< ಕೀರ್ತನೆಗಳು 45 >

1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋಶನ್ನೀಮ್ ಎಂಬ ರಾಗದ ಮೇಲೆ ಹಾಡತಕ್ಕದ್ದು; ಕೋರಹೀಯರ ಪದ್ಯ; ಪ್ರೇಮಗೀತೆ. ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.
לַמְנַצֵּ֣חַ עַל־שֹׁ֭שַׁנִּים לִבְנֵי־קֹ֑רַח מַ֝שְׂכִּ֗יל שִׁ֣יר יְדִידֹֽת׃ רָ֘חַ֤שׁ לִבִּ֨י ׀ דָּ֘בָ֤ר טֹ֗וב אֹמֵ֣ר אָ֭נִי מַעֲשַׂ֣י לְמֶ֑לֶךְ לְ֝שֹׁונִ֗י עֵ֤ט ׀ סֹופֵ֬ר מָהִֽיר׃
2 ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.
יָפְיָפִ֡יתָ מִבְּנֵ֬י אָדָ֗ם ה֣וּצַק חֵ֭ן בְּשְׂפְתֹותֶ֑יךָ עַל־כֵּ֤ן בֵּֽרַכְךָ֖ אֱלֹהִ֣ים לְעֹולָֽם׃
3 ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.
חֲגֹֽור־חַרְבְּךָ֣ עַל־יָרֵ֣ךְ גִּבֹּ֑ור הֹ֝ודְךָ֗ וַהֲדָרֶֽךָ׃
4 ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.
וַהֲדָ֬רְךָ֨ ׀ צְלַ֬ח רְכַ֗ב עַֽל־דְּבַר־אֱ֭מֶת וְעַנְוָה־צֶ֑דֶק וְתֹורְךָ֖ נֹורָאֹ֣ות יְמִינֶֽךָ׃
5 ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.
חִצֶּ֗יךָ שְׁנ֫וּנִ֥ים עַ֭מִּים תַּחְתֶּ֣יךָ יִפְּל֑וּ בְּ֝לֵ֗ב אֹויְבֵ֥י הַמֶּֽלֶךְ׃
6 ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.
כִּסְאֲךָ֣ אֱ֭לֹהִים עֹולָ֣ם וָעֶ֑ד שֵׁ֥בֶט מִ֝ישֹׁ֗ר שֵׁ֣בֶט מַלְכוּתֶֽךָ׃
7 ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.
אָהַ֣בְתָּ צֶּדֶק֮ וַתִּשְׂנָ֫א רֶ֥שַׁע עַל־כֵּ֤ן ׀ מְשָׁחֲךָ֡ אֱלֹהִ֣ים אֱ֭לֹהֶיךָ שֶׁ֥מֶן שָׂשֹׂ֗ון מֵֽחֲבֵרֶֽיךָ׃
8 ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.
מֹר־וַאֲהָלֹ֣ות קְ֭צִיעֹות כָּל־בִּגְדֹתֶ֑יךָ מִֽן־הֵ֥יכְלֵי שֵׁ֝֗ן מִנִּ֥י שִׂמְּחֽוּךָ׃
9 ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು.
בְּנֹ֣ות מְ֭לָכִים בְּיִקְּרֹותֶ֑יךָ נִצְּבָ֥ה שֵׁגַ֥ל לִֽ֝ימִינְךָ֗ בְּכֶ֣תֶם אֹופִֽיר׃
10 ೧೦ ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.
שִׁמְעִי־בַ֣ת וּ֭רְאִי וְהַטִּ֣י אָזְנֵ֑ךְ וְשִׁכְחִ֥י עַ֝מֵּ֗ךְ וּבֵ֥ית אָבִֽיךְ׃
11 ೧೧ ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು.
וְיִתְאָ֣ו הַמֶּ֣לֶךְ יָפְיֵ֑ךְ כִּי־ה֥וּא אֲ֝דֹנַ֗יִךְ וְהִשְׁתַּֽחֲוִי־לֹֽו׃
12 ೧೨ ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.
וּבַֽת־צֹ֨ר ׀ בְּ֭מִנְחָה פָּנַ֥יִךְ יְחַלּ֗וּ עֲשִׁ֣ירֵי עָֽם׃
13 ೧೩ ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.
כָּל־כְּבוּדָּ֣ה בַת־מֶ֣לֶךְ פְּנִ֑ימָה מִֽמִּשְׁבְּצֹ֖ות זָהָ֣ב לְבוּשָֽׁהּ׃
14 ೧೪ ಆಕೆಯು ಬೂಟೇದಾರಿ ವಸ್ತ್ರಗಳನ್ನು ಧರಿಸಿಕೊಂಡು, ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು.
לִרְקָמֹות֮ תּוּבַ֪ל לַ֫מֶּ֥לֶךְ בְּתוּלֹ֣ות אַ֭חֲרֶיהָ רֵעֹותֶ֑יהָ מ֖וּבָאֹ֣ות לָֽךְ׃
15 ೧೫ ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು, ಅರಮನೆಯೊಳಗೆ ಪ್ರವೇಶಿಸುವರು.
תּ֖וּבַלְנָה בִּשְׂמָחֹ֣ת וָגִ֑יל תְּ֝בֹאֶ֗ינָה בְּהֵ֣יכַל מֶֽלֶךְ׃
16 ೧೬ ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು; ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ.
תַּ֣חַת אֲ֭בֹתֶיךָ יִהְי֣וּ בָנֶ֑יךָ תְּשִׁיתֵ֥מֹו לְ֝שָׂרִ֗ים בְּכָל־הָאָֽרֶץ׃
17 ೧೭ ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.
אַזְכִּ֣ירָה שִׁ֭מְךָ בְּכָל־דֹּ֣ר וָדֹ֑ר עַל־כֵּ֥ן עַמִּ֥ים יְ֝הֹודֻ֗ךָ לְעֹלָ֥ם וָעֶֽד׃

< ಕೀರ್ತನೆಗಳು 45 >