< ಕೀರ್ತನೆಗಳು 134 >

1 ಯಾತ್ರಾಗೀತೆ. ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ. 2 ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ. 3 ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.

< ಕೀರ್ತನೆಗಳು 134 >