< ಕೀರ್ತನೆಗಳು 129 >

1 ಯಾತ್ರಾಗೀತೆ. “ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ. 2 “ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ. 3 ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.” 4 ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು. 5 ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ. 6 ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ; 7 ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. 8 ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.

< ಕೀರ್ತನೆಗಳು 129 >