< ಕೀರ್ತನೆಗಳು 114 >

1 ಇಸ್ರಾಯೇಲರು ಐಗುಪ್ತ ದೇಶವನ್ನೂ, ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ, 2 ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ, ಇಸ್ರಾಯೇಲ್ ಆತನ ರಾಜ್ಯವೂ ಆಯಿತು. 3 ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು. 4 ಪರ್ವತಗಳು ಟಗರುಗಳಂತೆಯೂ, ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು. 5 ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನೇ, ಏಕೆ ಹಿಂದಿರುಗುತ್ತೀ? 6 ಪರ್ವತಗಳೇ, ನೀವು ಟಗರುಗಳಂತೆಯೂ, ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ? 7 ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು. 8 ಆತನು ಬಂಡೆಯನ್ನು ಕೆರೆಯನ್ನಾಗಿಯೂ, ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ.

< ಕೀರ್ತನೆಗಳು 114 >