< ನೆಹೆಮೀಯನು 2 >

1 ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.
וַיְהִ֣י ׀ בְּחֹ֣דֶשׁ נִיסָ֗ן שְׁנַ֥ת עֶשְׂרִ֛ים לְאַרְתַּחְשַׁ֥סְתְּא הַמֶּ֖לֶךְ יַ֣יִן לְפָנָ֑יו וָאֶשָּׂ֤א אֶת־הַיַּ֙יִן֙ וָאֶתְּנָ֣ה לַמֶּ֔לֶךְ וְלֹא־הָיִ֥יתִי רַ֖ע לְפָנָֽיו׃
2 ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.
וַיֹּאמֶר֩ לִ֨י הַמֶּ֜לֶךְ מַדּ֣וּעַ ׀ פָּנֶ֣יךָ רָעִ֗ים וְאַתָּה֙ אֵֽינְךָ֣ חֹולֶ֔ה אֵ֣ין זֶ֔ה כִּי־אִ֖ם רֹ֣עַֽ לֵ֑ב וָאִירָ֖א הַרְבֵּ֥ה מְאֹֽד׃
3 ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.
וָאֹמַ֣ר לַמֶּ֔לֶךְ הַמֶּ֖לֶךְ לְעֹולָ֣ם יִחְיֶ֑ה מַדּ֜וּעַ לֹא־יֵרְע֣וּ פָנַ֗י אֲשֶׁ֨ר הָעִ֜יר בֵּית־קִבְרֹ֤ות אֲבֹתַי֙ חֲרֵבָ֔ה וּשְׁעָרֶ֖יהָ אֻכְּל֥וּ בָאֵֽשׁ׃ ס
4 ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,
וַיֹּ֤אמֶר לִי֙ הַמֶּ֔לֶךְ עַל־מַה־זֶּ֖ה אַתָּ֣ה מְבַקֵּ֑שׁ וָֽאֶתְפַּלֵּ֔ל אֶל־אֱלֹהֵ֖י הַשָּׁמָֽיִם׃
5 ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.
וָאֹמַ֣ר לַמֶּ֔לֶךְ אִם־עַל־הַמֶּ֣לֶךְ טֹ֔וב וְאִם־יִיטַ֥ב עַבְדְּךָ֖ לְפָנֶ֑יךָ אֲשֶׁ֧ר תִּשְׁלָחֵ֣נִי אֶל־יְהוּדָ֗ה אֶל־עִ֛יר קִבְרֹ֥ות אֲבֹתַ֖י וְאֶבְנֶֽנָּה׃
6 ರಾಣಿಯು ಅರಸನ ಹತ್ತಿರದಲ್ಲೇ ಕುಳಿತುಕೊಂಡಿದ್ದಳು. ಅರಸನು ನನಗೆ, “ಪ್ರಯಾಣಕ್ಕೆ ನಿನಗೆಷ್ಟು ಕಾಲ ಬೇಕು? ಯಾವಾಗ ಹಿಂದಿರುಗುವಿ” ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅರಸನು ಒಪ್ಪಿಕೊಂಡು ಅಪ್ಪಣೆಕೊಟ್ಟನು.
וַיֹּאמֶר֩ לִ֨י הַמֶּ֜לֶךְ וְהַשֵּׁגַ֣ל ׀ יֹושֶׁ֣בֶת אֶצְלֹ֗ו עַד־מָתַ֛י יִהְיֶ֥ה מַֽהֲלָכֲךָ֖ וּמָתַ֣י תָּשׁ֑וּב וַיִּיטַ֤ב לִפְנֵֽי־הַמֶּ֙לֶךְ֙ וַיִּשְׁלָחֵ֔נִי וָֽאֶתְּנָ֥ה לֹ֖ו זְמָֽן׃
7 ತರುವಾಯ ನಾನು ಅರಸನಿಗೆ, “ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ
וָאֹומַר֮ לַמֶּלֶךְ֒ אִם־עַל־הַמֶּ֣לֶךְ טֹ֔וב אִגְּרֹות֙ יִתְּנוּ־לִ֔י עַֽל־פַּחֲוֹ֖ות עֵ֣בֶר הַנָּהָ֑ר אֲשֶׁר֙ יַעֲבִיר֔וּנִי עַ֥ד אֲשֶׁר־אָבֹ֖וא אֶל־יְהוּדָֽה׃
8 ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.
וְאִגֶּ֡רֶת אֶל־אָסָף֩ שֹׁמֵ֨ר הַפַּרְדֵּ֜ס אֲשֶׁ֣ר לַמֶּ֗לֶךְ אֲשֶׁ֣ר יִתֶּן־לִ֣י עֵצִ֡ים לְ֠קָרֹות אֶת־שַׁעֲרֵ֨י הַבִּירָ֤ה אֲשֶׁר־לַבַּ֙יִת֙ וּלְחֹומַ֣ת הָעִ֔יר וְלַבַּ֖יִת אֲשֶׁר־אָבֹ֣וא אֵלָ֑יו וַיִּתֶּן־לִ֣י הַמֶּ֔לֶךְ כְּיַד־אֱלֹהַ֖י הַטֹּובָ֥ה עָלָֽי׃
9 ಅರಸನು ನನ್ನನ್ನು ಕಳುಹಿಸುವಾಗ ಸೇನಾಧಿಪತಿಗಳನ್ನೂ, ರಾಹುತರನ್ನೂ ನನ್ನೊಡನೆ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು.
וָֽאָבֹ֗וא אֶֽל־פַּֽחֲוֹות֙ עֵ֣בֶר הַנָּהָ֔ר וָאֶתְּנָ֣ה לָהֶ֔ם אֵ֖ת אִגְּרֹ֣ות הַמֶּ֑לֶךְ וַיִּשְׁלַ֤ח עִמִּי֙ הַמֶּ֔לֶךְ שָׂ֥רֵי חַ֖יִל וּפָרָשִֽׁים׃ פ
10 ೧೦ ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.
וַיִּשְׁמַ֞ע סַנְבַלַּ֣ט הַחֹרֹנִ֗י וְטֹֽובִיָּה֙ הָעֶ֣בֶד הָֽעַמֹּנִ֔י וַיֵּ֥רַע לָהֶ֖ם רָעָ֣ה גְדֹלָ֑ה אֲשֶׁר־בָּ֥א אָדָ֔ם לְבַקֵּ֥שׁ טֹובָ֖ה לִבְנֵ֥י יִשְׂרָאֵֽל׃
11 ೧೧ ಅನಂತರ ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿನಗಳವರೆಗೂ ಇದ್ದೆನು.
וָאָבֹ֖וא אֶל־יְרוּשָׁלָ֑͏ִם וָאֱהִי־שָׁ֖ם יָמִ֥ים שְׁלֹשָֽׁה׃
12 ೧೨ ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.
וָאָק֣וּם ׀ לַ֗יְלָה אֲנִי֮ וַאֲנָשִׁ֣ים ׀ מְעַט֮ עִמִּי֒ וְלֹא־הִגַּ֣דְתִּי לְאָדָ֔ם מָ֗ה אֱלֹהַי֙ נֹתֵ֣ן אֶל־לִבִּ֔י לַעֲשֹׂ֖ות לִירוּשָׁלָ֑͏ִם וּבְהֵמָה֙ אֵ֣ין עִמִּ֔י כִּ֚י אִם־הַבְּהֵמָ֔ה אֲשֶׁ֥ר אֲנִ֖י רֹכֵ֥ב בָּֽהּ׃
13 ೧೩ ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಿಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಿಲುಗಳನ್ನೂ ನೋಡುತ್ತಾ, ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆನು.
וָאֵצְאָ֨ה בְשַֽׁעַר־הַגַּ֜יא לַ֗יְלָה וְאֶל־פְּנֵי֙ עֵ֣ין הַתַּנִּ֔ין וְאֶל־שַׁ֖עַר הָאַשְׁפֹּ֑ת וָאֱהִ֨י שֹׂבֵ֜ר בְּחֹומֹ֤ת יְרוּשָׁלַ֙͏ִם֙ אֲשֶׁר־הַמְפֹרוָצִים (הֵ֣ם ׀ פְּרוּצִ֔ים) וּשְׁעָרֶ֖יהָ אֻכְּל֥וּ בָאֵֽשׁ׃
14 ೧೪ ಅಲ್ಲಿಂದ ಬುಗ್ಗೆ ಬಾಗಿಲನ್ನು ಹಾದು ಅರಸನ ಕೊಳಕ್ಕೆ ಬಂದೆನು. ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿರಲಿಲ್ಲ.
וָאֶֽעֱבֹר֙ אֶל־שַׁ֣עַר הָעַ֔יִן וְאֶל־בְּרֵכַ֖ת הַמֶּ֑לֶךְ וְאֵין־מָקֹ֥ום לַבְּהֵמָ֖ה לַעֲבֹ֥ר תַּחְתָּֽי׃
15 ೧೫ ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.
וָאֱהִ֨י עֹלֶ֤ה בַנַּ֙חַל֙ לַ֔יְלָה וָאֱהִ֥י שֹׂבֵ֖ר בַּחֹומָ֑ה וָאָשׁ֗וּב וָאָבֹ֛וא בְּשַׁ֥עַר הַגַּ֖יְא וָאָשֽׁוּב׃
16 ೧೬ ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.
וְהַסְּגָנִ֗ים לֹ֤א יָדְעוּ֙ אָ֣נָה הָלַ֔כְתִּי וּמָ֖ה אֲנִ֣י עֹשֶׂ֑ה וְלַיְּהוּדִ֨ים וְלַכֹּהֲנִ֜ים וְלַחֹרִ֣ים וְלַסְּגָנִ֗ים וּלְיֶ֙תֶר֙ עֹשֵׂ֣ה הַמְּלָאכָ֔ה עַד־כֵּ֖ן לֹ֥א הִגַּֽדְתִּי׃
17 ೧೭ ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು.
וָאֹומַ֣ר אֲלֵהֶ֗ם אַתֶּ֤ם רֹאִים֙ הָרָעָה֙ אֲשֶׁ֣ר אֲנַ֣חְנוּ בָ֔הּ אֲשֶׁ֤ר יְרוּשָׁלַ֙͏ִם֙ חֲרֵבָ֔ה וּשְׁעָרֶ֖יהָ נִצְּת֣וּ בָאֵ֑שׁ לְכ֗וּ וְנִבְנֶה֙ אֶת־חֹומַ֣ת יְרוּשָׁלַ֔͏ִם וְלֹא־נִהְיֶ֥ה עֹ֖וד חֶרְפָּֽה׃
18 ೧೮ ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.
וָאַגִּ֨יד לָהֶ֜ם אֶת־יַ֣ד אֱלֹהַ֗י אֲשֶׁר־הִיא֙ טֹובָ֣ה עָלַ֔י וְאַף־דִּבְרֵ֥י הַמֶּ֖לֶךְ אֲשֶׁ֣ר אָֽמַר־לִ֑י וַיֹּֽאמְרוּ֙ נָק֣וּם וּבָנִ֔ינוּ וַיְחַזְּק֥וּ יְדֵיהֶ֖ם לַטֹּובָֽה׃ פ
19 ೧೯ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.
וַיִּשְׁמַע֩ סַנְבַלַּ֨ט הַחֹרֹנִ֜י וְטֹבִיָּ֣ה ׀ הָעֶ֣בֶד הָֽעַמֹּונִ֗י וְגֶ֙שֶׁם֙ הָֽעַרְבִ֔י וַיַּלְעִ֣גוּ לָ֔נוּ וַיִּבְז֖וּ עָלֵ֑ינוּ וַיֹּאמְר֗וּ מָֽה־הַדָּבָ֤ר הַזֶּה֙ אֲשֶׁ֣ר אַתֶּ֣ם עֹשִׂ֔ים הַעַ֥ל הַמֶּ֖לֶךְ אַתֶּ֥ם מֹרְדִֽים׃
20 ೨೦ ನಾನು ಅವರಿಗೆ, “ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ, ಹೆಸರೂ, ಸ್ಮಾರಕವೂ ಇರುವುದಿಲ್ಲ” ಎಂದು ಉತ್ತರಕೊಟ್ಟೆನು.
וָאָשִׁ֨יב אֹותָ֜ם דָּבָ֗ר וָאֹומַ֤ר לָהֶם֙ אֱלֹהֵ֣י הַשָּׁמַ֔יִם ה֚וּא יַצְלִ֣יחַֽ לָ֔נוּ וַאֲנַ֥חְנוּ עֲבָדָ֖יו נָק֣וּם וּבָנִ֑ינוּ וְלָכֶ֗ם אֵֽין־חֵ֧לֶק וּצְדָקָ֛ה וְזִכָּרֹ֖ון בִּירוּשָׁלָֽ͏ִם׃

< ನೆಹೆಮೀಯನು 2 >