< ಕೀರ್ತನೆಗಳು 50 >

1 ಆಸಾಫನ ಕೀರ್ತನೆ. ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.
Psalam. Asafov. Bog nad bogovima, Jahve, govori i zove zemlju od izlaza sunčeva do zalaza.
2 ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.
Sa Siona predivnog Bog zablista:
3 ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.
Bog naš dolazi i ne šuti. Pred njim ide oganj što proždire, oko njega silna bjesni oluja.
4 ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.
On zove nebesa odozgo i zemlju da sudi narodu svojemu:
5 “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ.
“Saberite mi sve pobožnike koji žrtvom Savez sa mnom sklopiše!”
6 ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. (ಸೆಲಾ)
Nebesa objavljuju pravednost njegovu: on je Bog sudac!
7 ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.
“Slušaj, narode moj, ja ću govoriti, o Izraele, svjedočit ću protiv tebe: ja, Bog - Bog tvoj!
8 ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
Ne korim te zbog žrtava tvojih - paljenice su tvoje svagda preda mnom.
9 ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.
Neću od doma tvog' uzet junca, ni jaraca iz tvojih torova:
10 ೧೦ ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.
tÓa moje su sve životinje šumske, tisuće zvjeradi u gorama mojim.
11 ೧೧ ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.
Znam sve ptice nebeske, moje je sve što se miče u poljima.
12 ೧೨ ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.
Kad bih ogladnio, ne bih ti rekao, jer moja je zemlja i sve što je ispunja.
13 ೧೩ ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?
Zar da ja jedem meso bikova ili da pijem krv jaraca?
14 ೧೪ ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
Prinesi Bogu žrtvu zahvalnu, ispuni Višnjemu zavjete svoje!
15 ೧೫ ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
I zazovi me u dan tjeskobe: oslobodit ću te, a ti ćeš me slaviti.”
16 ೧೬ ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
A grešniku Bog progovara: “Što tumačiš naredbe moje, što mećeš u usta Savez moj?
17 ೧೭ ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
Ti, komu stega ne prija, te riječi moje iza leđa bacaš?
18 ೧೮ ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.
Kad tata vidiš, s njime se bratimiš i družiš se s preljubnicima.
19 ೧೯ ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ.
Svoja si usta predao pakosti, a jezik ti plete prijevare.
20 ೨೦ ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.
U društvu na brata govoriš i kaljaš sina matere svoje.
21 ೨೧ ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.
Sve si to činio, a ja da šutim? Zar misliš da sam ja tebi sličan? Pokarat ću te i stavit ću ti sve to pred oči.”
22 ೨೨ ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.
Shvatite ovo svi vi koji Boga zaboraviste, da vas ne pograbim i nitko vas spasiti neće.
23 ೨೩ ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”
Pravo me štuje onaj koji prinosi žrtvu zahvalnu: i onomu koji hodi stazama pravim - njemu ću pokazati spasenje svoje.

< ಕೀರ್ತನೆಗಳು 50 >