< ಕೀರ್ತನೆಗಳು 132 >

1 ಯಾತ್ರಾಗೀತೆ. ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ.
上主,求您以慈愛懷念達味,和他所有的一切焦思勞瘁:
2 ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,
因為他曾向上主立過了誓言,向雅各伯的全能者許過願:
3 “ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ,
我決不進入我住家中的帳幔,也決不登上我躺臥的床沿,
4 ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ” ಎಂದು
不容許我的眼睛睡眠,也不讓我的眼臉安閑,
5 ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.
直到我給上主尋找到一個處所,給雅各伯的全能者將居地覓妥。
6 ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.
看,我們聽說約櫃在厄弗辣大,我們在雅阿爾的平原找到了它。
7 “ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!”
大家一同進祂的居所,並在祂的腳凳下崇拜說:
8 ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು.
上主,請您和您威嚴的約櫃,起來駕臨到您安息的住宅,
9 ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.
願您的司祭身披正義,願您的信徒踴躍歡喜。
10 ೧೦ ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ.
為了您僕人達味的情面,不要將您的受傅者輕看!
11 ೧೧ ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;
上主既然向達味起了誓,真理的約言決不再收回:我要使您的親生兒子,榮登上您自己的王位;
12 ೧೨ ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”
若您的子孫遵守我的誓言,也遵守我教訓他們的法典,連他們的子孫代代世世,也必定要坐上您的王位。
13 ೧೩ ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.
的確上主特別揀選了熙雍,希望熙雍作為自己的王宮:
14 ೧೪ ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.
就是我的永遠安息之處,我希望的是常在這裏居住。
15 ೧೫ ಇದರ ಆದಾಯವನ್ನು ಆಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;
我要祝福這裏的食糧充裕,窮人都無憂並且吃得飽飫,
16 ೧೬ ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು.
使這裏的司祭得蒙救助,使這裏的信徒踴躍歡愉。
17 ೧೭ ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.
在這裏我要使達味的頭角高聳,我要給我的受傅者備妥明燈,
18 ೧೮ ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”
我要使他的敵人個個恥辱備嘗,我要使他的王冠在頭上發光。

< ಕೀರ್ತನೆಗಳು 132 >