< ಅರಣ್ಯಕಾಂಡ 10 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,
וַיְדַבֵּר יְהֹוָה אֶל־מֹשֶׁה לֵּאמֹֽר׃
2 “ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.
עֲשֵׂה לְךָ שְׁתֵּי חֲצֽוֹצְרֹת כֶּסֶף מִקְשָׁה תַּעֲשֶׂה אֹתָם וְהָיוּ לְךָ לְמִקְרָא הָֽעֵדָה וּלְמַסַּע אֶת־הַֽמַּחֲנֽוֹת׃
3 ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.
וְתָקְעוּ בָּהֵן וְנֽוֹעֲדוּ אֵלֶיךָ כׇּל־הָעֵדָה אֶל־פֶּתַח אֹהֶל מוֹעֵֽד׃
4 ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.
וְאִם־בְּאַחַת יִתְקָעוּ וְנוֹעֲדוּ אֵלֶיךָ הַנְּשִׂיאִים רָאשֵׁי אַלְפֵי יִשְׂרָאֵֽל׃
5 ನೀನು ಆರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.
וּתְקַעְתֶּם תְּרוּעָה וְנָֽסְעוּ הַֽמַּחֲנוֹת הַחֹנִים קֵֽדְמָה׃
6 ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.
וּתְקַעְתֶּם תְּרוּעָה שֵׁנִית וְנָֽסְעוּ הַֽמַּחֲנוֹת הַחֹנִים תֵּימָנָה תְּרוּעָה יִתְקְעוּ לְמַסְעֵיהֶֽם׃
7 ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು.
וּבְהַקְהִיל אֶת־הַקָּהָל תִּתְקְעוּ וְלֹא תָרִֽיעוּ׃
8 “ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.
וּבְנֵי אַהֲרֹן הַכֹּהֲנִים יִתְקְעוּ בַּחֲצֹֽצְרוֹת וְהָיוּ לָכֶם לְחֻקַּת עוֹלָם לְדֹרֹתֵיכֶֽם׃
9 ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.
וְכִֽי־תָבֹאוּ מִלְחָמָה בְּאַרְצְכֶם עַל־הַצַּר הַצֹּרֵר אֶתְכֶם וַהֲרֵעֹתֶם בַּחֲצֹצְרֹת וְנִזְכַּרְתֶּם לִפְנֵי יְהֹוָה אֱלֹֽהֵיכֶם וְנוֹשַׁעְתֶּם מֵאֹיְבֵיכֶֽם׃
10 ೧೦ ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”
וּבְיוֹם שִׂמְחַתְכֶם וּֽבְמוֹעֲדֵיכֶם וּבְרָאשֵׁי חׇדְשֵׁיכֶם וּתְקַעְתֶּם בַּחֲצֹֽצְרֹת עַל עֹלֹתֵיכֶם וְעַל זִבְחֵי שַׁלְמֵיכֶם וְהָיוּ לָכֶם לְזִכָּרוֹן לִפְנֵי אֱלֹֽהֵיכֶם אֲנִי יְהֹוָה אֱלֹהֵיכֶֽם׃
11 ೧೧ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.
וַיְהִי בַּשָּׁנָה הַשֵּׁנִית בַּחֹדֶשׁ הַשֵּׁנִי בְּעֶשְׂרִים בַּחֹדֶשׁ נַעֲלָה הֶֽעָנָן מֵעַל מִשְׁכַּן הָעֵדֻֽת׃
12 ೧೨ ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.
וַיִּסְעוּ בְנֵֽי־יִשְׂרָאֵל לְמַסְעֵיהֶם מִמִּדְבַּר סִינָי וַיִּשְׁכֹּן הֶעָנָן בְּמִדְבַּר פָּארָֽן׃
13 ೧೩ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ.
וַיִּסְעוּ בָּרִאשֹׁנָה עַל־פִּי יְהֹוָה בְּיַד־מֹשֶֽׁה׃
14 ೧೪ ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.
וַיִּסַּע דֶּגֶל מַחֲנֵה בְנֵֽי־יְהוּדָה בָּרִאשֹׁנָה לְצִבְאֹתָם וְעַל־צְבָאוֹ נַחְשׁוֹן בֶּן־עַמִּינָדָֽב׃
15 ೧೫ ಇಸ್ಸಾಕಾರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂವಾರನ ಮಗನಾದ ನೆತನೇಲನು.
וְעַל־צְבָא מַטֵּה בְּנֵי יִשָּׂשכָר נְתַנְאֵל בֶּן־צוּעָֽר׃
16 ೧೬ ಜೆಬುಲೂನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಹೇಲೋನನ ಮಗನಾದ ಎಲೀಯಾಬನು.
וְעַל־צְבָא מַטֵּה בְּנֵי זְבוּלֻן אֱלִיאָב בֶּן־חֵלֹֽן׃
17 ೧೭ ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರು ಮತ್ತು ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.
וְהוּרַד הַמִּשְׁכָּן וְנָסְעוּ בְנֵֽי־גֵרְשׁוֹן וּבְנֵי מְרָרִי נֹשְׂאֵי הַמִּשְׁכָּֽן׃
18 ೧೮ ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.
וְנָסַע דֶּגֶל מַחֲנֵה רְאוּבֵן לְצִבְאֹתָם וְעַל־צְבָאוֹ אֱלִיצוּר בֶּן־שְׁדֵיאֽוּר׃
19 ೧೯ ಸಿಮೆಯೋನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂರೀಷದ್ದೈಯ ಮಗನಾದ ಶೆಲುಮೀಯೇಲನು.
וְעַל־צְבָא מַטֵּה בְּנֵי שִׁמְעוֹן שְׁלֻֽמִיאֵל בֶּן־צוּרִֽישַׁדָּֽי׃
20 ೨೦ ಗಾದ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ದೆಗೂವೇಲನ ಮಗನಾದ ಎಲ್ಯಾಸಾಫನು.
וְעַל־צְבָא מַטֵּה בְנֵי־גָד אֶלְיָסָף בֶּן־דְּעוּאֵֽל׃
21 ೨೧ ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.
וְנָסְעוּ הַקְּהָתִים נֹשְׂאֵי הַמִּקְדָּשׁ וְהֵקִימוּ אֶת־הַמִּשְׁכָּן עַד־בֹּאָֽם׃
22 ೨೨ ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.
וְנָסַע דֶּגֶל מַחֲנֵה בְנֵֽי־אֶפְרַיִם לְצִבְאֹתָם וְעַל־צְבָאוֹ אֱלִישָׁמָע בֶּן־עַמִּיהֽוּד׃
23 ೨೩ ಮನಸ್ಸೆ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಪೆದಾಚೂರನ ಮಗನಾದ ಗಮ್ಲೀಯೇಲನು.
וְעַל־צְבָא מַטֵּה בְּנֵי מְנַשֶּׁה גַּמְלִיאֵל בֶּן־פְּדָהצֽוּר׃
24 ೨೪ ಬೆನ್ಯಾಮೀನ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಗಿದ್ಯೋನಿಯ ಮಗನಾದ ಅಬೀದಾನನು.
וְעַל־צְבָא מַטֵּה בְּנֵי בִנְיָמִן אֲבִידָן בֶּן־גִּדְעוֹנִֽי׃
25 ೨೫ ಆ ಮೇಲೆ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನಾಗಿ ಇದ್ದವನು ಅಮ್ಮೀಷದ್ದೈಯ ಮಗನಾದ ಅಹೀಗೆಜೆರನು.
וְנָסַע דֶּגֶל מַחֲנֵה בְנֵי־דָן מְאַסֵּף לְכׇל־הַֽמַּחֲנֹת לְצִבְאֹתָם וְעַל־צְבָאוֹ אֲחִיעֶזֶר בֶּן־עַמִּישַׁדָּֽי׃
26 ೨೬ ಆಶೇರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಒಕ್ರಾನನ ಮಗನಾದ ಪಗೀಯೇಲನು.
וְעַל־צְבָא מַטֵּה בְּנֵי אָשֵׁר פַּגְעִיאֵל בֶּן־עׇכְרָֽן׃
27 ೨೭ ನಫ್ತಾಲಿ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಏನಾನನ ಮಗನಾದ ಅಹೀರನು.
וְעַל־צְבָא מַטֵּה בְּנֵי נַפְתָּלִי אֲחִירַע בֶּן־עֵינָֽן׃
28 ೨೮ ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು.
אֵלֶּה מַסְעֵי בְנֵֽי־יִשְׂרָאֵל לְצִבְאֹתָם וַיִּסָּֽעוּ׃
29 ೨೯ ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.
וַיֹּאמֶר מֹשֶׁה לְחֹבָב בֶּן־רְעוּאֵל הַמִּדְיָנִי חֹתֵן מֹשֶׁה נֹסְעִים ׀ אֲנַחְנוּ אֶל־הַמָּקוֹם אֲשֶׁר אָמַר יְהֹוָה אֹתוֹ אֶתֵּן לָכֶם לְכָה אִתָּנוּ וְהֵטַבְנוּ לָךְ כִּֽי־יְהֹוָה דִּבֶּר־טוֹב עַל־יִשְׂרָאֵֽל׃
30 ೩೦ ಆದರೆ ಹೋಬಾಬನು ಮೋಶೆಗೆ, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿದನು.
וַיֹּאמֶר אֵלָיו לֹא אֵלֵךְ כִּי אִם־אֶל־אַרְצִי וְאֶל־מוֹלַדְתִּי אֵלֵֽךְ׃
31 ೩೧ ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.
וַיֹּאמֶר אַל־נָא תַּעֲזֹב אֹתָנוּ כִּי ׀ עַל־כֵּן יָדַעְתָּ חֲנֹתֵנוּ בַּמִּדְבָּר וְהָיִיתָ לָּנוּ לְעֵינָֽיִם׃
32 ೩೨ ನೀನು ನಮ್ಮ ಸಂಗಡ ಬಂದರೆ ಯೆಹೋವನು ನಮಗೆ ಮಾಡುವ ಒಳ್ಳೆಯದನ್ನೆಲ್ಲಾ ನಾವು ನಿನಗೂ ಉಂಟಾಗುವಂತೆ ಮಾಡುವೆವು” ಎಂದು ಹೇಳಿದನು.
וְהָיָה כִּי־תֵלֵךְ עִמָּנוּ וְהָיָה ׀ הַטּוֹב הַהוּא אֲשֶׁר יֵיטִיב יְהֹוָה עִמָּנוּ וְהֵטַבְנוּ לָֽךְ׃
33 ೩೩ ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.
וַיִּסְעוּ מֵהַר יְהֹוָה דֶּרֶךְ שְׁלֹשֶׁת יָמִים וַאֲרוֹן בְּרִית־יְהֹוָה נֹסֵעַ לִפְנֵיהֶם דֶּרֶךְ שְׁלֹשֶׁת יָמִים לָתוּר לָהֶם מְנוּחָֽה׃
34 ೩೪ ಅವರು ಪಾಳೆಯದಿಂದ ಹೊರಡುವಾಗ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಅವರ ಮೇಲೆ ಇರುತ್ತಿತ್ತು.
וַעֲנַן יְהֹוָה עֲלֵיהֶם יוֹמָם בְּנׇסְעָם מִן־הַֽמַּחֲנֶֽה׃
35 ೩೫ ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ, “ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು.
׆ וַיְהִי בִּנְסֹעַ הָאָרֹן וַיֹּאמֶר מֹשֶׁה קוּמָה ׀ יְהֹוָה וְיָפֻצוּ אֹֽיְבֶיךָ וְיָנֻסוּ מְשַׂנְאֶיךָ מִפָּנֶֽיךָ׃
36 ೩೬ ಅದು ನಿಂತಾಗ ಅವನು, “ಯೆಹೋವನೇ, ಇಸ್ರಾಯೇಲರ ಲಕ್ಷಾಂತರ ಕುಟುಂಬಗಳ ಮಧ್ಯದಲ್ಲಿ ಮರಳಿ ಆಗಮಿಸು” ಎಂದು ಹೇಳುವನು.
וּבְנֻחֹה יֹאמַר שׁוּבָה יְהֹוָה רִֽבְבוֹת אַלְפֵי יִשְׂרָאֵֽל׃ ׆

< ಅರಣ್ಯಕಾಂಡ 10 >