< ಕೀರ್ತನೆಗಳು 142 >

1 ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ. ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು.
Ég bið og bið til Drottins,
2 ನನ್ನ ಚಿಂತೆಗಳನ್ನು ಆತನ ಮುಂದೆ ಬಿಚ್ಚುವೆನು, ನನ್ನ ಕಷ್ಟವನ್ನು ಆತನಿಗೆ ಅರಿಕೆಮಾಡುವೆನು.
stöðugt grátbæni ég hann.
3 ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ.
Ég er hræddur og ráðvilltur. Þú einn þekkir leiðina framhjá gildrum óvina minna.
4 ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.
Enginn maður hugsar hlýtt til mín. Hvergi er góð ráð að fá. Öllum er sama um mig.
5 ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.
Því bið ég til Drottins og segi: „Drottinn, þú einn ert skjól mitt á jörðu, ég er hvergi öruggur nema hjá þér.
6 ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.
Heyrðu hróp mitt því að ég er mjög þjakaður. Frelsaðu mig frá þeim sem ofsækja mig, því að þeir eru mér yfirsterkari.
7 ಸೆರೆಯಿಂದ ನನ್ನನ್ನು ಬಿಡಿಸು, ನಿನ್ನ ನಾಮವನ್ನು ಕೀರ್ತಿಸುವೆನು. ನೀತಿವಂತರು ನಿನ್ನ ಮಹೋಪಕಾರಕ್ಕಾಗಿ, ನನ್ನನ್ನು ಸುತ್ತಿಕೊಂಡು ಉತ್ಸಾಹಗೊಳ್ಳುವರು.
Leiddu mig úr þessum mikla vanda og þá mun ég lofa þig. Hinir guðhræddu munu þyrpast til mín og fagna með mér yfir hjálp þinni.“

< ಕೀರ್ತನೆಗಳು 142 >