< ಕೀರ್ತನೆಗಳು 28 >

1 ದಾವೀದನ ಕೀರ್ತನೆ. ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.
לְדָוִ֡ד אֵ֘לֶ֤יךָ יְהוָ֨ה ׀ אֶקְרָ֗א צוּרִי֮ אַֽל־תֶּחֱרַ֪שׁ מִ֫מֶּ֥נִּי פֶּן־תֶּֽחֱשֶׁ֥ה מִמֶּ֑נִּי וְ֝נִמְשַׁ֗לְתִּי עִם־י֥וֹרְדֵי בֽוֹר׃
2 ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು.
שְׁמַ֤ע ק֣וֹל תַּ֭חֲנוּנַי בְּשַׁוְּעִ֣י אֵלֶ֑יךָ בְּנָשְׂאִ֥י יָ֝דַ֗י אֶל־דְּבִ֥יר קָדְשֶֽׁךָ׃
3 ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು.
אַל־תִּמְשְׁכֵ֣נִי עִם־רְשָׁעִים֮ וְעִם־פֹּ֪עֲלֵ֫י אָ֥וֶן דֹּבְרֵ֣י שָׁ֭לוֹם עִם־רֵֽעֵיהֶ֑ם וְ֝רָעָ֗ה בִּלְבָבָֽם׃
4 ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.
תֶּן־לָהֶ֣ם כְּפָעֳלָם֮ וּכְרֹ֪עַ מַֽעַלְלֵ֫יהֶ֥ם כְּמַעֲשֵׂ֣ה יְ֭דֵיהֶם תֵּ֣ן לָהֶ֑ם הָשֵׁ֖ב גְּמוּלָ֣ם לָהֶֽם׃
5 ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.
כִּ֤י לֹ֤א יָבִ֡ינוּ אֶל־פְּעֻלֹּ֣ת יְ֭הוָה וְאֶל־מַעֲשֵׂ֣ה יָדָ֑יו יֶ֝הֶרְסֵ֗ם וְלֹ֣א יִבְנֵֽם׃
6 ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; ಆತನಿಗೆ ಸ್ತೋತ್ರವಾಗಲಿ.
בָּר֥וּךְ יְהוָ֑ה כִּי־שָׁ֝מַע ק֣וֹל תַּחֲנוּנָֽי׃
7 ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
יְהוָ֤ה ׀ עֻזִּ֥י וּמָגִנִּי֮ בּ֤וֹ בָטַ֥ח לִבִּ֗י וְֽנֶ֫עֱזָ֥רְתִּי וַיַּעֲלֹ֥ז לִבִּ֑י וּֽמִשִּׁירִ֥י אֲהוֹדֶֽנּוּ׃
8 ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.
יְהוָ֥ה עֹֽז־לָ֑מוֹ וּמָ֘ע֤וֹז יְשׁוּע֖וֹת מְשִׁיח֣וֹ הֽוּא׃
9 ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.
הוֹשִׁ֤יעָה ׀ אֶת־עַמֶּ֗ךָ וּבָרֵ֥ךְ אֶת־נַחֲלָתֶ֑ךָ וּֽרְעֵ֥ם וְ֝נַשְּׂאֵ֗ם עַד־הָעוֹלָֽם׃

< ಕೀರ್ತನೆಗಳು 28 >