< ಜ್ಞಾನೋಕ್ತಿಗಳು 29 >

1 ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
Tisti, ki je pogosto grajan, otrjuje svoj vrat; nenadoma bo uničen in to brez rešitve.
2 ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.
Kadar so pravični na oblasti, se ljudstvo veseli, toda kadar zlobni rojevajo pravila, ljudstvo žaluje.
3 ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.
Kdorkoli ljubi modrost, razveseljuje svojega očeta, toda kdor se zadržuje s pocestnicami, zapravlja svoje imetje.
4 ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.
Kralj s sodbo vzpostavlja deželo, toda kdor sprejema darila, jo prevrača.
5 ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು, ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.
Človek, ki laska svojemu bližnjemu, razpenja mrežo za njegova stopala.
6 ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು, ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.
V prestopku hudobneža je zanka, toda pravični prepeva in se veseli.
7 ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.
Pravični preudarja stvar ubogega, toda zlobni se na to ne ozira.
8 ಧರ್ಮನಿಂದಕರು ಪಟ್ಟಣಕ್ಕೆ ಬೆಂಕಿಯನ್ನು ಹತ್ತಿಸುವರು, ಜ್ಞಾನಿಗಳೋ ರೋಷಾಗ್ನಿಯನ್ನು ಆರಿಸುವರು.
Posmehljivci mesto privedejo v zanko, toda modri možje odvrnejo bes.
9 ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.
Če se moder človek prička z nespametnim človekom, bodisi besni ali se smeje, tam ni počitka.
10 ೧೦ ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು.
Krvoločnež sovraži poštenega, toda pravični išče njegovo dušo.
11 ೧೧ ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು, ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.
Bedak izreka vse svoje mišljenje, toda moder človek ga zadrži za pozneje.
12 ೧೨ ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.
Če vladar prisluhne lažem, so vsi njegovi služabniki zlobni.
13 ೧೩ ತಗ್ಗುವವನು, ತಗ್ಗಿಸುವವನು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರಿಬ್ಬರ ಕಣ್ಣುಗಳಿಗೆ ಕಳೆಕೊಟ್ಟವನು.
Ubog in varljiv človek se skupaj srečata; Gospod razsvetljuje oči obeh.
14 ೧೪ ಬಡವರನ್ನು ನ್ಯಾಯವಾಗಿ ಆಳ್ವಿಕೆ ಮಾಡುವ ರಾಜನ ಸಿಂಹಾಸನವು ಶಾಶ್ವತವು.
Kralju, ki zvesto sodi ubogega, bo njegov prestol utrjen na veke.
15 ೧೫ ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು, ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.
Palica in opomin dajeta modrost, toda otrok, prepuščen samemu sebi, svoji materi prinaša sramoto.
16 ೧೬ ದುಷ್ಟರ ವೃದ್ಧಿ ಪಾಪವೃದ್ಧಿ, ಶಿಷ್ಟರೋ ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
Kadar so zlobni pomnoženi, narašča prestopek, toda pravični bodo videli njihov padec.
17 ೧೭ ಮಗನನ್ನು ಶಿಕ್ಷಿಸು, ಅವನು ನಿನ್ನನ್ನು ಸಂತೋಷಪಡಿಸುವನು, ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.
Grajaj svojega sina in dal ti bo počitek; da, tvoji duši bo dal veselje.
18 ೧೮ ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.
Kjer ni videnja ljudstvo propada, toda kdor se drži postave, je srečen.
19 ೧೯ ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು, ಅವನು ತಿಳಿದುಕೊಂಡರೂ ಗಮನಿಸನು.
Služabnik ne bo grajan z besedami; kajti čeprav razume, ne bo odgovoril.
20 ೨೦ ದುಡುಕಿ ಮಾತನಾಡುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನು ಇಡಬಹುದು.
Vidiš človeka, ki je nagel v svojih besedah? Več upanja je za bedaka kakor zanj.
21 ೨೧ ಆಳನ್ನು ಬಾಲ್ಯದಿಂದ ಕೋಮಲವಾಗಿ ಸಾಕಿದರೆ, ತರುವಾಯ ಅವನು ಎದುರುಬೀಳುವನು.
Kdor svojega služabnika od otroških let prefinjeno vzgaja, mu bo končno postal njegov sin.
22 ೨೨ ಕೋಪಿಷ್ಠನು ಜಗಳವನ್ನೆಬ್ಬಿಸುವನು, ಕ್ರೋಧಶೀಲನು ದೋಷಭರಿತನು.
Jezen človek razvnema prepir, besen človek pa je obilen v prestopku.
23 ೨೩ ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.
Človekov ponos ga bo ponižal, toda spoštovanje bo podpiralo ponižnega v duhu.
24 ೨೪ ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು, ಆಣೆಯಿಡುವುದನ್ನು ಕೇಳಿದರೂ ಸುಮ್ಮನಿರುವನು.
Kdorkoli je družabnik s tatom, sovraži svojo lastno dušo; sliši preklinjanje, pa tega ne razkriva.
25 ೨೫ ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.
Strah pred človekom prinaša zanko, toda kdorkoli svoje trdno upanje polaga v Gospoda, bo varen.
26 ೨೬ ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು.
Mnogi iščejo vladarjevo naklonjenost, toda sodba vsakega človeka prihaja od Gospoda.
27 ೨೭ ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು, ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.
Nepravičen človek je ogabnost pravičnemu in kdor je na svoji poti pošten, je ogabnost zlobnemu.

< ಜ್ಞಾನೋಕ್ತಿಗಳು 29 >