< ಕೀರ್ತನೆಗಳು 137 >

1 ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.
Na vodama Vavilonskim sjeðasmo i plakasmo opominjuæi se Siona.
2 ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು.
O vrbama sred njega vješasmo harfe svoje.
3 ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು.
Ondje iskahu koji nas zarobiše da pjevamo, i koji nas oboriše da se veselimo: “pjevajte nam pjesmu Sionsku.”
4 ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ?
Kako æemo pjevati pjesmu Gospodnju u zemlji tuðoj?
5 ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.
Ako zaboravim tebe, Jerusalime, neka me zaboravi desnica moja.
6 ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.
Neka prione jezik moj za usta moja, ako tebe ne uspamtim, ako ne uzdržim Jerusalima svrh veselja svojega.
7 ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.
Napomeni, Gospode, sinovima Edomovijem dan Jerusalimski, kad govoriše: raskopajte, raskopajte ga do temelja.
8 ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.
Kæeri Vavilonska, krvnico, blago onome ko ti plati za djelo koje si nama uèinila!
9 ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.
Blago onome koji uzme i razbije djecu tvoju o kamen.

< ಕೀರ್ತನೆಗಳು 137 >