< ಕೀರ್ತನೆಗಳು 123 >

1 ಯಾತ್ರಾಗೀತೆ. ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ. 2 ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ. 3 ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು. ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು; 4 ಲೋಕಭೋಗಿಗಳ ಹಾಸ್ಯದಿಂದಲೂ, ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.

< ಕೀರ್ತನೆಗಳು 123 >