< ಕೀರ್ತನೆಗಳು 124 >

1 ಯಾತ್ರಾಗೀತೆ; ದಾವೀದನದು. “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ. 2 ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ, 3 “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; 4 ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು; 5 ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.” 6 ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ. 7 ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. 8 ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.

< ಕೀರ್ತನೆಗಳು 124 >