< ಅರಣ್ಯಕಾಂಡ 6 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃
2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,
דַּבֵּר֙ אֶל־בְּנֵ֣י יִשְׂרָאֵ֔ל וְאָמַרְתָּ֖ אֲלֵהֶ֑ם אִ֣ישׁ אֽוֹ־אִשָּׁ֗ה כִּ֤י יַפְלִא֙ לִנְדֹּר֙ נֶ֣דֶר נָזִ֔יר לְהַזִּ֖יר לַֽיהוָֽה׃
3 ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.
מִיַּ֤יִן וְשֵׁכָר֙ יַזִּ֔יר חֹ֥מֶץ יַ֛יִן וְחֹ֥מֶץ שֵׁכָ֖ר לֹ֣א יִשְׁתֶּ֑ה וְכָל־מִשְׁרַ֤ת עֲנָבִים֙ לֹ֣א יִשְׁתֶּ֔ה וַעֲנָבִ֛ים לַחִ֥ים וִיבֵשִׁ֖ים לֹ֥א יֹאכֵֽל׃
4 ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.
כֹּ֖ל יְמֵ֣י נִזְר֑וֹ מִכֹּל֩ אֲשֶׁ֨ר יֵעָשֶׂ֜ה מִגֶּ֣פֶן הַיַּ֗יִן מֵחַרְצַנִּ֛ים וְעַד־זָ֖ג לֹ֥א יֹאכֵֽל׃
5 “ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.
כָּל־יְמֵי֙ נֶ֣דֶר נִזְר֔וֹ תַּ֖עַר לֹא־יַעֲבֹ֣ר עַל־רֹאשׁ֑וֹ עַד־מְלֹ֨את הַיָּמִ֜ם אֲשֶׁר־יַזִּ֤יר לַיהוָה֙ קָדֹ֣שׁ יִהְיֶ֔ה גַּדֵּ֥ל פֶּ֖רַע שְׂעַ֥ר רֹאשֽׁוֹ׃
6 ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು.
כָּל־יְמֵ֥י הַזִּיר֖וֹ לַיהוָ֑ה עַל־נֶ֥פֶשׁ מֵ֖ת לֹ֥א יָבֹֽא׃
7 ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.
לְאָבִ֣יו וּלְאִמּ֗וֹ לְאָחִיו֙ וּלְאַ֣חֹת֔וֹ לֹא־יִטַּמָּ֥א לָהֶ֖ם בְּמֹתָ֑ם כִּ֛י נֵ֥זֶר אֱלֹהָ֖יו עַל־רֹאשֽׁוֹ׃
8 ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳೆಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು.
כֹּ֖ל יְמֵ֣י נִזְר֑וֹ קָדֹ֥שׁ ה֖וּא לַֽיהוָֽה׃
9 ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.
וְכִֽי־יָמ֨וּת מֵ֤ת עָלָיו֙ בְּפֶ֣תַע פִּתְאֹ֔ם וְטִמֵּ֖א רֹ֣אשׁ נִזְר֑וֹ וְגִלַּ֤ח רֹאשׁוֹ֙ בְּי֣וֹם טָהֳרָת֔וֹ בַּיּ֥וֹם הַשְּׁבִיעִ֖י יְגַלְּחֶֽנּוּ׃
10 ೧೦ ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
וּבַיּ֣וֹם הַשְּׁמִינִ֗י יָבִא֙ שְׁתֵּ֣י תֹרִ֔ים א֥וֹ שְׁנֵ֖י בְּנֵ֣י יוֹנָ֑ה אֶל־הַכֹּהֵ֔ן אֶל־פֶּ֖תַח אֹ֥הֶל מוֹעֵֽד׃
11 ೧೧ ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.
וְעָשָׂ֣ה הַכֹּהֵ֗ן אֶחָ֤ד לְחַטָּאת֙ וְאֶחָ֣ד לְעֹלָ֔ה וְכִפֶּ֣ר עָלָ֔יו מֵאֲשֶׁ֥ר חָטָ֖א עַל־הַנָּ֑פֶשׁ וְקִדַּ֥שׁ אֶת־רֹאשׁ֖וֹ בַּיּ֥וֹם הַהֽוּא׃
12 ೧೨ ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.
וְהִזִּ֤יר לַֽיהוָה֙ אֶת־יְמֵ֣י נִזְר֔וֹ וְהֵבִ֛יא כֶּ֥בֶשׂ בֶּן־שְׁנָת֖וֹ לְאָשָׁ֑ם וְהַיָּמִ֤ים הָרִאשֹׁנִים֙ יִפְּל֔וּ כִּ֥י טָמֵ֖א נִזְרֽוֹ׃
13 ೧೩ ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.
וְזֹ֥את תּוֹרַ֖ת הַנָּזִ֑יר בְּי֗וֹם מְלֹאת֙ יְמֵ֣י נִזְר֔וֹ יָבִ֣יא אֹת֔וֹ אֶל־פֶּ֖תַח אֹ֥הֶל מוֹעֵֽד׃
14 ೧೪ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಟಗರನ್ನು ತರಬೇಕು.
וְהִקְרִ֣יב אֶת־קָרְבָּנ֣וֹ לַיהוָ֡ה כֶּבֶשׂ֩ בֶּן־שְׁנָת֨וֹ תָמִ֤ים אֶחָד֙ לְעֹלָ֔ה וְכַבְשָׂ֨ה אַחַ֧ת בַּת־שְׁנָתָ֛הּ תְּמִימָ֖ה לְחַטָּ֑את וְאַֽיִל־אֶחָ֥ד תָּמִ֖ים לִשְׁלָמִֽים׃
15 ೧೫ ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.
וְסַ֣ל מַצּ֗וֹת סֹ֤לֶת חַלֹּת֙ בְּלוּלֹ֣ת בַּשֶּׁ֔מֶן וּרְקִיקֵ֥י מַצּ֖וֹת מְשֻׁחִ֣ים בַּשָּׁ֑מֶן וּמִנְחָתָ֖ם וְנִסְכֵּיהֶֽם׃
16 ೧೬ ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕ ಯಜ್ಞವನ್ನೂ ಮತ್ತು ಸರ್ವಾಂಗಹೋಮವನ್ನೂ ಸಮರ್ಪಿಸಬೇಕು.
וְהִקְרִ֥יב הַכֹּהֵ֖ן לִפְנֵ֣י יְהוָ֑ה וְעָשָׂ֥ה אֶת־חַטָּאת֖וֹ וְאֶת־עֹלָתֽוֹ׃
17 ೧೭ ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.
וְאֶת־הָאַ֜יִל יַעֲשֶׂ֨ה זֶ֤בַח שְׁלָמִים֙ לַֽיהוָ֔ה עַ֖ל סַ֣ל הַמַּצּ֑וֹת וְעָשָׂה֙ הַכֹּהֵ֔ן אֶת־מִנְחָת֖וֹ וְאֶת־נִסְכּֽוֹ׃
18 ೧೮ ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
וְגִלַּ֣ח הַנָּזִ֗יר פֶּ֛תַח אֹ֥הֶל מוֹעֵ֖ד אֶת־רֹ֣אשׁ נִזְר֑וֹ וְלָקַ֗ח אֶת־שְׂעַר֙ רֹ֣אשׁ נִזְר֔וֹ וְנָתַן֙ עַל־הָאֵ֔שׁ אֲשֶׁר־תַּ֖חַת זֶ֥בַח הַשְּׁלָמִֽים׃
19 ೧೯ ತರುವಾಯ ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.
וְלָקַ֨ח הַכֹּהֵ֜ן אֶת־הַזְּרֹ֣עַ בְּשֵׁלָה֮ מִן־הָאַיִל֒ וְֽחַלַּ֨ת מַצָּ֤ה אַחַת֙ מִן־הַסַּ֔ל וּרְקִ֥יק מַצָּ֖ה אֶחָ֑ד וְנָתַן֙ עַל־כַּפֵּ֣י הַנָּזִ֔יר אַחַ֖ר הִֽתְגַּלְּח֥וֹ אֶת־נִזְרֽוֹ׃
20 ೨೦ ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.
וְהֵנִיף֩ אוֹתָ֨ם הַכֹּהֵ֥ן ׀ תְּנוּפָה֮ לִפְנֵ֣י יְהוָה֒ קֹ֤דֶשׁ הוּא֙ לַכֹּהֵ֔ן עַ֚ל חֲזֵ֣ה הַתְּנוּפָ֔ה וְעַ֖ל שׁ֣וֹק הַתְּרוּמָ֑ה וְאַחַ֛ר יִשְׁתֶּ֥ה הַנָּזִ֖יר יָֽיִן׃
21 ೨೧ ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”
זֹ֣את תּוֹרַ֣ת הַנָּזִיר֮ אֲשֶׁ֣ר יִדֹּר֒ קָרְבָּנ֤וֹ לַֽיהוָה֙ עַל־נִזְר֔וֹ מִלְּבַ֖ד אֲשֶׁר־תַּשִּׂ֣יג יָד֑וֹ כְּפִ֤י נִדְרוֹ֙ אֲשֶׁ֣ר יִדֹּ֔ר כֵּ֣ן יַעֲשֶׂ֔ה עַ֖ל תּוֹרַ֥ת נִזְרֽוֹ׃ פ
22 ೨೨ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃
23 ೨೩ “ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,
דַּבֵּ֤ר אֶֽל־אַהֲרֹן֙ וְאֶל־בָּנָ֣יו לֵאמֹ֔ר כֹּ֥ה תְבָרֲכ֖וּ אֶת־בְּנֵ֣י יִשְׂרָאֵ֑ל אָמ֖וֹר לָהֶֽם׃ ס
24 ೨೪ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ;
יְבָרֶכְךָ֥ יְהוָ֖ה וְיִשְׁמְרֶֽךָ׃ ס
25 ೨೫ ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ;
יָאֵ֨ר יְהוָ֧ה ׀ פָּנָ֛יו אֵלֶ֖יךָ וִֽיחֻנֶּֽךָּ׃ ס
26 ೨೬ ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
יִשָּׂ֨א יְהוָ֤ה ׀ פָּנָיו֙ אֵלֶ֔יךָ וְיָשֵׂ֥ם לְךָ֖ שָׁלֽוֹם׃ ס
27 ೨೭ ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”
וְשָׂמ֥וּ אֶת־שְׁמִ֖י עַל־בְּנֵ֣י יִשְׂרָאֵ֑ל וַאֲנִ֖י אֲבָרֲכֵֽם׃ פ

< ಅರಣ್ಯಕಾಂಡ 6 >