< ಕೀರ್ತನೆಗಳು 21 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.
大卫的诗,交与伶长。 耶和华啊,王必因你的能力欢喜; 因你的救恩,他的快乐何其大!
2 ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. (ಸೆಲಾ)
他心里所愿的,你已经赐给他; 他嘴唇所求的,你未尝不应允。 (细拉)
3 ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.
你以美福迎接他, 把精金的冠冕戴在他头上。
4 ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.
他向你求寿,你便赐给他, 就是日子长久,直到永远。
5 ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.
他因你的救恩大有荣耀; 你又将尊荣威严加在他身上。
6 ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.
你使他有洪福,直到永远, 又使他在你面前欢喜快乐。
7 ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.
王倚靠耶和华, 因至高者的慈爱必不摇动。
8 ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.
你的手要搜出你的一切仇敌; 你的右手要搜出那些恨你的人。
9 ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.
你发怒的时候,要使他们如在炎热的火炉中。 耶和华要在他的震怒中吞灭他们; 那火要把他们烧尽了。
10 ೧೦ ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.
你必从世上灭绝他们的子孙, 从人间灭绝他们的后裔。
11 ೧೧ ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.
因为他们有意加害于你; 他们想出计谋,却不能作成。
12 ೧೨ ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ.
你必使他们转背逃跑, 向他们的脸搭箭在弦。
13 ೧೩ ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.
耶和华啊,愿你因自己的能力显为至高! 这样,我们就唱诗,歌颂你的大能。

< ಕೀರ್ತನೆಗಳು 21 >