< ಜ್ಞಾನೋಕ್ತಿಗಳು 12 >

1 ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.
Ko ljubi nastavu, ljubi znanje; a ko mrzi na ukor, ostaje lud.
2 ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.
Dobar èovjek dobija ljubav od Gospoda, a èovjeka zlikovca osuðuje.
3 ಯಾರೂ ದುಷ್ಟತನದಿಂದ ಸ್ಥಿರನಾಗನು, ಶಿಷ್ಟನು ಯಾವಾಗಲೂ ದೃಢಮೂಲನೇ.
Neæe se èovjek utvrditi bezbožnošæu, a korijen pravednijeh neæe se pomaæi.
4 ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.
Vrijedna je žena vijenac mužu svojemu; a koja ga sramoti, ona mu je kao trulež u kostima.
5 ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.
Misli su pravednijeh prave, a savjeti bezbožnijeh prijevara.
6 ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.
Rijeèi bezbožnijeh vrebaju krv, a pravedne izbavljaju usta njihova.
7 ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು, ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವುದು.
Obaraju se bezbožni da ih nema, a dom pravednijeh ostaje.
8 ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.
Prema razumu svom hvali se èovjek; a ko je opaka srca, prezreæe se.
9 ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು.
Ko se snebiva, a ima slugu, bolji je od onoga koji se velièa a hljeba nema.
10 ೧೦ ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.
Pravednik se brine za život svojega živinèeta, a u bezbožnika je srce nemilostivo.
11 ೧೧ ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.
Ko radi svoju zemlju, biæe sit hljeba; a ko ide za besposlicama, bezuman je.
12 ೧೨ ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ.
Bezbožnik želi obranu oda zla, ali korijen pravednijeh daje je.
13 ೧೩ ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.
Zlome je zamka u grijehu usana njegovijeh, a pravednik izlazi iz tjeskobe.
14 ೧೪ ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.
Od ploda usta svojih siti se èovjek dobra, i platu za djela svoja prima èovjek.
15 ೧೫ ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.
Bezumniku se èini prav put njegov; ali ko sluša savjet, mudar je.
16 ೧೬ ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.
Gnjev bezumnikov odmah se pozna, ali pametni pokriva sramotu.
17 ೧೭ ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು, ಸುಳ್ಳುಸಾಕ್ಷಿಯು ಅಸತ್ಯವನ್ನು ನುಡಿಯುವನು.
Ko govori istinu, javlja što je pravo, a lažni svjedok prijevaru.
18 ೧೮ ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.
Ima ko govori kao da maè probada, a jezik je mudrijeh lijek.
19 ೧೯ ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.
Istinita usta stoje tvrdo dovijeka, a jezik lažljivi za èas.
20 ೨೦ ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.
Koji zlo misle, prijevara im je u srcu, a radost je onima koji svjetuju na mir.
21 ೨೧ ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು.
Nikaka nesreæa neæe zadesiti pravednika, a bezbožnici æe se napuniti zla.
22 ೨೨ ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.
Mrske su Gospodu lažljive usne; a koji rade vjerno, mili su mu.
23 ೨೩ ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.
Pametan èovjek pokriva znanje, a srce bezumnijeh razglašuje bezumlje.
24 ೨೪ ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.
Ruka radljiva gospodariæe, a lijena æe davati danak.
25 ೨೫ ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.
Briga u srcu èovjeèijem obara; a dobra rijeè razveseljava.
26 ೨೬ ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.
Pravedniku je bolje nego bližnjemu njegovu; a bezbožnike zavodi put njihov.
27 ೨೭ ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.
Ljenivac neæe peæi lova svoga, a u vrijedna je èovjeka dobro dragocjeno.
28 ೨೮ ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ.
Na putu pravde život je, i kuda ide staza njezina nema smrti.

< ಜ್ಞಾನೋಕ್ತಿಗಳು 12 >