< ಕೀರ್ತನೆಗಳು 128 >

1 ಯಾತ್ರಾಗೀತೆ. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
ヱホバをおそれその道をあゆむものは皆さいはひなり
2 ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.
そはなんぢおのが手の勤勞をくらふべければなり なんぢは福祉をえまた安處にをるべし
3 ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.
なんぢの妻はいへの奧にをりておほくの實をむすぶ葡萄の樹のごとく汝の子輩はなんぢの筵に円居してかんらんの若樹のごとし
4 ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು.
見よヱホバをおそるる者はかく福祉をえん
5 ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.
ヱホバはシオンより惠をなんぢに賜はん なんぢ世にあらんかぎりヱルサレムの福祉をみん
6 ಮಕ್ಕಳ ಮಕ್ಕಳನ್ನು ಕಾಣುವವನಾಗು. ಇಸ್ರಾಯೇಲರಿಗೆ ಶುಭವಾಗಲಿ.
なんぢおのが子輩の子をみるべし 平安はイスラエルの上にあり

< ಕೀರ್ತನೆಗಳು 128 >