hálakar pedig, a mely átellenben ment – annak én mentem utána – s a nép fele a falon fölül, a kemencék tornya felől egészen a széles falig;
39 ೩೯ ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.
és Efraim kapuja felől a régi kapu felé s a halak kapuja felé és Chananél tornyánál meg a Méa tornyánál egészen a juhok kapujáig, és megállottak az őrség kapujában.
40 ೪೦ ದೇವಾಲಯದ ಎರಡು ಆರಾಧನಾ ಮಂಡಳಿಯ ಗುಂಪಿನವರೂ, ನಾನೂ, ನನ್ನ ಜೊತೆಯಲ್ಲಿದ್ದ ಅರ್ಧ ಮಂದಿ ಅಧಿಕಾರಿಗಳೂ
És megállt a két hálakar az Isten házánál, én is, meg a vezérek fele én velem;
41 ೪೧ ತುತ್ತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ, ಜೆಕರ್ಯ, ಹನನ್ಯ ಇವರೂ
és a papok: Eljákim, Máaszéja, Minjámín, Mikhája, Eljóénaj, Zekharja, Chananja, trombitákkal,
42 ೪೨ ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್, ಎಂಬುವರು ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.
és Máaszéja, Semája, Eleázár, Uzzi, Jehóchánán, Malkija, Élám és Ézer. És hangjukat hallatták az énekesek, Jizrachja pedig volt az előljáró.
43 ೪೩ ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.
És áldoztak ama napon nagy vágóáldozatokat s örvendeztek, mert Isten megörvendeztette őket nagy örömmel; s a nők és a gyermekek is örvendeztek; és elhallatszott Jeruzsálem öröme messzire.
44 ೪೪ ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.
És kirendeltettek ama napon férfiak a kamarák fölé, az adományok, zsengék és tizedek tárházai számára, hogy azokban gyűjtsék össze a városok mezői szerint a tanban elrendelt illetményeket a papok és leviták részére, mert Jehúdának öröme telt a papokban s levitákban, kik ott álltak,
45 ೪೫ ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವೆಯ ಸಂಬಧದಲ್ಲಿಯೂ ಶುದ್ಧೀಕರಣ ಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರವಾಗಿ ನಡೆಯುತ್ತಿದ್ದರು.
és őrizték Istenük őrizetét s a tisztaság őrizetét, az énekesek s kapuőrök is, Dávidnak és fiának, Salamonnak parancsolata szerint.
46 ೪೬ ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು.
Mert Dávidnak és Ászáfnak, hajdanta az énekesek fejének napjai óta volt dicsérő dal és hálamondás az Istennek tiszteletére.
47 ೪೭ ಜೆರುಬ್ಬಾಬೆಲ್ ಮತ್ತು ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲರು ಗಾಯಕರಿಗೂ ದ್ವಾರಪಾಲಕರಿಗೂ ಪ್ರತಿದಿನ ಜೀವನಾಂಶವನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಮತ್ತು ಲೇವಿಯರು ತಮ್ಮದರಲ್ಲಿಯ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.
És egész Izraél Zerubbábel napjaiban és Nechemja napjaiban adta az énekesek és a kapuőrök illetményeit, a mindennapit a maga napján; és juttattak szent részt a levitáknak s a leviták juttattak szent részt Áron fiainak.

< ನೆಹೆಮೀಯನು 12 >