< ಕೀರ್ತನೆಗಳು 116 >

1 ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು.
Alleluia. Dilexi, quoniam exaudiet Dominus vocem orationis meae.
2 ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದ ಇರುವವರೆಗೂ ಆತನನ್ನೇ ಪ್ರಾರ್ಥಿಸುವೆನು.
Quia inclinavit aurem suam mihi: et in diebus meis invocabo.
3 ಮರಣಪಾಶಗಳು ನನ್ನನ್ನು ಸುತ್ತಿಕೊಂಡಿದ್ದವು; ಪಾತಾಳ ವೇದನೆಗಳು ನನ್ನನ್ನು ಹಿಡಿದಿದ್ದವು. ಚಿಂತೆಯಲ್ಲಿಯೂ, ಇಕ್ಕಟ್ಟಿನಲ್ಲಿಯೂ ಬಿದ್ದುಹೋಗಿದ್ದೆನು. (Sheol h7585)
Circumdederunt me dolores mortis: et pericula inferni invenerunt me. Tribulationem et dolorem inveni: (Sheol h7585)
4 ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.
et nomen Domini invocavi. O Domine libera animam meam:
5 ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.
misericors Dominus, et iustus, et Deus noster miseretur.
6 ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.
Custodiens parvulos Dominus: humiliatus sum, et liberavit me.
7 ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.
Convertere anima mea in requiem tuam: quia Dominus benefecit tibi.
8 ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು,
Quia eripuit animam meam de morte: oculos meos a lacrymis, pedes meos a lapsu.
9 ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.
Placebo Domino in regione vivorum.
10 ೧೦ “ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ,
Alleluia. Credidi, propter quod locutus sum: ego autem humiliatus sum nimis.
11 ೧೧ “ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು.
Ego dixi in excessu meo: Omnis homo mendax.
12 ೧೨ ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?
Quid retribuam Domino, pro omnibus, quae retribuit mihi?
13 ೧೩ ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
Calicem salutaris accipiam: et nomen Domini invocabo.
14 ೧೪ ಯೆಹೋವನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು.
Vota mea Domino reddam coram omni populo eius:
15 ೧೫ ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ.
pretiosa in conspectu Domini mors Sanctorum eius:
16 ೧೬ ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.
O Domine quia ego servus tuus: ego servus tuus, et filius ancillae tuae. Dirupisti vincula mea:
17 ೧೭ ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
tibi sacrificabo hostiam laudis, et nomen Domini invocabo.
18 ೧೮ ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,
Vota mea Domino reddam in conspectu omnis populi eius:
19 ೧೯ ಆತನಿಗೆ ಹೊತ್ತ ಹರಕೆಗಳನ್ನು, ಆತನ ಎಲ್ಲಾ ಜನರ ಮುಂದೆಯೇ ಸಲ್ಲಿಸುವೆನು. ಯೆಹೋವನಿಗೆ ಸ್ತೋತ್ರ!
in atriis domus Domini, in medio tui Ierusalem.

< ಕೀರ್ತನೆಗಳು 116 >