< ಕೀರ್ತನೆಗಳು 13 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ. ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?
Dokle æeš me, Gospode, sasvijem zaboravljati? dokle æeš odvraæati lice svoje od mene?
2 ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು?
Dokle æu se domišljati u duši svojoj, mutiti se u srcu svom dan i noæ? dokle æe se neprijatelj moj podizati nada mnom?
3 ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.
Pogledaj, usliši me, Gospode, Bože moj! Prosvijetli oèi moje da ne zaspim na smrt.
4 ನನ್ನ ಶತ್ರುವು, “ನಾನು ಅವನನ್ನು ಜಯಿಸಿದೆನು” ಎಂದು ಹೇಳಿಕೊಳ್ಳಬಾರದು; ವೈರಿಗಳು, “ನನ್ನ ಎದುರಾಳಿಯು ಜಾರಿಬಿದ್ದನು” ಎಂದು ಹಿಗ್ಗಬಾರದು.
Da ne reèe neprijatelj moj: nadvladao sam ga; da se ne raduju koji me gone, ako posrnem.
5 ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.
A ja se uzdam u milost tvoju; radovaæe se srce moje za spasenje tvoje.
6 ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.
Pjevaæu Gospodu, koji mi dobro èini.

< ಕೀರ್ತನೆಗಳು 13 >