< ಅರಣ್ಯಕಾಂಡ 28 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
여호와께서 모세에게 일러 가라사대
2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’
이스라엘 자손에게 명하여 그들에게 이르라 나의 예물, 나의 식물되는 화제, 나의 향기로운 것은 너희가 그 정한 시기에 삼가 내게 드릴지니라
3 ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.
또 그들에게 이르라 너희가 여호와께 드릴 화제는 이러하니 일 년 되고 흠 없는 수양을 매일 둘씩 상번제로 드리되
4 ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು.
한 어린 양은 아침에 드리고 한 어린 양은 해 질 때에 드릴 것이요
5 ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.
또 고운 가루 에바 십분지 일에 빻아낸 기름 힌 사분지 일을 섞어서 소제로 드릴 것이니
6 ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.
이는 시내 산에서 정한 상번제로서 여호와께 드리는 향기로운 화제며
7 ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.
또 그 전제는 어린 양 하나에 힌 사분지 일을 드리되 거룩한 곳에서 여호와께 독주의 전제를 부어 드릴 것이며
8 ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು.
해 질 때에는 그 한 어린 양을 드리되 그 소제와 전제를 아침 것 같이 여호와께 향기로운 화제로 드릴 것이니라
9 “‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.
안식일에는 일 년 되고 흠 없는 수양 둘과 고운 가루 에바 십분지 이에 기름 섞은 소제와 그 전제를 드릴 것이니
10 ೧೦ ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.
이는 매 안식일의 번제라 상번제와 그 전제 외에니라
11 ೧೧ “‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.
월삭에는 수송아지 둘과 수양 하나와 일 년 되고 흠 없은 수양 일곱으로 여호와께 번제를 드리되
12 ೧೨ ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು ಸೇರಿಸಬೇಕು.
매 수송아지에는 고운 가루 에바 십분지 삼에 기름 섞은 소제와 수양 하나에는 고운 가루 에바 십분지 이에 기름 섞은 소제와
13 ೧೩ ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.
매 어린 양에는 고운 가루 에바 십분지 일에 기름 섞은 소제를 향기로운 번제로 여호와께 화제로 드릴 것이며
14 ೧೪ ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ಸರ್ವಾಂಗಹೋಮವನ್ನು ಮಾಡಬೇಕು.
그 전제는 수송아지 하나에 포도주 반 힌이요 수양 하나에 삼분지 일 힌이요 어린 양 하나에 사분지 일 힌이니 이는 일 년 중 매 월삭의 번제며
15 ೧೫ ನಿತ್ಯ ಸರ್ವಾಂಗಹೋಮ ಹೊರತು ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು.
또 상번제와 그 전제 외에 수염소 하나를 속죄제로 여호와께 드릴 것이니라
16 ೧೬ “‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು.
정월 십사일은 여호와의 유월절이며
17 ೧೭ ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
또 그 달 십오일 부터는 절일이니 칠 일 동안 무교병을 먹을 것이며
18 ೧೮ ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
그 첫날에는 성회로 모일 것이요 아무 노동도 하지 말 것이며
19 ೧೯ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.
수송아지 둘과 수양 하나와 일 년 된 수양 일곱을 다 흠 없은 것으로 여호와께 화제를 드려 번제가 되게 할 것이며
20 ೨೦ ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,
그 소제로는 고운 가루에 기름을 섞어서 쓰되 수송아지 하나에는 에바 십분지 삼이요 수양 하나에는 에바 십분지 이를 드리고
21 ೨೧ ಏಳು ಕುರಿಮರಿಯಲ್ಲಿ ಒಂದೊಂದಕ್ಕೆ ಎಣ್ಣೆ ಬೆರೆಸಿದ ಮೂರು ಸೇರನ್ನು,
어린 양 일곱에는 매 어린 양에 에바 십분지 일을 드릴 것이며
22 ೨೨ ಅದಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
또 너희를 속하기 위하여 수염소 하나로 속죄제를 드리되
23 ೨೩ ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
아침의 번제 곧 상번제 외에 그것들을 드릴 것이니라
24 ೨೪ ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.
너희는 이 순서대로 칠 일 동안 매일 여호와께 향기로운 화제의 식물을 드리되 상번제와 그 전제 외에 드릴 것이며
25 ೨೫ ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.
제칠일에는 성회로 모일 것이요 아무 노동도 하지 말 것이니라
26 ೨೬ “‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
칠칠절 처음 익은 열매 드리는 날에 너희가 여호와께 새 소제를 드릴 때에도 성회로 모일 것이요 아무 노동도 하지 말 것이며
27 ೨೭ ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,
수송아지 둘과 수양 하나와 일 년 된 수양 일곱으로 여호와께 향기로운 번제를 드릴 것이며
28 ೨೮ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಟಗರಿಗೆ ಒಂಭತ್ತು ಸೇರು,
그 소제로는 고운 가루에 기름을 섞어서 쓰되 매 수송아지에는 에바 십분지 삼이요 수양 하나에는 에바 십분지 이요
29 ೨೯ ಹೋರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನೂ,
어린 양 일곱에는 매 어린 양에 에바 십분지 일을 드릴 것이며
30 ೩೦ ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.
또 너희를 속하기 위하여 수염소 하나를 드리되
31 ೩೧ ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’”
너희는 다 흠 없는 것으로 상번제와 그 소제와 전제 외에 그것들을 드릴 것이니라

< ಅರಣ್ಯಕಾಂಡ 28 >