< ಕೀರ್ತನೆಗಳು 102 >

1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಕೂಗು ನಿನಗೆ ಮುಟ್ಟಲಿ.
Drottinn, heyrðu bæn mína! Hlustaðu á ákall mitt!
2 ನನ್ನ ಕಷ್ಟದಲ್ಲಿ ವಿಮುಖನಾಗಬೇಡ; ನನ್ನ ಮೊರೆಗೆ ಕಿವಿಗೊಡು; ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು.
Snúðu ekki baki við mér á ógæfutímum. Hneigðu eyra þitt að mér og svaraðu mér fljótt.
3 ನನ್ನ ಜೀವಮಾನವು ಹೊಗೆಯಂತೆ ಮಾಯವಾಗುತ್ತದೆ; ನನ್ನ ಎಲುಬುಗಳು ಕೊಳ್ಳಿಯಂತೆ ಸುಟ್ಟುಹೋಗುತ್ತವೆ.
Ævi mín líður svo hratt, dagarnir fljúga hver af öðrum.
4 ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.
Heilsan er búin, hjartað er sjúkt – ég er eins og visið strá. Maturinn er bragðlaus, ég er hættur að finna bragð.
5 ನಿಟ್ಟುಸಿರಿನಿಂದ ನನ್ನಲ್ಲಿ ಎಲುಬು, ತೊಗಲು ಮಾತ್ರ ಉಳಿದಿರುತ್ತವೆ.
Ég er ekkert nema skinn og bein.
6 ಅಡವಿಯ ಬಕಪಕ್ಷಿಯಂತಿದ್ದೇನೆ; ಹಾಳೂರಿನ ಗೂಬೆಯಂತಿದ್ದೇನೆ.
Ég er líkastur pelikan í eyðimörk eða uglu í húsarúst.
7 ನಿದ್ರೆಯಿಲ್ಲದವನಾಗಿ ಮನೆಮಾಳಿಗೆಯ ಮೇಲಿರುವ, ಒಂಟಿಯಾದ ಪಕ್ಷಿಯಂತಿದ್ದೇನೆ.
Ég ligg andvaka og styn eins og einmana fugl á þaki.
8 ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ, ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ.
Óvinir mínir hæða mig og spotta dag eftir dag.
9 ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು.
Fæða mín er aska, ekki brauð, og drykkur minn blandast tárum mínum.
10 ೧೦ ಇದಕ್ಕೆಲ್ಲಾ ನಿನ್ನ ಕೋಪ, ರೌದ್ರಗಳೇ ಕಾರಣ, ನೀನು ನನ್ನನ್ನು ಎತ್ತಿ ಒಗೆದುಬಿಟ್ಟಿದ್ದಿಯಲ್ಲಾ!
Þú ert mér reiður Drottinn og hefur varpað mér burt frá þér.
11 ೧೧ ನನ್ನ ಜೀವಮಾನವು ಸಂಜೆಯ ನೆರಳಿನಂತಿದೆ; ನಾನು ಬಾಡಿಹೋದ ಹುಲ್ಲಿನಂತಿದ್ದೇನೆ.
Líf mitt líður burt eins og kvöldskuggi. Ég visna eins og gras
12 ೧೨ ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವುದು.
en þú Drottinn ríkir í dýrð þinni að eilífu. Þinn orðstír mun lifa frá kynslóð til kynslóðar.
13 ೧೩ ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯಮಿತ ಕಾಲವು ಬಂದಿದೆ.
Ég veit að þú munt koma og vægja Jerúsalem. – Gerðu það núna! – Efndu loforð þitt um hjálp.
14 ೧೪ ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ, ಅದು ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.
Því að þjóð þín elskar hvern stein í múr hennar og jafnvel rykið á strætum hennar.
15 ೧೫ ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ,
Þjóðirnar og konungar þeirra skjálfi fyrir Drottni og hans miklu dýrð,
16 ೧೬ ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರುಗಿ ಕಟ್ಟಿಸಿದನೆಂದೂ,
því að Drottinn mun endurreisa Jerúsalem og birtast þar í dýrð!
17 ೧೭ ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.
Hann hlustar á bænir fátæklinganna, gefur gaum að beiðni þeirra.
18 ೧೮ ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ, ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ,
Þetta hef ég skráð til þess að komandi kynslóðir lofi Drottin fyrir öll hans verk. Fólk sem enn hefur ekki séð dagsins ljós mun vegsama hann.
19 ೧೯ “ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾನೆ.
Segið þeim að Drottinn leit niður frá musteri sínu á himnum.
20 ೨೦ ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ,
Hann heyrði stunur þjóðar sinnar í ánauðinni – hún var dauðans matur – og hann frelsaði hana!
21 ೨೧ ಅವರು ಚೀಯೋನಿನಲ್ಲಿ ಯೆಹೋವನ ನಾಮವನ್ನು ವರ್ಣಿಸುವಂತೆಯೂ, ಯೆರೂಸಲೇಮಿನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ.
Þess vegna streyma þúsundir til musteris hans í Jerúsalem og lofa hann og vegsama um alla borgina.
22 ೨೨ ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ” ಎಂದು ಹೇಳುವುದು.
Konungar jarðarinnar eru í þeim hópi.
23 ೨೩ ಆತನು ಯೌವನಪ್ರಾಯದಲ್ಲಿಯೇ ನನ್ನ ಬಲವನ್ನು ಕುಂದಿಸಿದ್ದಾನೆ;
Hann hefur tekið frá mér lífskraftinn og stytt ævi mína.
24 ೨೪ ನನ್ನ ಆಯುಷ್ಯವನ್ನು ಕಡಿಮೆ ಮಾಡಿಬಿಟ್ಟಿದ್ದಾನೆ. ಆದುದರಿಂದ, “ನನ್ನ ದೇವರೇ, ಅರ್ಧಾಯುಷ್ಯದಲ್ಲಿಯೇ ನನ್ನನ್ನು ಒಯ್ಯಬೇಡ; ನಿನ್ನ ವರ್ಷಗಳು ತಲತಲಾಂತರಕ್ಕೂ ಇರುತ್ತವೆ.
En ég hrópaði til hans: „Þú, Guð sem lifir að eilífu, láttu mig ekki deyja fyrir aldur fram!
25 ೨೫ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.
Í upphafi lagðir þú undirstöður jarðarinnar og himnarnir eru verk handa þinna.
26 ೨೬ ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು.
Þau munu hverfa en þú ert að eilífu. Þau fyrnast, líkt og slitin föt sem lögð eru til hliðar.
27 ೨೭ ನೀನಾದರೋ ಏಕರೀತಿಯಾಗಿರುತ್ತಿ; ನಿನ್ನ ವರ್ಷಗಳು ಮುಗಿದುಹೋಗುವುದಿಲ್ಲ.
En þú ert hinn sami og ár þín taka aldrei enda.
28 ೨೮ ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು” ಎಂದು ಮೊರೆಯಿಡುತ್ತೇನೆ.
En afkomendur okkar munu lifa og þú munt varðveita þá, kynslóð fram af kynslóð.“

< ಕೀರ್ತನೆಗಳು 102 >