< ಕೀರ್ತನೆಗಳು 43 >

1 ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.
神啊,求你伸我的冤, 向不虔诚的国为我辨屈; 求你救我脱离诡诈不义的人。
2 ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಏಕೆ ನನ್ನನ್ನು ತಳ್ಳಿಬಿಟ್ಟೆ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?
因为你是赐我力量的 神,为何丢弃我呢? 我为何因仇敌的欺压时常哀痛呢?
3 ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ.
求你发出你的亮光和真实,好引导我, 带我到你的圣山,到你的居所!
4 ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
我就走到 神的祭坛, 到我最喜乐的 神那里。 神啊,我的 神, 我要弹琴称赞你!
5 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
我的心哪,你为何忧闷? 为何在我里面烦躁? 应当仰望 神,因我还要称赞他。 他是我脸上的光荣,是我的 神。

< ಕೀರ್ತನೆಗಳು 43 >