< ಕೀರ್ತನೆಗಳು 24 >

1 ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ. 2 ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ. 3 ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು? 4 ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, 5 ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. 6 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. (ಸೆಲಾ) 7 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. 8 ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ. 9 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. 10 ೧೦ ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. (ಸೆಲಾ)

< ಕೀರ್ತನೆಗಳು 24 >