< ಕೀರ್ತನೆಗಳು 56 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೋನತ್ ಎಲೆಮ್ ರೆಹೋಕೀಮ್ ಎಂಬ ರಾಗ; ದಾವೀದನು ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ. ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ. 2 ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು. 3 ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು. 4 ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು? 5 ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ. 6 ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ. 7 ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು. 8 ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ. 9 ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ. 10 ೧೦ ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. 11 ೧೧ ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು? 12 ೧೨ ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು. 13 ೧೩ ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.

< ಕೀರ್ತನೆಗಳು 56 >