< ಕೀರ್ತನೆಗಳು 5 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ. ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ.
Al maestro del coro. Per flauti. Salmo. Di Davide. Porgi l'orecchio, Signore, alle mie parole: intendi il mio lamento.
2 ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು.
Ascolta la voce del mio grido, o mio re e mio Dio, perché ti prego, Signore.
3 ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.
Al mattino ascolta la mia voce; fin dal mattino t'invoco e sto in attesa.
4 ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.
Tu non sei un Dio che si compiace del male; presso di te il malvagio non trova dimora;
5 ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.
gli stolti non sostengono il tuo sguardo. Tu detesti chi fa il male,
6 ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.
fai perire i bugiardi. Il Signore detesta sanguinari e ingannatori.
7 ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.
Ma io per la tua grande misericordia entrerò nella tua casa; mi prostrerò con timore nel tuo santo tempio.
8 ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.
Signore, guidami con giustizia di fronte ai miei nemici; spianami davanti il tuo cammino.
9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.
Non c'è sincerità sulla loro bocca, è pieno di perfidia il loro cuore; la loro gola è un sepolcro aperto, la loro lingua è tutta adulazione.
10 ೧೦ ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.
Condannali, o Dio, soccombano alle loro trame, per tanti loro delitti disperdili, perché a te si sono ribellati.
11 ೧೧ ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.
Gioiscano quanti in te si rifugiano, esultino senza fine. Tu li proteggi e in te si allieteranno quanti amano il tuo nome.
12 ೧೨ ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.
Signore, tu benedici il giusto: come scudo lo copre la tua benevolenza.

< ಕೀರ್ತನೆಗಳು 5 >