< ಫಿಲಿಪ್ಪಿಯವರಿಗೆ ಬರೆದ ಪತ್ರಿಕೆ 3 >

1 ಕಡೆಯದಾಗಿ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಅದೇ ಮಾತುಗಳನ್ನು ಪುನಃ ನಿಮಗೆ ಬರೆಯುವುದಕ್ಕೆ ನನಗೇನೂ ಬೇಸರವಿಲ್ಲ, ಅವುಗಳು ನಿಮ್ಮನ್ನು ಭದ್ರಪಡಿಸುವವು.
το λοιπον αδελφοι μου χαιρετε εν κυριω τα αυτα γραφειν υμιν εμοι μεν ουκ οκνηρον υμιν δε ασφαλες
2 ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ.
βλεπετε τους κυνας βλεπετε τους κακους εργατας βλεπετε την κατατομην
3 ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.
ημεις γαρ εσμεν η περιτομη οι πνευματι θεω λατρευοντες και καυχωμενοι εν χριστω ιησου και ουκ εν σαρκι πεποιθοτες
4 ನಾನಾದರೋ ಶರೀರಸಂಬಂಧವಾದವುಗಳಲ್ಲಿ ಭರವಸವಿಡುವುದಕ್ಕೂ ಆಸ್ಪದವಿದೆ. ಬೇರೆ ಯಾವನಾದರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಡಬಹುದೆಂದು ಯೋಚಿಸುವುದಾದರೆ ನಾನು ಅವನಿಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.
καιπερ εγω εχων πεποιθησιν και εν σαρκι ει τις δοκει αλλος πεποιθεναι εν σαρκι εγω μαλλον
5 ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ ನಾನು ಫರಿಸಾಯನು,
περιτομη οκταημερος εκ γενους ισραηλ φυλης βενιαμιν εβραιος εξ εβραιων κατα νομον φαρισαιος
6 ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.
κατα ζηλον διωκων την εκκλησιαν κατα δικαιοσυνην την εν νομω γενομενος αμεμπτος
7 ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
αλλ ατινα ην μοι κερδη ταυτα ηγημαι δια τον χριστον ζημιαν
8 ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.
αλλα μενουνγε και ηγουμαι παντα ζημιαν ειναι δια το υπερεχον της γνωσεως χριστου ιησου του κυριου μου δι ον τα παντα εζημιωθην και ηγουμαι σκυβαλα ειναι ινα χριστον κερδησω
9 ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.
και ευρεθω εν αυτω μη εχων εμην δικαιοσυνην την εκ νομου αλλα την δια πιστεως χριστου την εκ θεου δικαιοσυνην επι τη πιστει
10 ೧೦ ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.
του γνωναι αυτον και την δυναμιν της αναστασεως αυτου και την κοινωνιαν των παθηματων αυτου συμμορφουμενος τω θανατω αυτου
11 ೧೧ ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನದ ಅನುಭವ ನನಗೂ ಆದೀತು.
ει πως καταντησω εις την εξαναστασιν των νεκρων
12 ೧೨ ಇಷ್ಟರೊಳಗೆ ನಾನಿದೆಲ್ಲವನ್ನೂ ಪಡಕೊಂಡು ಪರಿಪೂರ್ಣತೆಗೆ ಬಂದವನೆಂದು ಹೇಳುವುದಿಲ್ಲ. ಆದರೆ ನಾನು ಯಾವುದನ್ನು ಹೊಂದುವುದಕ್ಕಾಗಿ ಕ್ರಿಸ್ತ ಯೇಸುವು ನನ್ನನ್ನು ಹಿಡಿದುಕೊಂಡನೋ ಅದನ್ನು ಹೊಂದುವುದಕ್ಕೋಸ್ಕರ ಪ್ರಯತ್ನಿಸುತ್ತಾ ಇದ್ದೇನೆ.
ουχ οτι ηδη ελαβον η ηδη τετελειωμαι διωκω δε ει και καταλαβω εφ ω και κατεληφθην υπο του χριστου ιησου
13 ೧೩ ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ,
αδελφοι εγω εμαυτον ου λογιζομαι κατειληφεναι εν δε τα μεν οπισω επιλανθανομενος τοις δε εμπροσθεν επεκτεινομενος
14 ೧೪ ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.
κατα σκοπον διωκω επι το βραβειον της ανω κλησεως του θεου εν χριστω ιησου
15 ೧೫ ನಮ್ಮಲ್ಲಿ ಪ್ರವೀಣರಾದವರೆಲ್ಲರೂ ಈ ವಿಷಯದಲ್ಲಿ ಇದೇ ಅಭಿಪ್ರಾಯವುಳ್ಳವರಾಗಿರಿ. ಮತ್ತು ಯಾವುದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನು ದೇವರು ನಿಮಗೆ ತೋರಿಸಿಕೊಡುವನು.
οσοι ουν τελειοι τουτο φρονωμεν και ει τι ετερως φρονειτε και τουτο ο θεος υμιν αποκαλυψει
16 ೧೬ ಅಂತೂ, ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯ ವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.
πλην εις ο εφθασαμεν τω αυτω στοιχειν κανονι το αυτο φρονειν
17 ೧೭ ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.
συμμιμηται μου γινεσθε αδελφοι και σκοπειτε τους ουτως περιπατουντας καθως εχετε τυπον ημας
18 ೧೮ ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
πολλοι γαρ περιπατουσιν ους πολλακις ελεγον υμιν νυν δε και κλαιων λεγω τους εχθρους του σταυρου του χριστου
19 ೧೯ ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.
ων το τελος απωλεια ων ο θεος η κοιλια και η δοξα εν τη αισχυνη αυτων οι τα επιγεια φρονουντες
20 ೨೦ ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.
ημων γαρ το πολιτευμα εν ουρανοις υπαρχει εξ ου και σωτηρα απεκδεχομεθα κυριον ιησουν χριστον
21 ೨೧ ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.
ος μετασχηματισει το σωμα της ταπεινωσεως ημων εις το γενεσθαι αυτο συμμορφον τω σωματι της δοξης αυτου κατα την ενεργειαν του δυνασθαι αυτον και υποταξαι εαυτω τα παντα

< ಫಿಲಿಪ್ಪಿಯವರಿಗೆ ಬರೆದ ಪತ್ರಿಕೆ 3 >