< ಕೀರ್ತನೆಗಳು 149 >

1 ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.
هەلیلویا! گۆرانییەکی نوێ بۆ یەزدان بڵێن، ستایشی لەناو کۆڕی خۆشەویستانیەتی.
2 ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.
با ئیسرائیل بە دروستکەری دڵخۆش بێت، با کوڕانی سییۆن بە پاشایان شاد بن.
3 ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.
با بە هەڵپەڕکێ ستایشی ناوی بکەن، بە دەف و قیسارە مۆسیقای بۆ بژەنن،
4 ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.
چونکە یەزدان دڵشادە بە گەلەکەی، بێفیزەکان بە ڕزگاری دەڕازێنێتەوە.
5 ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.
با خۆشەویستانی بەم شکۆمەندییەوە شاد بن، با لەناو نوێنەکانیان گۆرانی بڵێن.
6 ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.
با ستایشکردن بۆ خودا لەسەر زاریان بێت، شمشێری دوودەمیان بەدەستەوە بێت،
7 ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;
بۆ ئەوەی تۆڵە لە نەتەوەکان بکەنەوە، گەلان سزا بدەن،
8 ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.
بۆ ئەوەی پاشاکانیان بە زنجیر ببەستنەوە، کۆت بکەنە دەستی پیاوماقوڵانیان،
9 ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.
بۆ ئەوەی حوکمی نووسراویان بەسەردا جێبەجێ بکەن. ئەمەش شکۆمەندییە بۆ هەموو خۆشەویستانی. هەلیلویا.

< ಕೀರ್ತನೆಗಳು 149 >