< ಅರಣ್ಯಕಾಂಡ 26 >

1 ಆ ಘೋರವಾದ ವ್ಯಾಧಿ ನಿಂತ ಮೇಲೆ ಯೆಹೋವನು ಮೋಶೆಗೂ ಮತ್ತು ಆರೋನನ ಮಗನೂ, ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡ ಮಾತನಾಡಿ,
Pripetilo se je po kugi, da je Gospod spregovoril Mojzesu in Eleazarju, sinu duhovnika Arona, rekoč:
2 “ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
»Popišite glave vse skupnosti Izraelovih otrok, od dvajsetih let starosti in naprej, po vseh njihovih očetnih hišah, vse, ki so v Izraelu zmožni, da gredo na vojno.«
3 ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬ್ಯರ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಹತ್ತಿರ ಅವರ ಸಂಗಡ ಮಾತನಾಡಿ,
Mojzes in duhovnik Eleazar sta z njimi spregovorila na moábskih ravninah, pri Jordanu, blizu Jerihe, rekoč:
4 “ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಾಜಾರನೂ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ” ಎಂದನು.
» Popišite glave ljudstva, od dvajsetih let starosti in naprej, « kakor je Gospod zapovedal Mojzesu in Izraelovim otrokom, ki so odšli iz egiptovske dežele.
5 ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,
Ruben, najstarejši Izraelov sin. Rubenovi otroci: Hénoh, iz katerega prihaja družina Hénohovcev, iz Palúja družina Palújevcev.
6 ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರು, ಕರ್ಮೀಯ ವಂಶಸ್ಥರಾದ ಕರ್ಮೀಯರು ಇವರೇ.
Iz Hecróna družina Hecrónovcev, iz Karmíja družina Karmíjevcev.
7 ಇವರೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ.
To so družine Rubenovcev in tistih, ki so bili izmed njih prešteti, je bilo triinštirideset tisoč sedemsto trideset.
8 ಪಲ್ಲೂವಿನ ಮಗನು ಎಲೀಯಾಬ್.
Palújevi sinovi: Eliáb.
9 ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.
Eliábovi sinovi: Nemuél, Datán in Abirám. To sta bila tista Datán in Abirám, ki sta bila slavna v skupnosti, ki sta se pričkala zoper Mojzesa in zoper Arona v Korahovi skupini, ko so se pričkali zoper Gospoda
10 ೧೦ ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.
in zemlja je odprla svoja usta ter ju požrla skupaj s Korahom, ko je ta skupina umrla, ko je ogenj použil dvesto petdeset mož in postali so znamenje.
11 ೧೧ ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.
Vendar Korahovi otroci niso umrli.
12 ೧೨ ಸಿಮೆಯೋನ್ ಕುಲದ ಕುಟುಂಬಗಳು ಯಾವುವೆಂದರೆ: ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು, ಯಾಮೀನನ ವಂಶಸ್ಥರಾದ ಯಾಮೀನ್ಯರು, ಯಾಕೀನನ ವಂಶಸ್ಥರಾದ ಯಾಕೀನ್ಯರು,
Simeonovi sinovi po njihovih družinah: iz Nemuéla družina Nemuélovcev, iz Jamina družina Jamínovcev, iz Jahína družina Jahínovcev,
13 ೧೩ ಜೆರಹನ ವಂಶಸ್ಥರಾದ ಜೆರಹಿಯರು, ಸೌಲನ ವಂಶಸ್ಥರಾದ ಸೌಲ್ಯರು ಇವರೇ.
iz Zeraha družina Zerahovcev, iz Šaúla družina Šaúlovcev.
14 ೧೪ ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.
To so družine Simeoncev, dvaindvajset tisoč dvesto.
15 ೧೫ ಗಾದ್ ಕುಲದ ಕುಟುಂಬಗಳು ಯಾವುವೆಂದರೆ: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು,
Gadovi otroci po njihovih družinah: od Cefóna družina Cefónovcev, od Hagíja družina Hagíjevcev, od Šuníja družina Šuníjevcev,
16 ೧೬ ಒಜ್ನೀಯ ವಂಶಸ್ಥರಾದ ಒಜ್ನೀಯರು, ಏರೀಯ ವಂಶಸ್ಥರಾದ ಏರೀಯರು,
od Ozníja družina Ozníjevcev, od Eríja družina Eríjevcev,
17 ೧೭ ಅರೋದನ ವಂಶಸ್ಥರಾದ ಅರೋದ್ಯರು, ಅರೇಲೀಯ ವಂಶಸ್ಥರಾದ ಅರೇಲೀಯರು ಇವರೇ.
od Aróda družina Aródovcev, od Arelíja družina Arelíjcev.
18 ೧೮ ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ.
To so družine Gadovih otrok glede na tiste, ki so bili izmed njih prešteti, štirideset tisoč petsto.
19 ೧೯ ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು.
Judova sinova sta bila Er in Onán, in Er in Onán sta umrla v kánaanski deželi.
20 ೨೦ ಯೆಹೂದನ ಕುಲದಲ್ಲಿ ಉಳಿದ ಕುಟುಂಬಗಳು ಯಾವುವೆಂದರೆ: ಶೇಲಹನ ವಂಶಸ್ಥರಾದ ಶೇಲಾನ್ಯರು, ಪೆರೆಹನ ವಂಶಸ್ಥರಾದ ಪೆರೆಚ್ಯರು, ಜೆರಹನ ವಂಶಸ್ಥರಾದ ಜೆರಹಿಯರು ಇವರೇ.
Judovi sinovi po njihovih družinah so bili: od Šelája družina Šelájevcev, od Pareca družina Parecovcev, od Zeraha družina Zerahovcev.
21 ೨೧ ಪೆರೆಚನಿಂದುಂಟಾದ ಕುಟುಂಬಗಳು: ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರೂ ಹಾಮೂಲನ ವಂಶಸ್ಥರಾದ ಹಾಮೂಲ್ಯರೂ.
Parecovi sinovi so bili: od Hecróna družina Hecrónovcev, od Hamúla družina Hamúlovcev.
22 ೨೨ ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ.
To so Judove družine, glede na tiste, ki so bili izmed njih prešteti, šestinsedemdeset tisoč petsto.
23 ೨೩ ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ: ತೋಲನ ವಂಶಸ್ಥರಾದ ತೋಲಾಯರು, ಪುವ್ವನ ವಂಶಸ್ಥರಾದ ಪೂನ್ಯರು,
Od Isahárjevih sinov po njihovih družinah: od Tolá družina Tolájevcev, od Puvá družina Puvájevcev,
24 ೨೪ ಯಾಶೂಬನ ವಂಶಸ್ಥರಾದ ಯಾಶೂಬ್ಯರು, ಶಿಮ್ರೋನನ ವಂಶಸ್ಥರಾದ ಶಿಮ್ರೋನ್ಯರು ಇವರೇ.
od Jašúba družina Jašúbovcev, od Šimróna družina Šimrónovcev.
25 ೨೫ ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ.
To so družine Isahárja, glede na tiste, ki so bili izmed njih prešteti, šestinsedemdeset tisoč tristo.
26 ೨೬ ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ: ಸೆರೆದನ ವಂಶಸ್ಥರಾದ ಸೆರೆದ್ಯರು, ಏಲೋನನ ವಂಶಸ್ಥರಾದ ಏಲೋನ್ಯರು, ಯಹಲೇಲನ ವಂಶಸ್ಥರಾದ ಯಹಲೇಲ್ಯರು.
Od Zábulonovih sinov po njihovih družinah: od Sereda družina Seredovcev, od Elóna družina Elónovcev, od Jahleéla družina Jahleélovcev.
27 ೨೭ ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ.
To so družine Zábulonovcev, glede na tiste, ki so bili izmed njih prešteti, šestdeset tisoč petsto.
28 ೨೮ ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯೀಮ್.
Jožefova sinova po svojih družinah sta bila Manáse in Efrájim.
29 ೨೯ ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ: ಮಾಕೀರನ ವಂಶಸ್ಥರಾದ ಮಾಕೀರ್ಯರು, ಮಾಕೀರನ ಮಗನಾದ ಗಿಲ್ಯಾದನ ವಂಶಸ್ಥರಾದ ಗಿಲ್ಯಾದ್ಯರು ಇವರೇ.
Od Manásejevih sinov: od Mahírja družina Mahírjevcev in Mahír je zaplodil Gileáda. Iz Gileáda je izšla družina Gileádcev.
30 ೩೦ ಗಿಲ್ಯಾದನ ವಂಶದವರು ಯಾರೆಂದರೆ: ಈಯೆಜೆರನ ವಂಶಸ್ಥರಾದ ಈಯೆಜೆರ್ಯರು, ಹೇಲೆಕನ ವಂಶಸ್ಥರಾದ ಹೇಲೆಕ್ಯರು,
To so Gileádovi sinovi: od Iezerja družina Iezerjevcev, od Heleka družina Helekovcev
31 ೩೧ ಅಸ್ರೀಯೇಲನ ವಂಶಸ್ಥರಾದ ಅಸ್ರೀಯೇಲ್ಯರು, ಶೆಕೆಮನ ವಂಶಸ್ಥರಾದ ಶೆಕೆಮ್ಯರು,
in od Asriéla družina Asriélovcev in od Sihema družina Sihemcev
32 ೩೨ ಶೆಮೀದಾಯನ ವಂಶಸ್ಥರಾದ ಶೆಮೀದಾಯರು, ಹೇಫೆರನ ವಂಶಸ್ಥರಾದ ಹೇಫೆರ್ಯರು ಇವರೇ.
in od Šemidája družina Šemidájevcev in od Heferja družina Heferjevcev.
33 ೩೩ ಹೇಫೆರನ ಮಗನಾದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡುಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣುಮಕ್ಕಳು: ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರೇ.
Celofhád, sin Heferja, pa ni imel sinov, temveč hčere in imena Celofhádovih hčera so bila Mahla, Noa, Hogla, Milka in Tirca.
34 ೩೪ ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.
To so Manásejeve družine in tistih, ki so bili izmed njih prešteti, dvainpetdeset tisoč sedemsto.
35 ೩೫ ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,
To so Efrájimovi sinovi po njihovih družinah: od Šutélaha družina Šutélahovcev, od Beherja družina Beherjevcev, od Tahana družina Táhanovcev.
36 ೩೬ ಶೂತೆಲಹನ ಮಗನಾದ ಏರಾನನ ವಂಶಸ್ಥರಾದ ಏರಾನ್ಯರು ಇವರೇ.
To so Šutélahovi sinovi: od Erána družina Eránovcev.
37 ೩೭ ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.
To so družine Efrájimovih sinov glede na tiste, ki so bili izmed njih prešteti, dvaintrideset tisoč petsto. To so Jožefovi sinovi po njihovih družinah.
38 ೩೮ ಬೆನ್ಯಾಮೀನ್ ಕುಲದ ಕುಟುಂಬಗಳು ಯಾವುವೆಂದರೆ: ಬೆಲಗನ ವಂಶಸ್ಥರಾದ ಬೆಲಗ್ಯರು, ಅಷ್ಬೇಲನ ವಂಶಸ್ಥರಾದ ಅಷ್ಬೇಲ್ಯರು, ಅಹೀರಾಮನ ವಂಶಸ್ಥರಾದ ಅಹೀರಾಮ್ಯರು,
Benjaminovi sinovi po njihovih družinah: od Bela družina Bélovcev, od Ašbéla družina Ašbélovcev, od Ahiráma družina Ahirámovcev,
39 ೩೯ ಶೂಫಾಮನ ವಂಶಸ್ಥರಾದ ಶೂಫಾಮ್ಯರು, ಹೊಫಾಮನ ವಂಶಸ್ಥರಾದ ಹೊಫಾಮ್ಯರು ಇವರೇ.
od Šufáma družina Šufámovcev, od Hufáma družina Hufámovcev.
40 ೪೦ ಬೆಲಗನಿಗೆ ಅರ್ದ್, ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನ ವಂಶದವರು ಅರ್ದ್ಯರು, ನಾಮಾನನ ವಂಶದವರು ನಾಮಾನ್ಯರು.
Belova sinova sta bila Ard in Naamán: od Arda družina Ardovcev in od Naamána družina Naamánovcev.
41 ೪೧ ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ.
To so Benjaminovi sinovi po svojih družinah in tistih, ki so bili izmed njih prešteti, je bilo petinštirideset tisoč šeststo.
42 ೪೨ ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ಯರು.
To so Danovi sinovi po svojih družinah: od Šuháma družina Šuhámovcev. To so Danove družine po svojih družinah.
43 ೪೩ ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ.
Vseh družin Šuhámovcev, glede na tiste, ki so bili izmed njih prešteti, je bilo štiriinšestdeset tisoč štiristo.
44 ೪೪ ಆಶೇರ್ ಕುಲದ ಕುಟುಂಬಗಳು: ಇಮ್ನಾಹನ ವಂಶಸ್ಥರಾದ ಇಮ್ನಾಹ್ಯರು, ಇಷ್ವೀಯ ವಂಶಸ್ಥರಾದ ಇಷ್ವೀಯರು, ಬೆರೀಯನ ವಂಶಸ್ಥರಾದ ಬೆರೀಯರು.
Od Aserjevih otrok po svojih družinah: od Jimnája družina Jimnájevcev, od Jišvíja družina Jišvíjevcev, od Berijá družina Berijájevcev.
45 ೪೫ ಬೆರೀಯನ ಮಕ್ಕಳಿಂದುಂಟಾದ ಕುಟುಂಬಗಳು: ಹೇಬೆರನ ವಂಶಸ್ಥರಾದ ಹೇಬೆರ್ಯರು, ಮಲ್ಕೀಯೇಲನ ವಂಶಸ್ಥರಾದ ಮಲ್ಕೀಯೇಲ್ಯರು.
Berijájevi sinovi: od Heberja družina Heberjevcev, od Malkiéla družina Malkiélovcev.
46 ೪೬ ಆಶೇರನಿಗೆ ಸೆರಹಳೆಂಬ ಮಗಳು ಸಹ ಇದ್ದಳು.
Ime Aserjeve hčere je bilo Sara.
47 ೪೭ ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ.
To so družine Aserjevih sinov glede na tiste, ki so bili izmed njih prešteti, katerih je bilo triinpetdeset tisoč štiristo.
48 ೪೮ ನಫ್ತಾಲಿ ಕುಲದ ಕುಟುಂಬಗಳು: ಯಹಚೇಲನ ವಂಶಸ್ಥರಾದ ಯಹಚೇಲ್ಯರು, ಗೂನೀಯ ವಂಶಸ್ಥರಾದ ಗೂನೀಯರು,
Od Neftálijevih sinov po svojih družinah: od Jahceéla družina Jahceélovcev, od Guníja družina Guníjevcev,
49 ೪೯ ಯೇಚೆರನ ವಂಶಸ್ಥರಾದ ಯೇಚೆರ್ಯರು, ಶಿಲ್ಲೇಮನ ವಂಶಸ್ಥರಾದ ಶಿಲ್ಲೇಮ್ಯರು.
od Jecerja družina Jecerjevcev, od Šiléma družina Šilémovcev.
50 ೫೦ ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ.
To so Neftálijeve družine glede na svoje družine. Tistih, ki so bili izmed njih prešteti, je bilo petinštirideset tisoč štiristo.
51 ೫೧ ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730.
Ti so bili prešteti izmed Izraelovih otrok, šeststo en tisoč sedemsto trideset.
52 ೫೨ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,
Gospod je spregovoril Mojzesu, rekoč:
53 ೫೩ “ನೀವು ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ದೇಶವನ್ನು ಸ್ವದೇಶವಾಗುವಂತೆ ಹಂಚಿಕೊಡಬೇಕು.
»Tem bo dežela razdeljena v dediščino, glede na število imen.
54 ೫೪ ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ, ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಕೊಡಬೇಕು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿಯೊಂದು ಕುಲಕ್ಕೆ ಭೂಮಿಯನ್ನು ಸ್ವತ್ತಾಗಿ ಕೊಡಬೇಕು.
Mnogim boš dal več dediščine in maloštevilnim boš dal manj dediščine. Vsakomur bo njegova dediščina dana glede na tiste, ki jih je preštel.
55 ೫೫ ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.
Vendar naj bo dežela razdeljena z žrebom. Dedujejo naj glede na imena rodov svojih očetov.
56 ೫೬ ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆಯಾದ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸ್ವತ್ತನ್ನು ಗೊತ್ತುಮಾಡಬೇಕು.”
Njihova posest bo glede na žreb razdeljena med številne in maloštevilne.«
57 ೫೭ ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು: ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು.
To so tisti, ki so bili prešteti izmed Lévijevcev po njihovih družinah: iz Geršóna družina Geršónovcev, iz Keháta družina Kehátovcev, iz Meraríja družina Meraríjevcev.
58 ೫೮ ಲೇವಿ ಕುಲದವರ ಕುಟುಂಬಗಳು: ಲಿಬ್ನೀಯರ ಕುಟುಂಬ, ಹೆಬ್ರೋನ್ಯರ ಕುಟುಂಬ, ಮಹ್ಲೀಯರ ಕುಟುಂಬ, ಮೂಷೀಯರ ಕುಟುಂಬ, ಕೋರಹಿಯರ ಕುಟುಂಬ ಇವುಗಳೇ. ಕೆಹಾತನು ಅಮ್ರಾಮನನ್ನು ಪಡೆದನು.
To so družine Lévijevcev: družina Libníjevcev, družina Hebróncev, družina Mahlíjevcev, družina Mušíjevcev, družina Kórahovcev. In Kehát je zaplodil Amráma.
59 ೫೯ ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು.
Ime Amrámove žene je bilo Johébeda, Lévijeva hči, ki jo je njena mati rodila Leviju v Egiptu, in Amrámu je rodila Arona, Mojzesa in njuno sestro Mirjam.
60 ೬೦ ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು.
Aronu so bili rojeni Nadáb, Abihú, Eleazar in Itamár.
61 ೬೧ ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು.
Nadáb in Abihú sta umrla, ko sta pred Gospodom darovala tuj ogenj.
62 ೬೨ ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.
Tistih, ki so bili izmed njih prešteti, je bilo triindvajset tisoč, vseh moških starih en mesec in več, kajti niso bili prešteti izmed Izraelovih otrok, ker jim ni bila dana dediščina med Izraelovimi otroki.
63 ೬೩ ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.
To so tisti, ki sta jih preštela Mojzes in duhovnik Eleazar, ki sta Izraelove otroke preštela na moábskih ravninah pri Jordanu, blizu Jerihe.
64 ೬೪ ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.
Toda med temi ni bilo moža izmed njih, ki ga Mojzes in duhovnik Aron ne bi preštela, ko so v Sinajski divjini šteli Izraelove otroke.
65 ೬೫ ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.
Kajti Gospod je o njih rekel: »Zagotovo bodo umrli v divjini.« In tam izmed njih ni ostalo nobenega moža razen Jefunéjevega sina Kaléba in Nunovega sina Józueta.

< ಅರಣ್ಯಕಾಂಡ 26 >