< ಜ್ಞಾನೋಕ್ತಿಗಳು 19 >

1 ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.
Ambone’ ty dagola aman-tsoñy mengoke, ty rarake mañavelo an-kahiti’e.
2 ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು.
Tsy mahasoa ty fiaiñe te tsy aman-kilala, mandilatse ty malisa am-pandia.
3 ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.
Mampianto ty lia’e ty hanè’ ondaty, ie mitrevok’ Iehovà an-tro’e.
4 ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು.
Mpanovon-drañetse o varao, fe pitso-drañetse t’ie rarake.
5 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.
Tsy ho po-lafa ty mpitalily vilañe, vaho tsy himolaotse ty mavande.
6 ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.
Amam-pandomboke maro ty matarike, kila mifandrañetse ami’ty mpanolo-ravoravo.
7 ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.
Falai’ o rahalahi’e iabio ty rarake— sandrake t’ie farien-drañe’e! Heañe’e fe tsy eo.
8 ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
Mpikoko ty tro’e ze mitoha hihitse, ho tendreke hasoa ty mpangazon-kilala.
9 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.
Tsy ho po-lilo ty mpanao kitomboke, le hihomake ty mpandañitse.
10 ೧೦ ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.
Tsy mañeva ty seretse ty miaiñ’ añoleñañe, naho ty ondevo ty hifehe ana-donake.
11 ೧೧ ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.
Mampalaon-kaviñerañe ty fitsikaraha’ ondatio, vaho enge’e ty miheve fiolàñe.
12 ೧೨ ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
Manahake ty fitreñan-diona ty haviñeram-panjaka, fe hoe mìka añ’ahetse eo ty fañisoha’e.
13 ೧೩ ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
Fianto aman-drae’e ty ajaja votro, vaho fitsopatsopahañe nainai’e ty fitreontreon-drakemba.
14 ೧೪ ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
Lovaeñe aman-droae ty vara naho anjomba, fe boak’am’ Iehovà ty valy hendre.
15 ೧೫ ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
Mampilañak’ an-droro ty havotroañe, vaho ho silofen-kerè ty tro’ i tembo.
16 ೧೬ ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.
Mahatam-piay ty mahatan-dily, fe hihomake ty mitsidaredare ami’ty lia’e.
17 ೧೭ ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
Mampisongo am’ Iehovà ty mitretre i rarake, le ho tambeze’e i fatariha’ey.
18 ೧೮ ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,
Lilovo o ana’o, kanao mb’e amam-pitamàñe; fe ko ilosoran-dafa.
19 ೧೯ ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.
Tsy mete tsy liloveñe ty midabadoa; f’ie haha’o, tsy mahay tsy indrai’o.
20 ೨೦ ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.
Mijanjiña fanoroañe, le miantofa endake, vaho hahihitse rehe am-para’e.
21 ೨೧ ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
Maro ty safirin-tro’ ondaty, fe hijadoñe ty famerea’ Iehovà.
22 ೨೨ ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.
Ty paiañe ama’ondaty le ty fiferenaiña’e; Hàmake t’ie rarake ta te remborake.
23 ೨೩ ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.
Minday mb’an-kaveloñe ty fañeveñañe am’ Iehovà; hiaiñ’añoleñan-dre, tsy ho zoem-boiñe.
24 ೨೪ ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು.
Alipo’ ty votro am-pinga ao ty taña’e, fe tsy ahere’e mb’am-bava.
25 ೨೫ ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.
Lafao ty mpiteratera, hianara’ ty seretse fañahy, fe endaho ty maharendreke, hitovoñañe ty hilala’e.
26 ೨೬ ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು, ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು.
Ty mampianto rae, naho ty manao soike aman-drene, le anadahy manalatse naho mahameñatse.
27 ೨೭ ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.
Mijihera tsy hañaoñ’ endake, anake, le handifihe’o ty tsaran-kilala.
28 ೨೮ ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.
Maneratera ty hatò ty mpitalily votro, vaho lifo-karatiañe ty vava’ o lo-tserekeo.
29 ೨೯ ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.
Ampihentseñen-dilo ty mpandrabioñe naho lafa ty lambosin-dagola.

< ಜ್ಞಾನೋಕ್ತಿಗಳು 19 >