< ಕೀರ್ತನೆಗಳು 19 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.
לַמְנַצֵּחַ מִזְמוֹר לְדָוִֽד׃ הַשָּׁמַיִם מְֽסַפְּרִים כְּבֽוֹד־אֵל וּֽמַעֲשֵׂה יָדָיו מַגִּיד הָרָקִֽיעַ׃
2 ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.
יוֹם לְיוֹם יַבִּיעַֽ אֹמֶר וְלַיְלָה לְּלַיְלָה יְחַוֶּה־דָּֽעַת׃
3 ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ.
אֵֽין־אֹמֶר וְאֵין דְּבָרִים בְּלִי נִשְׁמָע קוֹלָֽם׃
4 ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.
בְּכָל־הָאָרֶץ ׀ יָצָא קַוָּם וּבִקְצֵה תֵבֵל מִלֵּיהֶם לַשֶּׁמֶשׁ שָֽׂם־אֹהֶל בָּהֶֽם׃
5 ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.
וְהוּא כְּחָתָן יֹצֵא מֵחֻפָּתוֹ יָשִׂישׂ כְּגִבּוֹר לָרוּץ אֹֽרַח׃
6 ಆಕಾಶದ ಒಂದು ಕಡೆಯಿಂದ ಹೊರಟು ಮತ್ತೊಂದು ಕಡೆಗೆ ಬರುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
מִקְצֵה הַשָּׁמַיִם ׀ מֽוֹצָאוֹ וּתְקוּפָתוֹ עַל־קְצוֹתָם וְאֵין נִסְתָּר מֵֽחַמָּתוֹ׃
7 ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
תּוֹרַת יְהוָה תְּמִימָה מְשִׁיבַת נָפֶשׁ עֵדוּת יְהוָה נֶאֱמָנָה מַחְכִּימַת פֶּֽתִי׃
8 ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
פִּקּוּדֵי יְהוָה יְשָׁרִים מְשַׂמְּחֵי־לֵב מִצְוַת יְהוָה בָּרָה מְאִירַת עֵינָֽיִם׃
9 ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.
יִרְאַת יְהוָה ׀ טְהוֹרָה עוֹמֶדֶת לָעַד מִֽשְׁפְּטֵי־יְהוָה אֱמֶת צָֽדְקוּ יַחְדָּֽו׃
10 ೧೦ ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.
הַֽנֶּחֱמָדִים מִזָּהָב וּמִפַּז רָב וּמְתוּקִים מִדְּבַשׁ וְנֹפֶת צוּפִֽים׃
11 ೧೧ ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.
גַּֽם־עַבְדְּךָ נִזְהָר בָּהֶם בְּשָׁמְרָם עֵקֶב רָֽב׃
12 ೧೨ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.
שְׁגִיאוֹת מִֽי־יָבִין מִֽנִּסְתָּרוֹת נַקֵּֽנִי׃
13 ೧೩ ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.
גַּם מִזֵּדִים ׀ חֲשֹׂךְ עַבְדֶּךָ אַֽל־יִמְשְׁלוּ־בִי אָז אֵיתָם וְנִקֵּיתִי מִפֶּשַֽׁע רָֽב׃
14 ೧೪ ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.
יִֽהְיוּ לְרָצוֹן ׀ אִמְרֵי־פִי וְהֶגְיוֹן לִבִּי לְפָנֶיךָ יְהוָה צוּרִי וְגֹאֲלִֽי׃

< ಕೀರ್ತನೆಗಳು 19 >