< ಅರಣ್ಯಕಾಂಡ 29 >

1 “‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
A sedmoga mjeseca prvi dan da imate sveti sabor; posla ropskoga nijednoga ne radite; to da vam je trubni dan.
2 ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.
I prinesite žrtvu paljenicu za miris ugodni Gospodu, jedno tele, jednoga ovna, sedam jaganjaca od godine zdravijeh;
3 ಧಾನ್ಯನೈವೇದ್ಯಕ್ಕಾಗಿ ಆ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಎಣ್ಣೆ ಬೆರೆಸಿದ ಆರು ಸೇರು ಹಿಟ್ಟನ್ನು,
A dar uz njih bijeloga brašna smiješana s uljem tri desetine uz tele i dvije desetine uz ovna,
4 ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಮೂರು ಸೇರು ಎಣ್ಣೆ ಬೆರಸಿದ ಹಿಟ್ಟನ್ನು,
I po jednu desetinu uza svako jagnje od sedam jaganjaca;
5 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು.
I jednoga jarca za grijeh, radi oèišæenja vašega;
6 ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.
Osim žrtve paljenice u poèetku mjeseca i dara njezina, i osim svagdašnje žrtve paljenice i dara njezina i naljeva njihovijeh po uredbi njihovoj, za miris ugodni, za žrtvu ognjenu Gospodu.
7 “‘ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಯಾವ ಕೆಲಸವನ್ನೂ ಮತ್ತು ಊಟವನ್ನು ಮಾಡದೆ ನಿಮ್ಮನ್ನು ತಗ್ಗಿಸಿಕೊಳ್ಳುವುದಕ್ಕಾಗಿ ದೇವಾರಾಧನೆಗಾಗಿ ಸಭೆಕೂಡಬೇಕು.
I deseti dan toga mjeseca sedmoga da imate sveti sabor; i muèite duše svoje; ne radite nikakoga posla;
8 ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.
Nego prinesite Gospodu za miris ugodni žrtvu paljenicu, jedno tele, jednoga ovna, sedam jaganjaca od godine, a neka vam je zdravo;
9 ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಆರು ಸೇರು ಎಣ್ಣೆ ಬೆರೆಸಿದ ಹಿಟ್ಟನ್ನು,
I dar uz njih bijeloga brašna pomiješana s uljem tri desetine uz tele, dvije desetine uz ovna,
10 ೧೦ ಏಳು ಕುರಿಗಳಲ್ಲಿ ಒಂದೊಂದಕ್ಕೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು,
Po jednu desetinu uza svako jagnje od onijeh sedam jaganjaca;
11 ೧೧ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ದೋಷಪರಿಹಾರಕ ಯಜ್ಞಕ್ಕಾಗಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.
Jarca jednoga za grijeh, osim žrtve za grijeh radi oèišæenja, i osim svagdašnje žrtve paljenice i dara njezina i naljeva njihovijeh.
12 ೧೨ “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.
I petnaesti dan toga mjeseca sedmoga da imate sveti sabor; nijednoga posla ropskoga ne radite; nego praznujte praznik Gospodu sedam dana.
13 ೧೩ ಆ ದಿನದಲ್ಲಿ ನಿತ್ಯ ಸರ್ವಾಂಗಹೋಮ, ಧಾನ್ಯದ್ರವ್ಯ, ಪಾನದ್ರವ್ಯ, ನೈವೇದ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹದಿಮೂರು ಹೋರಿಗಳನ್ನೂ, ಎರಡು ಟಗರುಗಳನ್ನೂ, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಗಳನ್ನೂ,
I prinesite žrtvu paljenicu, ognjenu žrtvu za ugodni miris Gospodu, trinaest telaca, dva ovna, èetrnaest jaganjaca od godine, a neka su zdravi;
14 ೧೪ ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಎಣ್ಣೆ ಬೆರಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು,
I dar uz njih brašna bijeloga smiješana s uljem po tri desetine uza svako tele od trinaest telaca, po dvije desetine uza svakoga ovna od ona dva ovna,
15 ೧೫ ಹದಿನಾಲ್ಕು ಕುರಿಮರಿಗಳಿಗೆ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನೂ ಸಮರ್ಪಿಸಬೇಕು.
I po jednu desetinu uza svako jagnje od onijeh èetrnaest jaganjaca;
16 ೧೬ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ನಿತ್ಯ ಸರ್ವಾಂಗಹೋಮವನ್ನು, ಧಾನ್ಯನೈವೇದ್ಯವನ್ನು, ಪಾನದ್ರವ್ಯವನ್ನು ತಂದು ಸಮರ್ಪಿಸಬೇಕು.
I jednoga jarca za grijeh, osim svagdašnje žrtve paljenice i dara njezina i naljeva njezina.
17 ೧೭ “‘ಆ ಉತ್ಸವದ ಎರಡನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಹನ್ನೆರಡು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು.
A drugi dan dvanaest telaca, dva ovna, èetrnaest jaganjaca od godine zdravijeh,
18 ೧೮ ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ,
I dar njihov i naljev njihov, uz teoce, uz ovnove i uz jaganjce, po broju njihovu, kako je ureðeno;
19 ೧೯ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ನಿತ್ಯ ಸರ್ವಾಂಗಹೋಮಕ್ಕಾಗಿ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
I jarca jednoga za grijeh, osim svagdašnje žrtve paljenice i dara njezina i naljeva njezina.
20 ೨೦ “‘ಮೂರನೆಯ ದಿನದಲ್ಲಿ ದೋಷವಿಲ್ಲದ ಹನ್ನೊಂದು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ,
A treæi dan jedanaest telaca, dva ovna i èetrnaest jaganjaca od godine zdravijeh;
21 ೨೧ ನೈವೇದ್ಯಕ್ಕಾಗಿ ಹೋರಿ, ಟಗರು, ಮತ್ತು ಕುರಿಮರಿಗಳನ್ನು ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
I darove njihove i naljeve njihove, uz teoce, uz ovnove i uz jaganjce, po broju njihovu, kako je ureðeno;
22 ೨೨ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
I jednoga jarca za grijeh, osim svagdašnje žrtve paljenice i dara njezina i naljeva njezina.
23 ೨೩ “‘ನಾಲ್ಕನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಹತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
A èetvrti dan deset telaca, dva ovna, èetrnaest jaganjaca od godine zdravijeh;
24 ೨೪ ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
I dar njihov i naljeve njihove, uz teoce, uz ovnove i uz jaganjce, po broju njihovu, kako je ureðeno;
25 ೨೫ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
I jednoga jarca za grijeh, osim svagdašnje žrtve paljenice i dara njezina i naljeva njezina.
26 ೨೬ “‘ಐದನೆಯ ದಿನದಲ್ಲಿ ನೀವು ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಒಂಭತ್ತು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
A peti dan devet telaca, dva ovna, èetrnaest jaganjaca od godine zdravijeh;
27 ೨೭ ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
I dar njihov i naljeve njihove, uz teoce, uz ovnove i uz jaganjce, po broju njihovu, kako je ureðeno;
28 ೨೮ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ, ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
I jednoga jarca za grijeh, osim svagdašnje žrtve paljenice i dara njezina i naljeva njezina.
29 ೨೯ “‘ಆರನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ದೋಷವಿಲ್ಲದ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
A šesti dan osam telaca, dva ovna, èetrnaest jaganjaca od godine zdravijeh,
30 ೩೦ ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
I dar njihov i naljeve njihove, uz teoce, uz ovnove i uz jaganjce, po broju njihovu, kako je ureðeno;
31 ೩೧ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
I jednoga jarca za grijeh, osim svagdašnje žrtve paljenice i dara njezina i naljeva njezina.
32 ೩೨ “‘ಏಳನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ದೋಷವಿಲ್ಲದ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
A sedmi dan sedam telaca, dva ovna, èetrnaest jaganjaca od godine zdravijeh,
33 ೩೩ ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
I dar njihov i naljeve njihove, uz teoce, uz ovnove i uz jaganjce, po broju njihovu, kako je ureðeno;
34 ೩೪ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
I jarca za grijeh, osim svagdašnje žrtve paljenice i dara njezina i naljeva njezina.
35 ೩೫ “‘ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು.
A osmi dan da vam je praznik; nijednoga posla ropskoga ne radite.
36 ೩೬ ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.
Nego prinesite žrtvu paljenicu, žrtvu ognjenu za ugodni miris Gospodu, jedno tele, jednoga ovna, sedam jaganjaca od godine zdravijeh,
37 ೩೭ “‘ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು
I dar njihov i naljeve njihove, uz tele, uz ovna i uz jaganjce, po broju njihovu, kako je ureðeno;
38 ೩೮ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
I jednoga jarca za grijeh, osim svagdašnje žrtve paljenice i dara njezina i naljeva njezina.
39 ೩೯ “‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’”
To prinosite Gospodu na praznike svoje, osim onoga što biste po zavjetu ili od svoje volje prinijeli za žrtve paljenice ili darove ili naljeve ili žrtve zahvalne.
40 ೪೦ ಯೆಹೋವನು ಮಾಡಿದ ಈ ಎಲ್ಲಾ ಆಜ್ಞೆಗಳನ್ನು ಮೋಶೆ ಇಸ್ರಾಯೇಲರಿಗೆ ತಿಳಿಸಿದನು.
I kaza Mojsije sinovima Izrailjevijem sve što zapovjedi Gospod.

< ಅರಣ್ಯಕಾಂಡ 29 >