< ಕೀರ್ತನೆಗಳು 120 >

1 ಯಾತ್ರಾಗೀತೆ. ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು. 2 ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು. 3 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು? 4 ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು. 5 ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ! 6 ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು. 7 ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.

< ಕೀರ್ತನೆಗಳು 120 >