< ನೆಹೆಮೀಯನು 13 >

1 ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.
ביום ההוא נקרא בספר משה--באזני העם ונמצא כתוב בו אשר לא יבוא עמני ומואבי בקהל האלהים עד עולם
2 ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.
כי לא קדמו את בני ישראל בלחם ובמים וישכר עליו את בלעם לקללו ויהפך אלהינו הקללה לברכה
3 ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.
ויהי כשמעם את התורה ויבדילו כל ערב מישראל
4 ಇದಕ್ಕಿಂತ ಮೊದಲು ಯಾಜಕನಾದ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟಿದ್ದನು. ಇವನು ಟೋಬೀಯನ ಸಂಬಂಧಿಕನಾಗಿದ್ದನು.
ולפני מזה--אלישיב הכהן נתון בלשכת בית אלהינו קרוב לטוביה
5 ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.
ויעש לו לשכה גדולה ושם היו לפנים נתנים את המנחה הלבונה והכלים ומעשר הדגן התירוש והיצהר--מצות הלוים והמשררים והשוערים ותרומת הכהנים
6 ಬಾಬಿಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆನು. ಇದೆಲ್ಲಾ ನಡೆಯುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಕಾಲಾಂತರದಲ್ಲಿ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು,
ובכל זה לא הייתי בירושלם כי בשנת שלשים ושתים לארתחשסתא מלך בבל באתי אל המלך ולקץ ימים נשאלתי מן המלך
7 ಹಿಂತಿರುಗಿ ಯೆರೂಸಲೇಮಿಗೆ ಬಂದೆನು. ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವಾಲಯದ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿ,
ואבוא לירושלם ואבינה ברעה אשר עשה אלישיב לטוביה--לעשות לו נשכה בחצרי בית האלהים
8 ಈ ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ನೊಂದುಕೊಂಡು, ಟೋಬೀಯನ ಮನೆಯ ಸಾಮಾನುಗಳನ್ನು ಆ ಕೊಠಡಿಯಿಂದ ಹೊರಗೆ ಹಾಕಿಸಿದೆನು.
וירע לי מאד ואשליכה את כל כלי בית טוביה החוץ--מן הלשכה
9 ಕೊಠಡಿಯನ್ನು ಶುದ್ಧಮಾಡುವುದಕ್ಕಾಗಿ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಆ ಕೊಠಡಿಯಲ್ಲಿ ಇಡಿಸಿದೆನು.
ואמרה ויטהרו הלשכות ואשיבה שם כלי בית האלהים את המנחה והלבונה
10 ೧೦ ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.
ואדעה כי מניות הלוים לא נתנה ויברחו איש לשדהו הלוים והמשררים עשי המלאכה
11 ೧೧ ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗದರಿಸಿ, “ದೇವಾಲಯವನ್ನು ಅಲಕ್ಷ್ಯ ಮಾಡಿದ್ದೇಕೆ?” ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.
ואריבה את הסגנים ואמרה מדוע נעזב בית האלהים ואקבצם ואעמדם על עמדם
12 ೧೨ ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.
וכל יהודה הביאו מעשר הדגן והתירוש והיצהר--לאוצרות
13 ೧೩ ನಂತರ ಉಗ್ರಾಣಗಳ ಮೇಲ್ವಿಚಾರಣೆಗಾಗಿ ನೋಡುವುದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಯ ಕುಲದವನಾದ ಪೆದಾಯ ಇವರನ್ನೂ, ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ, ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆನು. ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರಾಗಿದ್ದರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.
ואוצרה על אוצרות שלמיה הכהן וצדוק הסופר ופדיה מן הלוים ועל ידם חנן בן זכור בן מתניה כי נאמנים נחשבו ועליהם לחלק לאחיהם
14 ೧೪ ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.
זכרה לי אלהי על זאת ואל תמח חסדי אשר עשיתי בבית אלהי--ובמשמריו
15 ೧೫ ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.
בימים ההמה ראיתי ביהודה דרכים גתות בשבת ומביאים הערמות ועמסים על החמרים ואף יין ענבים ותאנים וכל משא ומביאים ירושלם ביום השבת ואעיד ביום מכרם ציד
16 ೧೬ ಇದಲ್ಲದೆ ದೇಶದಲ್ಲಿ ವಾಸಿಸುತ್ತಿದ್ದ ತೂರ್ಯರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್ ದಿನದಲ್ಲಿ ಯೆರೂಸಲೇಮಿನಲ್ಲೇ ಮಾರುತ್ತಿದ್ದರು.
והצרים ישבו בה מביאים דאג וכל מכר ומוכרים בשבת לבני יהודה ובירושלם
17 ೧೭ ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.
ואריבה את חרי יהודה ואמרה להם מה הדבר הרע הזה אשר אתם עשים ומחללים את יום השבת
18 ೧೮ ನಿಮ್ಮ ಪೂರ್ವಿಕರು ಹೀಗೆ ಮಾಡಿದರೋ? ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ, ನಮ್ಮ ಪಟ್ಟಣದ ಮೇಲೆಯೂ ಬರಮಾಡಿದ್ದನಲ್ಲವೇ? ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲರ ಮೇಲೆ ದೈವಕೋಪವನ್ನು ಹೆಚ್ಚಿಸುತ್ತೀರಿ” ಎಂದು ಹೇಳಿ ಅವರನ್ನು ಗದರಿಸಿದೆನು.
הלוא כה עשו אבתיכם--ויבא אלהינו עלינו את כל הרעה הזאת ועל העיר הזאת ואתם מוסיפים חרון על ישראל לחלל את השבת
19 ೧೯ ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು.
ויהי כאשר צללו שערי ירושלם לפני השבת ואמרה ויסגרו הדלתות ואמרה אשר לא יפתחום עד אחר השבת ומנערי העמדתי על השערים--לא יבוא משא ביום השבת
20 ೨೦ ಇದರಿಂದ ವರ್ತಕರೂ, ಎಲ್ಲಾ ತರದ ದಿನನಿತ್ಯ ಬಳಕೆಯ ವಸ್ತುಗಳನ್ನು ಮಾರುವುದಕ್ಕೆ ಬಂದವರೂ, ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ಇಳಿದುಕೊಂಡರು.
וילינו הרכלים ומכרי כל ממכר מחוץ לירושלם--פעם ושתים
21 ೨೧ ಕೊನೆಗೆ ನಾನು ಅವರಿಗೆ, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಪುನಃ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು” ಎಂದು ಗದರಿಸಲು, ಅವರು ಅಂದಿನಿಂದ ಸಬ್ಬತ್ ದಿನದಲ್ಲಿ ಪುನಃ ಬರಲೇ ಇಲ್ಲ.
ואעידה בהם ואמרה אליהם מדוע אתם לנים נגד החומה--אם תשנו יד אשלח בכם מן העת ההיא לא באו בשבת
22 ೨೨ ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.
ואמרה ללוים אשר יהיו מטהרים ובאים שמרים השערים--לקדש את יום השבת גם זאת זכרה לי אלהי וחוסה עלי כרב חסדך
23 ೨೩ ಅದೇ ಕಾಲದಲ್ಲಿ ನಾನು ಅಷ್ಡೋದ್, ಅಮ್ಮೋನಿಯ, ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಣೆ ಮಾಡಿದೆನು.
גם בימים ההם ראיתי את היהודים השיבו נשים אשדודיות (אשדדיות) עמוניות (עמניות) מואביות
24 ೨೪ ಅವರ ಮಕ್ಕಳಲ್ಲಿ ಅರ್ಧ ಮಂದಿ ಯೂದಾಯ ಭಾಷೆಯಲ್ಲಿ ಮಾತನಾಡದೆ, ಅಷ್ಡೋದ್ಯ ಭಾಷೆಯನ್ನಾಡುತ್ತಾರೆಂದು ತಿಳಿದು ನಾನು ಕೋಪಗೊಂಡೆನು.
ובניהם חצי מדבר אשדודית ואינם מכירים לדבר יהודית--וכלשון עם ועם
25 ೨೫ ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು,
ואריב עמם ואקללם ואכה מהם אנשים ואמרטם ואשביעם באלהים אם תתנו בנתיכם לבניהם ואם תשאו מבנתיהם לבניכם ולכם
26 ೨೬ ಇಂತಹ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್ ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ. ಅವನು ತನ್ನ ದೇವರಿಗೆ ಪ್ರಿಯನಾಗಿದ್ದನು. ಆದ್ದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದನು. ಆದರೂ ಅನ್ಯದೇಶದ ಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿಬಿಟ್ಟರು.
הלוא על אלה חטא שלמה מלך ישראל ובגוים הרבים לא היה מלך כמהו ואהוב לאלהיו היה ויתנהו אלהים מלך על כל ישראל גם אותו החטיאו הנשים הנכריות
27 ೨೭ ಹೀಗಿರಲಾಗಿ ನೀವೂ ಅನ್ಯಸ್ತ್ರೀಯರನ್ನು ಮದುವೆಮಾಡಿಕೊಂಡು ಅದೇ ಘೋರವಾದ ದುಷ್ಟತ್ವವನ್ನು ಮಾಡಿ ದೇವರಿಗೆ ದ್ರೋಹಿಗಳಾಗುವುದನ್ನು ನಾವು ಒಪ್ಪಿಕೊಳ್ಳಬೇಕೋ? ಎಂದು ಅವರನ್ನು ಗದರಿಸಿ “ಅವರ ಮಕ್ಕಳಿಗೆ ಹೆಣ್ಣನ್ನು ಕೊಡಬಾರದು, ನಿಮಗಾಗಲಿ ನಿಮ್ಮ ಮಕ್ಕಳಿಗಾಗಲಿ ಅವರಿಂದ ತರಲೂಬಾರದು” ಎಂಬ ಧರ್ಮವಿಧಿಯನ್ನು ಕೈಕೊಳ್ಳುವುದಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿದೆನು.
ולכם הנשמע לעשת את כל הרעה הגדולה הזאת--למעל באלהינו להשיב נשים נכריות
28 ೨೮ ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.
ומבני יוידע בן אלישיב הכהן הגדול חתן לסנבלט החרני ואבריחהו מעלי
29 ೨೯ ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.
זכרה להם אלהי על גאלי הכהנה וברית הכהנה והלוים
30 ೩೦ ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗೆಯಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ, ಯಾಜಕರಲ್ಲಿಯೂ, ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು.
וטהרתים מכל נכר ואעמידה משמרות לכהנים וללוים איש במלאכתו
31 ೩೧ ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.
ולקרבן העצים בעתים מזמנות ולבכורים זכרה לי אלהי לטובה

< ನೆಹೆಮೀಯನು 13 >