< ಫಿಲೆಮೋನನಿಗೆ ಬರೆದ ಪತ್ರಿಕೆ 1 >
1 ೧ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ,
khrii. s.tasya yii"so rbandidaasa. h paulastiithiyanaamaa bhraataa ca priya. m sahakaari. na. m philiimona. m
2 ೨ ಮತ್ತು ಸಹೋದರಿಯಾದ ಅಪ್ಫಿಯಳಿಗೂ, ನಮ್ಮ ಸಹ ಹೋರಾಟಗಾರನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ:
priyaam aappiyaa. m sahasenaam aarkhippa. m philiimonasya g. rhe sthitaa. m samiti nca prati patra. m likhata. h|
3 ೩ ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಆಗಲಿ.
asmaaka. m taata ii"svara. h prabhu ryii"sukhrii. s.ta"sca yu. smaan prati "saantim anugraha nca kriyaastaa. m|
4 ೪ ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ,
prabhu. m yii"su. m prati sarvvaan pavitralokaan prati ca tava premavi"svaasayo rv. rttaanta. m ni"samyaaha. m
5 ೫ ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ.
praarthanaasamaye tava naamoccaarayan nirantara. m mame"svara. m dhanya. m vadaami|
6 ೬ ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ.
asmaasu yadyat saujanya. m vidyate tat sarvva. m khrii. s.ta. m yii"su. m yat prati bhavatiiti j naanaaya tava vi"svaasamuulikaa daana"siilataa yat saphalaa bhavet tadaham icchaami|
7 ೭ ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.
he bhraata. h, tvayaa pavitralokaanaa. m praa. na aapyaayitaa abhavan etasmaat tava premnaasmaaka. m mahaan aananda. h saantvanaa ca jaata. h|
8 ೮ ವೃದ್ಧನೂ, ಈಗ ಕ್ರಿಸ್ತಯೇಸುವಿನ ನಿಮಿತ್ತ ಸೆರೆಯಾಳಾಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿಮಿತ್ತ ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.
tvayaa yat karttavya. m tat tvaam aaj naapayitu. m yadyapyaha. m khrii. s.tenaatiivotsuko bhaveya. m tathaapi v. rddha
9 ೯ ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ
idaanii. m yii"sukhrii. s.tasya bandidaasa"scaivambhuuto ya. h paula. h so. aha. m tvaa. m vinetu. m vara. m manye|
10 ೧೦ ನಾನು ಸೆರೆಯಲ್ಲಿ ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.
ata. h "s. r"nkhalabaddho. aha. m yamajanaya. m ta. m madiiyatanayam onii. simam adhi tvaa. m vinaye|
11 ೧೧ ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.
sa puurvva. m tavaanupakaaraka aasiit kintvidaanii. m tava mama copakaarii bhavati|
12 ೧೨ ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ.
tamevaaha. m tava samiipa. m pre. sayaami, ato madiiyapraa. nasvaruupa. h sa tvayaanug. rhyataa. m|
13 ೧೩ ನಾನು ಸುವಾರ್ತೆಯ ನಿಮಿತ್ತ ಸೆರೆಮನೆಯಲ್ಲಿರುವಾಗ ನನಗೆ ಉಪಚಾರಮಾಡುವಂತೆ ನಿನಗೆ ಬದಲಾಗಿ ಅವನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಬೇಕೆಂದು ಆಲೋಚಿಸಿದ್ದೆನು.
susa. mvaadasya k. rte "s. r"nkhalabaddho. aha. m paricaarakamiva ta. m svasannidhau varttayitum aiccha. m|
14 ೧೪ ಆದರೆ ನಿನ್ನ ಉಪಕಾರವು ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.
kintu tava saujanya. m yad balena na bhuutvaa svecchaayaa. h phala. m bhavet tadartha. m tava sammati. m vinaa kimapi karttavya. m naamanye|
15 ೧೫ ಅವನು ಸ್ವಲ್ಪಕಾಲ ನಿನ್ನಿಂದ ದೂರವಾಗಿಹೋದದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ ಇರಬಹುದು; (aiōnios )
ko jaanaati k. sa. nakaalaartha. m tvattastasya vicchedo. abhavad etasyaayam abhipraayo yat tvam anantakaalaartha. m ta. m lapsyase (aiōnios )
16 ೧೬ ಇನ್ನು ಮೇಲೆ ಅವನು ದಾಸನಂತಾಗಿರದೆ ದಾಸನಿಗಿಂತ ಮಿಗಿಲಾಗಿ ಉತ್ತಮವಾದ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕದ ಪ್ರಕಾರವಾಗಿಯೂ, ಕರ್ತನ ಸಂಬಂಧದಲ್ಲಿಯೂ ಇನ್ನೂ ಹೆಚ್ಚು ಪ್ರಿಯನಾಗಿರುವನಲ್ಲವೇ?
puna rdaasamiva lapsyase tannahi kintu daasaat "sre. s.tha. m mama priya. m tava ca "saariirikasambandhaat prabhusambandhaacca tato. adhika. m priya. m bhraataramiva|
17 ೧೭ ನೀನು ನನ್ನನ್ನು ಜೊತೆಗಾರನೆಂದು ಭಾವಿಸುವುದಾದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.
ato heto ryadi maa. m sahabhaagina. m jaanaasi tarhi maamiva tamanug. rhaa. na|
18 ೧೮ ಆದರೆ ಅವನಿಂದ ನಿನಗೆ ಏನಾದರೂ ನಷ್ಟವಾಗಿದ್ದರೆ ಅಥವಾ ಅವನು ನಿನಗೆ ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು.
tena yadi tava kimapyaparaaddha. m tubhya. m kimapi dhaaryyate vaa tarhi tat mameti viditvaa ga. naya|
19 ೧೯ ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ?
aha. m tat pari"sotsyaami, etat paulo. aha. m svahastena likhaami, yatastva. m svapraa. naan api mahya. m dhaarayasi tad vaktu. m necchaami|
20 ೨೦ ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು.
bho bhraata. h, prabho. h k. rte mama vaa nchaa. m puuraya khrii. s.tasya k. rte mama praa. naan aapyaayaya|
21 ೨೧ ನಿನ್ನ ವಿಧೇಯತೆಯಲ್ಲಿ ಭರವಸೆವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳುವುದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುತ್ತಿ ಎಂದು ನನಗೆ ಗೊತ್ತಿದೆ.
tavaaj naagraahitve vi"svasya mayaa etat likhyate mayaa yaducyate tato. adhika. m tvayaa kaari. syata iti jaanaami|
22 ೨೨ ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು.
tatkara. nasamaye madarthamapi vaasag. rha. m tvayaa sajjiikriyataa. m yato yu. smaaka. m praarthanaanaa. m phalaruupo vara ivaaha. m yu. smabhya. m daayi. sye mameti pratyaa"saa jaayate|
23 ೨೩ ಕ್ರಿಸ್ತಯೇಸುವಿನ ನಿಮಿತ್ತವಾಗಿ ನನ್ನ ಜೊತೆ ಸೆರೆಯವನಾದ ಎಪಫ್ರನೂ ನಿನಗೆ ವಂದನೆ ತಿಳಿಸುತ್ತಾನೆ.
khrii. s.tasya yii"saa. h k. rte mayaa saha bandiripaaphraa
24 ೨೪ ನನ್ನ ಜೊತೆಗೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ, ಲೂಕ ಇವರೆಲ್ಲರೂ ನಿನಗೆ ವಂದನೆ ತಿಳಿಸಿದ್ದಾರೆ.
mama sahakaari. no maarka aari. s.taarkho diimaa luuka"sca tvaa. m namaskaara. m vedayanti|
25 ೨೫ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
asmaaka. m prabho ryii"sukhrii. s.tasyaanugraho yu. smaakam aatmanaa saha bhuuyaat| aamen|