< ಅರಣ್ಯಕಾಂಡ 15 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
וַיְדַבֵּר יְהֹוָה אֶל־מֹשֶׁה לֵּאמֹֽר׃
2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ,
דַּבֵּר אֶל־בְּנֵי יִשְׂרָאֵל וְאָמַרְתָּ אֲלֵהֶם כִּי תָבֹאוּ אֶל־אֶרֶץ מוֹשְׁבֹתֵיכֶם אֲשֶׁר אֲנִי נֹתֵן לָכֶֽם׃
3 ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,
וַעֲשִׂיתֶם אִשֶּׁה לַֽיהֹוָה עֹלָה אוֹ־זֶבַח לְפַלֵּא־נֶדֶר אוֹ בִנְדָבָה אוֹ בְּמֹעֲדֵיכֶם לַעֲשׂוֹת רֵיחַ נִיחֹחַ לַֽיהֹוָה מִן־הַבָּקָר אוֹ מִן־הַצֹּֽאן׃
4 ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.
וְהִקְרִיב הַמַּקְרִיב קׇרְבָּנוֹ לַֽיהֹוָה מִנְחָה סֹלֶת עִשָּׂרוֹן בָּלוּל בִּרְבִעִית הַהִין שָֽׁמֶן׃
5 ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.
וְיַיִן לַנֶּסֶךְ רְבִיעִית הַהִין תַּעֲשֶׂה עַל־הָעֹלָה אוֹ לַזָּבַח לַכֶּבֶשׂ הָאֶחָֽד׃
6 “‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,
אוֹ לָאַיִל תַּעֲשֶׂה מִנְחָה סֹלֶת שְׁנֵי עֶשְׂרֹנִים בְּלוּלָה בַשֶּׁמֶן שְׁלִשִׁית הַהִֽין׃
7 ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.
וְיַיִן לַנֶּסֶךְ שְׁלִשִׁית הַהִין תַּקְרִיב רֵֽיחַ־נִיחֹחַ לַיהֹוָֽה׃
8 “‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,
וְכִֽי־תַעֲשֶׂה בֶן־בָּקָר עֹלָה אוֹ־זָבַח לְפַלֵּא־נֶדֶר אֽוֹ־שְׁלָמִים לַֽיהֹוָֽה׃
9 ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
וְהִקְרִיב עַל־בֶּן־הַבָּקָר מִנְחָה סֹלֶת שְׁלֹשָׁה עֶשְׂרֹנִים בָּלוּל בַּשֶּׁמֶן חֲצִי הַהִֽין׃
10 ೧೦ ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು.
וְיַיִן תַּקְרִיב לַנֶּסֶךְ חֲצִי הַהִין אִשֵּׁה רֵֽיחַ־נִיחֹחַ לַיהֹוָֽה׃
11 ೧೧ “‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.
כָּכָה יֵעָשֶׂה לַשּׁוֹר הָֽאֶחָד אוֹ לָאַיִל הָאֶחָד אֽוֹ־לַשֶּׂה בַכְּבָשִׂים אוֹ בָעִזִּֽים׃
12 ೧೨ ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು.
כַּמִּסְפָּר אֲשֶׁר תַּעֲשׂוּ כָּכָה תַּעֲשׂוּ לָאֶחָד כְּמִסְפָּרָֽם׃
13 ೧೩ ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.
כׇּל־הָאֶזְרָח יַעֲשֶׂה־כָּכָה אֶת־אֵלֶּה לְהַקְרִיב אִשֵּׁה רֵֽיחַ־נִיחֹחַ לַֽיהֹוָֽה׃
14 ೧೪ ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.
וְכִֽי־יָגוּר אִתְּכֶם גֵּר אוֹ אֲשֶׁר־בְּתֽוֹכְכֶם לְדֹרֹתֵיכֶם וְעָשָׂה אִשֵּׁה רֵֽיחַ־נִיחֹחַ לַיהֹוָה כַּאֲשֶׁר תַּעֲשׂוּ כֵּן יַעֲשֶֽׂה׃
15 ೧೫ ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು.
הַקָּהָל חֻקָּה אַחַת לָכֶם וְלַגֵּר הַגָּר חֻקַּת עוֹלָם לְדֹרֹתֵיכֶם כָּכֶם כַּגֵּר יִהְיֶה לִפְנֵי יְהֹוָֽה׃
16 ೧೬ ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”
תּוֹרָה אַחַת וּמִשְׁפָּט אֶחָד יִהְיֶה לָכֶם וְלַגֵּר הַגָּר אִתְּכֶֽם׃
17 ೧೭ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
וַיְדַבֵּר יְהֹוָה אֶל־מֹשֶׁה לֵּאמֹֽר׃
18 ೧೮ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದ ನಂತರ,
דַּבֵּר אֶל־בְּנֵי יִשְׂרָאֵל וְאָמַרְתָּ אֲלֵהֶם בְּבֹֽאֲכֶם אֶל־הָאָרֶץ אֲשֶׁר אֲנִי מֵבִיא אֶתְכֶם שָֽׁמָּה׃
19 ೧೯ ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
וְהָיָה בַּאֲכׇלְכֶם מִלֶּחֶם הָאָרֶץ תָּרִימוּ תְרוּמָה לַיהֹוָֽה׃
20 ೨೦ ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
רֵאשִׁית עֲרִסֹתֵכֶם חַלָּה תָּרִימוּ תְרוּמָה כִּתְרוּמַת גֹּרֶן כֵּן תָּרִימוּ אֹתָֽהּ׃
21 ೨೧ “‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
מֵרֵאשִׁית עֲרִסֹתֵיכֶם תִּתְּנוּ לַיהֹוָה תְּרוּמָה לְדֹרֹתֵיכֶֽם׃
22 ೨೨ ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,
וְכִי תִשְׁגּוּ וְלֹא תַעֲשׂוּ אֵת כׇּל־הַמִּצְוֺת הָאֵלֶּה אֲשֶׁר־דִּבֶּר יְהֹוָה אֶל־מֹשֶֽׁה׃
23 ೨೩ ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿನದಿಂದ ಮೊದಲುಗೊಂಡು ನಿಮಗೂ ಮತ್ತು ನಿಮ್ಮ ಸಂತತಿಗೂ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ನೀವು ಮಾಡದೆ ಹೋದರೆ,
אֵת כׇּל־אֲשֶׁר צִוָּה יְהֹוָה אֲלֵיכֶם בְּיַד־מֹשֶׁה מִן־הַיּוֹם אֲשֶׁר צִוָּה יְהֹוָה וָהָלְאָה לְדֹרֹתֵיכֶֽם׃
24 ೨೪ ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
וְהָיָה אִם מֵעֵינֵי הָעֵדָה נֶעֶשְׂתָה לִשְׁגָגָה וְעָשׂוּ כׇל־הָעֵדָה פַּר בֶּן־בָּקָר אֶחָד לְעֹלָה לְרֵיחַ נִיחֹחַ לַֽיהֹוָה וּמִנְחָתוֹ וְנִסְכּוֹ כַּמִּשְׁפָּט וּשְׂעִיר־עִזִּים אֶחָד לְחַטָּֽת׃
25 ೨೫ ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,
וְכִפֶּר הַכֹּהֵן עַֽל־כׇּל־עֲדַת בְּנֵי יִשְׂרָאֵל וְנִסְלַח לָהֶם כִּֽי־שְׁגָגָה הִוא וְהֵם הֵבִיאוּ אֶת־קׇרְבָּנָם אִשֶּׁה לַֽיהֹוָה וְחַטָּאתָם לִפְנֵי יְהֹוָה עַל־שִׁגְגָתָֽם׃
26 ೨೬ ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.
וְנִסְלַח לְכׇל־עֲדַת בְּנֵי יִשְׂרָאֵל וְלַגֵּר הַגָּר בְּתוֹכָם כִּי לְכׇל־הָעָם בִּשְׁגָגָֽה׃
27 ೨೭ “‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.
וְאִם־נֶפֶשׁ אַחַת תֶּחֱטָא בִשְׁגָגָה וְהִקְרִיבָה עֵז בַּת־שְׁנָתָהּ לְחַטָּֽאת׃
28 ೨೮ ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
וְכִפֶּר הַכֹּהֵן עַל־הַנֶּפֶשׁ הַשֹּׁגֶגֶת בְּחֶטְאָהֿ בִשְׁגָגָה לִפְנֵי יְהֹוָה לְכַפֵּר עָלָיו וְנִסְלַח לֽוֹ׃
29 ೨೯ ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,
הָֽאֶזְרָח בִּבְנֵי יִשְׂרָאֵל וְלַגֵּר הַגָּר בְּתוֹכָם תּוֹרָה אַחַת יִהְיֶה לָכֶם לָעֹשֶׂה בִּשְׁגָגָֽה׃
30 ೩೦ ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
וְהַנֶּפֶשׁ אֲשֶֽׁר־תַּעֲשֶׂה ׀ בְּיָד רָמָה מִן־הָֽאֶזְרָח וּמִן־הַגֵּר אֶת־יְהֹוָה הוּא מְגַדֵּף וְנִכְרְתָה הַנֶּפֶשׁ הַהִוא מִקֶּרֶב עַמָּֽהּ׃
31 ೩೧ ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’”
כִּי דְבַר־יְהֹוָה בָּזָה וְאֶת־מִצְוָתוֹ הֵפַר הִכָּרֵת ׀ תִּכָּרֵת הַנֶּפֶשׁ הַהִוא עֲוֺנָהֿ בָֽהּ׃
32 ೩೨ ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.
וַיִּהְיוּ בְנֵֽי־יִשְׂרָאֵל בַּמִּדְבָּר וַֽיִּמְצְאוּ אִישׁ מְקֹשֵׁשׁ עֵצִים בְּיוֹם הַשַּׁבָּֽת׃
33 ೩೩ ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.
וַיַּקְרִיבוּ אֹתוֹ הַמֹּצְאִים אֹתוֹ מְקֹשֵׁשׁ עֵצִים אֶל־מֹשֶׁה וְאֶֽל־אַהֲרֹן וְאֶל כׇּל־הָעֵדָֽה׃
34 ೩೪ ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.
וַיַּנִּיחוּ אֹתוֹ בַּמִּשְׁמָר כִּי לֹא פֹרַשׁ מַה־יֵּעָשֶׂה לֽוֹ׃
35 ೩೫ ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
וַיֹּאמֶר יְהֹוָה אֶל־מֹשֶׁה מוֹת יוּמַת הָאִישׁ רָגוֹם אֹתוֹ בָֽאֲבָנִים כׇּל־הָעֵדָה מִחוּץ לַֽמַּחֲנֶֽה׃
36 ೩೬ ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.
וַיֹּצִיאוּ אֹתוֹ כׇּל־הָעֵדָה אֶל־מִחוּץ לַֽמַּחֲנֶה וַיִּרְגְּמוּ אֹתוֹ בָּאֲבָנִים וַיָּמֹת כַּאֲשֶׁר צִוָּה יְהֹוָה אֶת־מֹשֶֽׁה׃
37 ೩೭ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
וַיֹּאמֶר יְהֹוָה אֶל־מֹשֶׁה לֵּאמֹֽר׃
38 ೩೮ “ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.
דַּבֵּר אֶל־בְּנֵי יִשְׂרָאֵל וְאָמַרְתָּ אֲלֵהֶם וְעָשׂוּ לָהֶם צִיצִת עַל־כַּנְפֵי בִגְדֵיהֶם לְדֹרֹתָם וְנָתְנוּ עַל־צִיצִת הַכָּנָף פְּתִיל תְּכֵֽלֶת׃
39 ೩೯ ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ
וְהָיָה לָכֶם לְצִיצִת וּרְאִיתֶם אֹתוֹ וּזְכַרְתֶּם אֶת־כׇּל־מִצְוֺת יְהֹוָה וַעֲשִׂיתֶם אֹתָם וְלֹֽא־תָתוּרוּ אַחֲרֵי לְבַבְכֶם וְאַחֲרֵי עֵֽינֵיכֶם אֲשֶׁר־אַתֶּם זֹנִים אַחֲרֵיהֶֽם׃
40 ೪೦ ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ.
לְמַעַן תִּזְכְּרוּ וַעֲשִׂיתֶם אֶת־כׇּל־מִצְוֺתָי וִהְיִיתֶם קְדֹשִׁים לֵאלֹֽהֵיכֶֽם׃
41 ೪೧ ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.”
אֲנִי יְהֹוָה אֱלֹֽהֵיכֶם אֲשֶׁר הוֹצֵאתִי אֶתְכֶם מֵאֶרֶץ מִצְרַיִם לִהְיוֹת לָכֶם לֵאלֹהִים אֲנִי יְהֹוָה אֱלֹהֵיכֶֽם׃

< ಅರಣ್ಯಕಾಂಡ 15 >