< ಕೀರ್ತನೆಗಳು 133 >

1 ಯಾತ್ರಾಗೀತೆ; ದಾವೀದನದು. ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!
ದಾವೀದನ ಯಾತ್ರಾ ಗೀತೆ. ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು! ಎಷ್ಟೋ ರಮ್ಯವಾದದ್ದು!
2 ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,
ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ, ಆರೋನನ ಗಡ್ಡದ ಮೇಲೆ ಇಳಿದು, ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ ಅಮೂಲ್ಯ ತೈಲದ ಹಾಗೆ ಇರುತ್ತದೆ.
3 ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.
ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ. ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ, ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.

< ಕೀರ್ತನೆಗಳು 133 >