< ಕೀರ್ತನೆಗಳು 41 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.
聖歌隊の指揮者によってうたわせたダビデの歌 貧しい者をかえりみる人はさいわいである。主はそのような人を悩みの日に救い出される。
2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
主は彼を守って、生きながらえさせられる。彼はこの地にあって、さいわいな者と呼ばれる。あなたは彼をその敵の欲望にわたされない。
3 ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.
主は彼をその病の床でささえられる。あなたは彼の病む時、その病をことごとくいやされる。
4 ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು.
わたしは言った、「主よ、わたしをあわれみ、わたしをいやしてください。わたしはあなたにむかって罪を犯しました」と。
5 ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ.
わたしの敵はわたしをそしって言う、「いつ彼は死に、その名がほろびるであろうか」と。
6 ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.
そのひとりがわたしを見ようとして来るとき、彼は偽りを語り、その心によこしまを集め、外に出てはそれを言いふらす。
7 ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ.
すべてわたしを憎む者はわたしについて共にささやき、わたしのために災を思いめぐらす。
8 “ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
彼らは言う、「彼に一つのたたりがつきまとったから、倒れ伏して再び起きあがらないであろう」と。
9 ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.
わたしの信頼した親しい友、わたしのパンを食べた親しい友さえもわたしにそむいてくびすをあげた。
10 ೧೦ ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.
しかし主よ、わたしをあわれみ、わたしを助け起してください。そうすればわたしは彼らに報い返すことができます。
11 ೧೧ ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.
わたしの敵がわたしに打ち勝てないことによって、あなたがわたしを喜ばれることをわたしは知ります。
12 ೧೨ ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.
あなたはわたしの全きによって、わたしをささえ、とこしえにみ前に置かれます。
13 ೧೩ ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.
イスラエルの神、主はとこしえからとこしえまでほむべきかな。アァメン、アァメン。

< ಕೀರ್ತನೆಗಳು 41 >